ತಂಬಾಕಿನಿಂದಾಗುವ ದುಷ್ಪರಿಣಾಮದ ಕುರಿತು ತರಬೇತಿ ಕಾರ್ಯಾ ಗಾರ

ಬೆಳಗಾವಿ, 22: ತಂಬಾಕು ಹಾಗೂ ತಂಬಾಕು ಉತ್ಪನ್ನಗಳ ಸೇವನೆಯಿಂದಾಗಿ ಶರೀರದ ಮೇಲೆ ಅನೇಕ ದುಷ್ಪರಿಣಾಮಗಳು ಉಂಟಾಗುತ್ತವೆ ಎಂದು ಕಾರ್ಖಾ ನೆ ಸಹಾಯಕ ನಿರ್ದೇ ಶಕರು ಕಾಖರ್ಾನೆಗಳು ಬಾಯ್ಲರಗಳು, ಕೈಗಾರಿಕಾ ಸುರಕ್ಷತೆ ಹಾಗೂ ಸ್ವಸ್ಥೆ ಇಲಾಖೆ ಭಾರತಿ ಮಗದುಮ ಅವರು ಅಭಿಪ್ರಾಯ ವ್ಯಕ್ತಪಡಿಸಿದರು.

ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ, ವಾತರ್ಾ ಇಲಾಖೆ, ಪೋಲಿಸ ಇಲಾಖೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಬೆಳಗಾವಿ ಹಾಗೂ ಜಿಲ್ಲಾ ತಂಬಾಕು ನಿಯಂತ್ರಣ ಕೋಶ, ಬ್ಲೂಂಬರ್ಗ ಇನಿಷಿಯೆಟಿವ್ ಯೋಜನೆ ಅಡಿಯಲ್ಲಿ ಎನ್.ಎಸ್.ಎಸ ಸಂಯೋಜಕರಿಗೆ, ತಂಬಾಕು ಹಾಗೂ ತಂಬಾಕಿನಿಂದಾಗುವ ದುಷ್ಪರಿಣಾಮ ಕುರಿತು ಜುಲೈ 20 ರಂದು ಚಿಕ್ಕೋಡಿಯ ತಾಲೂಕಾ ಆರೋಗ್ಯಾಧಿಕಾರಿಗಳ ಕಛೇರಿಯಲ್ಲಿ ತರಬೇತಿ ಕಾಯರ್ಾಗಾರವನ್ನು ಉದ್ಘಾಟಿಸಿ ಮಾತನಾಡಿದರು. 

ತಂಬಾಕು ಹಾಗೂ ತಂಬಾಕಿನ ಉತ್ಪನ್ನಗಳಿಂದ ಮನುಷ್ಯನ ಆರೋಗ್ಯದ ಮೇಲೆ ಹಲುವಾರು ರೀತಿಯ ದುಷ್ಪರಿಣಾಮ ಬಿರುತ್ತವೆ ಹಾಗೂ ತಂಬಾಕಿನಲ್ಲಿ ವಿವಿಧ ರೀತಿಯ ರಾಸಾಯನಿಕ ಆಂಶಗಳಿರುತ್ತವೆ ಹೀಗಾಗಿ ಸಾರ್ವನಿಕರು ತಂಬಾಕು ಸೇವನೆ ತ್ಯಜಿಸಬೇಕು ತಿಳಿಸಿದರು.

ಕಾರ್ಯಕ್ರಮಕ್ಕೆ ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ ರಾಜ್ಯ ತಂಬಾಕು ನಿಯಂತ್ರಣ ಘಟಕ ಬೆಳಗಾವಿ ವಿಭಾಗೀಯ ಸಂಯೋಜಕರು ಮಹಾಂತೇಶ ಉಳ್ಳಾಗಡ್ಡಿ ಇವರು ತಂಬಾಕಿನ ಕಾನೂನು ಅರಿವು ಕೋಟ್ಪಾ-2003 ರ ಬಗ್ಗೆ ಸೆಕ್ಷನ್-4 ರ ಪ್ರಕಾರ ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ನಿಷೇಧ ಮಾಡಲಾಗಿದೆ ಎಂದರು.

ಈ ಕಾನೂನು ಉಲ್ಲಂಘಿಸಿದ ವ್ಯಕ್ಕಿಗೆ 200 ದಂಡ ವಿಧಿಸಲಾಗುವುದು. ಸೆಕ್ಷನ್-5 ಪ್ರಕಾರ ತಂಬಾಕು ಉತ್ಪನ್ನಗಳ ನೇರ  ಹಾಗೂ ಪರೋಕ್ಷ ಜಾಹೀರಾತು ನಿಷೇದ. ಸೆಕ್ಷನ್-6ರ ಪ್ರಕಾರ  ತಂಬಾಕು ಉತ್ಪನ್ನಗಳ ಅಪ್ರಾಪ್ತ ವಯಸ್ಕರಿಗೆ ನಿಯಂತ್ರಣ ಮಾಡುವುದು ಹಾಗೂ ಸೆಕ್ಷನ್ -6(ಬಿ)  ಪ್ರಕಾರ ಶಿಕ್ಷಣ ಸಂಸ್ಥೆಗಳ 100 ಮೀಟರ ಒಳಗೆ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುವುದು ಶಿಕ್ಷಾರ್ಹ ಅಪರಾಧ. 

ಸೆಕ್ಷನ್-7 ಪ್ರಕಾರ ಸಿಗರೇಟ ಮತ್ತು ಇತರ ತಂಬಾಕು ಉತ್ಪನ್ನಗಳ ಮೇಲೆ ನಿದರ್ಿಷ್ಟ ಆರೋಗ್ಯ ಎಚ್ಚರಿಕೆಗಳ ಸಂದೇಶಗಳಿಲ್ಲದೆ ಮಾರಾಟ ಮಾಡುವುದು ಶಿಕ್ಷಾರ್ಹ ಅಪರಾಧ ಎಂದು ತಿಳಿಸಿ ಕೋಟ್ಪಾ ಕಾಯ್ದೆಯ ಬಗ್ಗೆ ಸವಿಸ್ತಾರವಾಗಿ ತಿಳಿಸಿದರು.

ಈ ಸಂದರ್ಭದಲ್ಲಿ ತಾಲೂಕಾ ಆರೋಗ್ಯಾಧಿಕಾರಿಗಳು ಡಾ. ವ್ಹಿ.ವ್ಹಿ ಶಿಂದೆ, ಜಿಲ್ಲಾ ಸಮೀಕ್ಷಣಾಧಿಕಾರಿಗಳು ಹಾಗೂ ತಂಬಾಕು ನಿಯಂತ್ರಣಾಧಿಕಾರಿಗಳಾದ ಡಾ. ಬಿ.ಎನ್ ತುಕ್ಕಾರ, ದಂತ ವೈದ್ಯರಾದ ಡಾ. ದೀಪಾ ಮಗದುಮ, ಎನ್,ಎಸ್,ಎಸ್ ಕೋ-ಆಡರ್ಿನೆಟರ್ಸ್, ರೆಡ್ಕ್ರಾಸ್ ಪದಾಧಿಕಾರಿಗಳು, ರೊಟರಿಕ್ಲಬ್ ಪದಾಧಿಕಾರಿಗಳು ಮತ್ತು ಎಲ್ಲ ಸದಸ್ಯರು ಕಾರ್ಯಕ್ರಮದಲ್ಲಿ ಹಾಜರಿದ್ದರು.

  ಜಿಲ್ಲಾ ತಂಬಾಕು ನಿಯಂತ್ರಣ ಕೋಶ ಸಮಾಜ ಕಾರ್ಯಕತರ್ೆಯಾದ ಕವಿತಾ ರಾಜನ್ನವರ ನಿರೂಪಿಸಿದರು. ಜಿಲ್ಲಾ ಸಲಹೆಗಾರರು ಡಾ. ಶ್ವೇತಾ ಪಾಟೀಲ ವಂದಿಸಿರು.