ನೀರು ಬಳಕೆದಾರರ ಸಹಕಾರ ಸಂಘಗಳ ಪುನಃಶ್ಚೇತನ ತರಬೇತಿ
Training on revitalization of water user cooperatives
ನೀರು ಬಳಕೆದಾರರ ಸಹಕಾರ ಸಂಘಗಳ ಪುನಃಶ್ಚೇತನ ತರಬೇತಿ
ಧಾರವಾಡ 14: ಜಲ ಮತ್ತು ನೆಲ ನಿರ್ವಹಣೆ ಸಂಸ್ಥೆ (ವಾಲ್ಮಿ), ಧಾರವಾಡ ವತಿಯಿಂದ ಭದ್ರಾ ಅಚ್ಚುಕಟ್ಟು ಪ್ರದೇಶದ ದಾವಣಗೆರೆ ಜಿಲ್ಲೆಯ, ದಾವಣಗೆರೆ ತಾಲೂಕಿನ ಕೈದಾಳೆ ಗ್ರಾಮದಲ್ಲಿ ನೀರು ಬಳಕೆದಾರರ ಸಹಕಾರ ಸಂಘಗಳ ಪದಾಧಿಕಾರಿಗಳಿಗೆ ಹಾಗೂ ರೈತರಿಗೆ ಗ್ರಾಮ ಮಟ್ಟದ ತರಬೇತಿಯನ್ನು ದಿನಾಂಕ: 10-7-2025 ರಂದು ಹಮ್ಮಿಕೊಳ್ಳಲಾಗಿತ್ತು. ಈ ತರಬೇತಿಯ ಉದ್ಘಾಟನಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಧಾರವಾಡದ ಜಲ ಮತ್ತು ನೆಲ ನಿರ್ವಹಣೆ ಸಂಸ್ಥೆಯ ನಿರ್ದೇಶಕರಾದ ಡಾ. ಗೀರೀಶ ಎನ್. ಮರಡ್ಡಿಯವರು ಜಲಾಶಯದ ನೀರಿನ ಸಮರ್ಕ ಬಳಕೆಯಲ್ಲಿ ನೀರು ಬಳಕೆದಾರರ ಸಹಕಾರ ಸಂಘಗಳ ಪಾತ್ರ ಅತೀ ಮುಖ್ಯವಾದದು ಎಂದು ತಿಳಿಸಿದರು. ಅಲ್ಲದೇ ಅಚ್ಚುಕಟ್ಟು ಪ್ರದೇಶದಲ್ಲಿ ಕೃಷಿ ತಾಂತ್ರಿಕತೆಗಳ ಕುರಿತು ಮಾಹಿತಿ ನೀಡಿದರು. ಪದೇ ಪದೇ ಭತ್ತವನ್ನು ಬೆಳೆಯದೇ, ಅಂದರೆ ಏಕ ಬೆಳೆ ಪದ್ಧತಿಯನ್ನು ಬಿಟ್ಟು ಬೆಳೆ ಪರಿವರ್ತನೆ ಮಾಡಿ ಪರ್ಯಾಯ ದ್ವಿದಳ ಧಾನ್ಯಗಳ ಬೆಳೆಗಳನ್ನು ಬೆಳೆದು, ಮಣ್ಣಿನ ಫಲವತ್ತತೆ ಹೆಚ್ಚಿಸಲು ಕ್ರಮ ವಹಿಸಬೇಕೆಂದು ರೈತ ಬಾಂಧವರಿಗೆ ಕಿವಿ ಮಾತು ಹೇಳಿದರು. ಇದರೊಂದಿಗೆ ಮಣ್ಣು ಮರೀಕ್ಷೆ ಮಹತ್ವವನ್ನು ತಿಳಿಸಿದರು. ಹಾಗೂ ಮಣ್ಣು ಮಾದರಿ ತೆಗೆಯುವ ವಿಧಾನಗಳ ಬಗ್ಗೆ ರೈತರಿಗೆ ಮಾಹಿತಿ ನೀಡಿದರು. ಭತ್ತದಲ್ಲಿ ನೇರ ಬಿತ್ತನೆ ಪದ್ಧತಿ ಅಳವಡಿಸಿಕೊಳ್ಳುವಂತೆ ರೈತರಿಗೆ ಮಾಹಿತಿ ನೀಡಿದರು ಹಾಗೂ ಅಚ್ಚುಕಟ್ಟು ಪ್ರದೇಶದ ಎಲ್ಲ ರೈತರಿಗೆ ಮಣ್ಣು ಪರೀಕ್ಷೆ ಆಧಾರಿತ ಸಮಗ್ರ ಕೃಷಿ ಮಾಡಿ, ಆರ್ಥಿಕವಾಗಿ ಅಭಿವೃದ್ಧಿ ಹೊಂದಲು ಕರೆ ನೀಡಿದರು. ನಂತರ ಜಲ ಮತ್ತು ನೆಲ ನಿರ್ವಹಣೆ ಸಂಸ್ಥೆಯ ಪ್ರಾಧ್ಯಾಪಕರಾದ ಶ್ರೀ ಬಿ. ವೈ. ಬಂಡಿವಡ್ಡರ ಇವರು ನೀರು ಬಳಕೆದಾರರ ಸಹಕಾರ ಸಂಘಗಳ ಬಲವರ್ಧನೆಗೆ ಮಾರ್ಗೋಪಾಯಗಳು, ನೀರಿನ ಕರ ಆಕರಣೆ ಹಾಗೂ ಸಂಗ್ರಹಣೆ ಕುರಿತು ಮಾಹಿತಿ ನೀಡಿದರು. ಗಂಗಪ್ಪ ಗೌಡ ಬಿರಾದಾರ, ಮುಖ್ಯಸ್ಥರು, ಕೃಷಿ ವಿಸ್ತರಣಾ ಘಟಕ, ಕತ್ತಲಗೇರೆ ಇವರು ಮಾತನಾಡುತ್ತಾ ಭತ್ತದ ಬೆಳೆಯಲ್ಲಿ ನೀರು ನಿರ್ವಹಣೆ, ರೋಗ ಮತ್ತು ಕೀಟಗಳ ನಿರ್ವಹಣೆ ಹಾಗೂ ಗದ್ದೆಯಲ್ಲಿ ಹಸಿರೆಲೆ ಗೊಬ್ಬರದ ಬೆಳೆಗಳನ್ನು ಬೆಳೆದು ಮಣ್ಣಿನ ಫಲವತ್ತತೆ ಹೆಚ್ಚಿಸುವ ವಿಧಾನಗಳ ಬಗ್ಗೆ ಉಪನ್ಯಾಸ ನೀಡಿದರು. ಅಲ್ಲದೇ ಅಡಿಕೆ ಬೆಳೆಯಲ್ಲಿ ಕಾಂಪೋಸ್ಟ ಗೊಬ್ಬರ ತಯಾರಿಕೆ ವಿಧಾನ, ಅಂತರ ಬೆಳೆ ಪದ್ಧತಿ ಹಾಗೂ ರೋಗ, ಕೀಟಗಳ ನಿರ್ವಹಣೆ ಕುರಿತು ಮಾಹಿತಿ ನೀಡಿದರು. ಪ್ರದೀಪ ದೇವರಮನಿ, ಸಹ ಪ್ರಾಧ್ಯಾಪಕರು, ವಾಲ್ಮಿ, ಧಾರವಾಡ ಇವರು ಮಾತನಾಡುತ್ತಾ, ನೀರು ಬಳಕೆದಾರರ ಸಹಕಾರ ಸಂಘಗಳ ಆಡಳಿತ ನಿರ್ವಹಣೆ, ಪದಾಧಿಕಾರಿಗಳ ಹಾಗೂ ಸದಸ್ಯರ ಕರ್ತವ್ಯಗಳು ಮತ್ತು ಜವಾಬ್ದಾರಿಗಳ ಬಗ್ಗೆ ಮಾಹಿತಿ ನೀಡಿದರು. ಇದಲ್ಲದೆ ನೀರು ಬಳಕೆದಾರರ ಸಹಕಾರ ಸಂಘಗಳ ಆರ್ಥಿಕ ಬಲವರ್ಧನೆಗೆ ಕಾಡಾ ಇಲಾಖೆಯಿಂದ ಇರುವ ಸರ್ಕಾರದ ಸೌಲತ್ತುಗಳ ಬಗ್ಗೆ ಮಾಹಿತಿ ನೀಡಿದರು. ಹಾಗೂ ಈ ಸೌಲತ್ತುಗಳನ್ನು ಪಡೆದು ಅಭಿವೃದ್ಧಿಹೊಂದಲು ತಿಳಿಸಿದರು. ಈ ತರಬೇತಿ ಕಾರ್ಯಕ್ರಮದಲ್ಲಿ ಜಿ. ಭೀಮಾನಾಯ್ಕ, ಪ್ರಾಧ್ಯಾಪಕರು, ವಾಲ್ಮಿ, ಧಾರವಾಡ ಇವರು ಭಾಗವಹಿಸಿ ಎಲ್ಲರಿಗೂ ಸ್ವಾಗತಿಸಿದರು ಹಾಗೂ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಕಾರ್ಯಕ್ರಮದಲ್ಲಿ ನಾಗರಾಜ ತಹಶೀಲ್ದಾರ, ಸಹಾಯಕ ಪ್ರಾಧ್ಯಾಪಕರು, ವಾಲ್ಮಿ, ಧಾರವಾಡ ಇವರು ಭಾಗವಹಿಸಿ ಕಾರ್ಯಕ್ರಮ ನಿರೂಪಣೆ ಮತ್ತು ಎಲ್ಲರಿಗೂ ವಂದನಾರೆ್ಣ ಮಾಡಿದರು.
ಕಾರ್ಯಕ್ರಮದಲ್ಲಿ ಕೈದಾಳೆ ಗ್ರಾಮದ ನೀ.ಬ.ಸ.ಸಂಘದ ಅಧ್ಯಕ್ಷರಾದ ವೈ.ಟಿ. ಮಲ್ಲಿಕಾರ್ಜುನಪ್ಪ, ಉಪಾಧ್ಯಕ್ಷರಾದ ಸಿ. ವಾಸುದೇವ, ಕೈದಾಳೆ ಗ್ರಾಮ ಪಂಚಾಯತಿ ಅಧ್ಯಕ್ಷರಾದ ವೈ.ಕೆ. ಕೇಶವಮೂರ್ತಿ, ಕೈದಾಳೆ ಗ್ರಾಮದ ಮಾಜಿ ಸೈನಿಕರಾದ ಶ್ರೀ ಕೆ. ಆರ್. ಮಧುಸೂಧನ್ ಹಾಗೂ ಇತರರು ಭಾಗವಹಿಸಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 