ಆಹಾರ ಪದಾರ್ಥ ಜಿಲ್ಲಾಡಳಿತಕ್ಕೆ ಹಸ್ತಾಂತರ
ಹಾವೇರಿ: ಮೇ 26: ಸಮಾಜ ಕಲ್ಯಾಣ ಇಲಾಖೆ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯಡಿ ಜಿಲ್ಲೆಯಲ್ಲಿ ನಡೆಯುತ್ತಿರುವ ವಸತಿ ನಿಲಯ ಹಾಗೂ ವಸತಿ ಶಾಲೆಗಳಿಗೆ ಸಕರ್ಾರದಿಂದ ಬಿಡುಗಡೆಯಾದ ಆಹಾರ ಪದಾರ್ಥಗಳ ಪೈಕಿ ಉಳಿಕೆಯಾದ ಆಹಾರ ಪದಾರ್ಥಗಳನ್ನು ಜಿಲ್ಲಾಡಳಿತಕ್ಕೆ ಹಸ್ತಾಂತರಿಸಲಾಯಿತು.
ಲಾಕ್ಡೌನ್ ಕಾರಣ ವಷರ್ಾಂತ್ಯದಲ್ಲಿ ಉಳಿಕೆಯಾದ ಸಮಾಜ ಕಲ್ಯಾಣ ಇಲಾಖೆಯ 1500 ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ 100 ಆಹಾರ ಪದಾರ್ಥಗಳ ಕಿಟ್ಗಳನ್ನು ತಯಾರಿಸಿ ಜಿಲ್ಲಾಧಿಕಾರಿ ಕೃಷ್ಣ ಬಾಜಪೇಯಿ ಅವರಿಗೆ ಮಂಗಳವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಹಸ್ತಾಂತರಿಸಿದರು.
ಮೇ 21ರವರೆಗೆ ಜಿಲ್ಲೆಯ ಉಭಯ ಇಲಾಖೆಯ ವಿವಿಧ ವಸತಿ ನಿಲಯ ಹಾಗೂ ಸಕರ್ಾರಿ ವಸತಿ ಶಾಲೆಗಳಲ್ಲಿ ಉಳಿಕೆಯಾದ ವಿವಿಧ ಪದಾರ್ಥಗಳ ಒಳಗೊಂಡಂತೆ 1600 ಕಿಟ್ ತಯಾರಿಸಲಾಗಿದೆ.
ಈ ಕಿಟ್ಗಳಲ್ಲಿ ತೊಗರಿಬೇಳೆ, ಉಪ್ಪು, ಅವಲಕ್ಕಿ, ಅಡುಗೆ ಎಣ್ಣೆ, ಹೆಸರು ಕಾಳು, ಕಡ್ಲೆಕಾಳು, ಅಲಸಂದಿಕಾಳು, ರವೆ, ಸಕ್ಕರೆ, ಖಾರದಪುಡಿ, ಸಾಸಿವೆ, ಜೀರಿಗೆ ಹಾಗೂ ಅರಿಷಿಣಪುಡಿ ಒಳಗೊಂಡ 13 ವಿವಿಧ ಬಗೆಯ ಆಹಾರ ಸಾಮಗ್ರಿಗಳನ್ನೊಳಗೊಂಡಿದ್ದು, ಈ ಕಿಟ್ಗಳನ್ನು ಸಕರ್ಾರದ ಸೂಚನೆಯಂತೆ ಜಿಲ್ಲಾಡಳಿತಕ್ಕೆ ಹಸ್ತಾಂತರಿಸಲಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆ ಉಪನಿದರ್ೆಶಕಿ ಚೈತ್ರಾ ಅವರು ತಿಳಿಸಿದರು.
ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ನಾಗರಾಜ, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಉಪನಿದರ್ೆಶಕ ವಿನೋದಕುಮಾರ ಹೆಗ್ಗಳಗಿ ಇತರರು ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 