ಸಾರಿಗೆ ಸಚಿವರಾದ ರಾಮಲಿಂಗಾರೆಡ್ಡಿ ಅವರಿಂದ ಧಾರವಾಡದ ನೂತನ ನಗರ ಸಾರಿಗೆ ಬಸ್ ನಿಲ್ದಾಣ ಉದ್ಘಾಟನೆ
Transport Minister Ramalinga Reddy inaugurates new city transport bus stand in Dharwad
ಧಾರವಾಡ ನ.07: ಧಾರವಾಡ ಜಿಲ್ಲೆಯಲ್ಲಿ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯಿಂದ ಧಾರವಾಡದ ನೂತನ ನಗರ ಸಾರಿಗೆ ಬಸ್ ನಿಲ್ದಾಣವನ್ನು ಇಂದು (ನ.07) ಬೆಳಿಗ್ಗೆ ಸಾರಿಗೆ ಮತ್ತು ಮುಜರಾಯಿ ಸಚಿವರಾದ ರಾಮಲಿಂಗಾರೆಡ್ಡಿ ಹಾಗೂ ಕಾರ್ಮಿಕ ಇಲಾಖೆ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ ಎಸ್. ಲಾಡ್ ಅವರು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಕರ್ನಾಟಕ ವಿಧಾನ ಪರಿಷತ್ ಸರ್ಕಾರಿ ಮುಖ್ಯ ಸಚೇತಕ ಸಲೀಂ ಅಹ್ಮದ್, ಶಾಸಕರಾದ ಅರವಿಂದ ಚಂದ್ರಕಾಂತ ಬೆಲ್ಲದ, ಎಫ್.ಹೆಚ್.ಜಕ್ಕಪ್ಪನವರ, ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಎಸ್.ಆರ್.ಪಾಟೀಲ, ಹುಬ್ಬಳ್ಳಿ-ಧಾರವಾಡ ಮಹಾನಗರ ಮಹಾಪೌರರಾದ ಜ್ಯೋತಿ ಪಾಟೀಲ, ವಾ.ಕ.ರ.ಸಾ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕಿ ಪ್ರಿಯಾಂಗಾ ಎಂ., ಹುಬ್ಬಳ್ಳಿ ಧಾರವಾಡ ಮಹಾನಗರ ಪೊಲೀಸ್ ಆಯುಕ್ತ ಎನ್.ಶಶಿಕುಮಾರ, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭುವನೇಶ ಪಾಟೀಲ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಗುಂಜನ್ ಆರ್ಯ, ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಆಯುಕ್ತ ಡಾ. ರುದ್ರೇಶ.ಎಸ್.ಘಾಳಿ ಅವರು ಉಪಸ್ಥಿತರಿದ್ದರು.
ಧಾರವಾಡದ ನೂತನ ನಗರ ಸಾರಿಗೆ ಬಸ್ ನಿಲ್ದಾಣವು 26.00 ಗುಂಟೆ 44 ಅಣೆ (2806.06 ಚ.ಮೀ) ಕ್ಷೇತ್ರದಲ್ಲಿ ಕಟ್ಟದ ನೆಲಮಹಡಿಯು 1935.57 ಚ.ಮೀ., ಮೆಜನೈನ್ ಮಹಡಿಯು 607 ಚ.ಮೀ., ಮೊದಲನೇ ಮಹಡಿಯು 1949.00 ಚ.ಮೀ. ಹಾಗೂ ಟೇರೆಸ್ ಮಹಡಿ 153.40 ಚ.ಮೀ. ಒಟ್ಟು 4037.97 ಚ.ಮೀ ವಿಸ್ತೀರ್ಣದಲ್ಲಿ ನಿಲ್ದಾಣ ನಿರ್ಮಾಣವಾಗಿದೆ. ಈ ಯೋಜನೆಯ ಮೊತ್ತ 1311.00 ಲಕ್ಷಗಳಿದ್ದು, ಮಳೆಗಾಲ ಹೊರತುಪಡಿಸಿ 12 ತಿಂಗಳ ಕಾಲಾವಧಿಯಲ್ಲಿ ಪೂರ್ಣಗೊಳಿಸಲಾಗಿದೆ.
ಬಸ್ ನಿಲ್ದಾಣದಲ್ಲಿನ ಮೂಲಭೂತ ಸೌಲಭ್ಯಗಳು: ಬಸ್ ನಿಲ್ದಾಣದಲ್ಲಿ ಮಹಿಳೆಯರಿಗೆ ವಿಶ್ರಾಂತಿ ಗೃಹ, ಮಹಿಳೆಯರಿಗೆ ಹಾಗೂ ಪುರುಷರಿಗೆ ಪ್ರತ್ಯೇಕವಾದ ಶೌಚಾಲಯ, ಆವರಣದ ನೆಲಗಟ್ಟಣೆ, ಕಾಂಕ್ರೀಟಿಕರಣ, ಬಸ್‌ಗಳ ನಿಲುಗಡೆಗೆ 4 ಅಂಕಣಗಳು, ಶುದ್ಧ ಕುಡಿಯುವ ನೀರಿನ ವ್ಯವಸ್ಥೆ (ಆರ್.ಓ ಪ್ಲಾಂಟ್), ಪ್ರಯಾಣಿಕರಿಗೆ ಕುಳಿತುಕೊಳ್ಳಲು ಆಸನದ ವ್ಯವಸ್ಥೆ, ಮುಖ್ಯ ಕಟ್ಟಡದ ನೆಲಹಾಸಿಗೆ ಗ್ರಾನೈಟ್, ಉಪಹಾರ ಗೃಹ ಮತ್ತು ವಾಣಿಜ್ಯ ಮಳಿಗೆಗಳು, ಸಂಚಾರ ನಿಯಂತ್ರಣಾ ಕೊಠಡಿ, ಮೊದಲನೇ ಮಹಡಿಯಲ್ಲಿ ಕಛೇರಿ ಉಪಯೋಗಕ್ಕಾಗಿ ಕೊಠಡಿ, ವಿಶೇಷ ಚೇತನರಿಗೆ ಬ್ಯಾಂಪ್ ವ್ಯವಸ್ಥೆ, ಲಿಫ್ಟ್ ವ್ಯವಸ್ಥೆಯನ್ನು ಸಹ ಮಾಡಲಾಗಿದೆ. ಕಾರ್ಯಕ್ರಮದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು, ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಅಧಿಕಾರಿಗಳು, ಸಿಬ್ಬಂದಿಗಳು ಹಾಗೂ ಸಾರ್ವಜನಿಕರು ಭಾಗವಹಿಸಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 