ಕೇರಳ ರೋಗಿಗಳಿಗೆ ಚಿಕಿತ್ಸೆ: ಆರೋಗ್ಯ ಇಲಾಖೆ ಸ್ಪಷ್ಟನೆ
ಮಂಗಳೂರು,
ಏಪ್ರಿಲ್ 13, ಕೇರಳ ರಾಜ್ಯ ಕಾಸರಗೋಡು ಜಿಲ್ಲೆಯಿಂದ ತುರ್ತು ಚಿಕಿತ್ಸೆಗಾಗಿ
ಮಂಗಳೂರಿನ ಕೆ.ಎಸ್.ಹೆಗ್ಡೆ ಮೆಡಿಕಲ್ ಕಾಲೇಜು ಆಸ್ಪತ್ರೆ ದೇರಳಕಟ್ಟೆ ಇಲ್ಲಿಗೆ
ಬಂದವರಿಗೆ ಸೂಕ್ತ ಚಿಕಿತ್ಸೆ ನೀಡಲಾಗುತ್ತಿದೆ.ತಸ್ಲೀಮ ಎಂಬವರು ಎಪ್ರಿಲ್ 8
ರಂದು ಮಧ್ಯಾಹ್ನ 12.15 ಗಂಟೆಗೆ ತೀವ್ರವಾದ ತಲೆನೋವಿನ ಸಂಬಂಧ ಆಸ್ಪತ್ರೆಯಲ್ಲಿ
ಚಿಕಿತ್ಸೆಯನ್ನು ಪಡೆದು ಹಿಂದಿರುಗಿದ್ದಾರೆ. ಎರಡನೇ ಪ್ರಕರಣದಲ್ಲಿ ಬಿ. ಫಾತಿಮಾ (65)
ಎಂಬ ಮಹಿಳೆ ಎಪ್ರಿಲ್ 8 ರಂದು ಮಧ್ಯಾಹ್ನ 12.50 ಗಂಟೆಗೆ ಹೃದಯ ಸಂಬಂಧಿ ಖಾಯಿಲೆಗೆ
ಒಳರೋಗಿಯಾಗಿ ದಾಖಲಾಗಿ ಚಿಕಿತ್ಸೆಯನ್ನು ಪಡೆಯುತ್ತಿದ್ದಾರೆ. ಮೂರನೇ ಪ್ರಕರಣದಲ್ಲಿ
ರೀಶಾನ ತೀವ್ರವಾದ ಹೊಟ್ಟೆನೋವಿಗೆ ಸಂಬಂಧಿಸಿ ಆಸ್ಪತ್ರೆಗೆ ಬಂದು ಚಿಕಿತ್ಸೆ ಪಡೆದು
ಹಿಂದಿರುಗಿದ್ದಾರೆ.ಜೈನಾಭಿ ಎಂಬ ಮಹಿಳೆ ತಲೆನೋವು ಮತ್ತು ವಾಂತಿ ಇರುವ
ಕಾರಣ ಕೆ.ಎಸ್.ಹೆಗ್ಡೆ ಆಸ್ಪತ್ರೆಗೆ ಬಂದು ಚಿಕಿತ್ಸೆಗಾಗಿ ದಾಖಲಾಗಲು ಸೂಚಿಸಿದ್ದರೂ
ಅದನ್ನು ನಿರಾಕರಿಸಿ ಹಿಂದಿರುಗಿರುತ್ತಾರೆ. ಈ ಎಲ್ಲಾ ಪ್ರಕರಣಗಳು ಕೋವಿಡ್- 19
ಗೆ ಸಂಬಂಧಪಟ್ಟಿರುವುದಿಲ್ಲ ಎಂದು ದಕ್ಷಿಣ ಕನ್ನಡ ಜಿಲ್ಲಾ ಆರೋಗ್ಯ ಮತ್ತು ಕುಟುಂಬ
ಕಲ್ಯಾಣ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಖಾನಾಪೂರ ಶಾಸಕ ಹಲಗೇಕರ ಅಡ್ಡ ಮತದಾನ ಮಾಡಿದರಾ?, ಅಂಜಲಿ ನಿಂಬಾಳಕರ್ ಮಾತಿನ ಮರ್ಮವೇನು
ಲಕ್ಷ್ಮಣ್ ಉಟೇಕರ್ ಅವರ ಮುಂಬರುವ ಚಿತ್ರದಲ್ಲಿ ಹೃತಿಕ್ ರೋಷನ್ ಅಭಿನಯಿಸುವ ಸಾಧ್ಯತೆ
ಚಂದ್ರಪುರ ಅರಣ್ಯದಲ್ಲಿ ಕಾಡುಪ್ರಾಣಿ ದಾಳಿಗೆ ಯುವಕ ಬಲಿ
ಅಧಿಕಾರ ದರ್ಪ : ಖಾನಾಪುರ ತಹಸೀಲ್ದಾರ್ ವಿರುದ್ಧ ಶಿಸ್ತುಕ್ರಮಕ್ಕೆ ಪಿಡಿಒಗಳಿಂದ ಡಿಸಿ, ಚು. ಆಯೋಗಕ್ಕೆ ದೂರು
ಗಗನಯಾನ ಮಿಷನ್ಗಾಗಿ ಮಹತ್ವದ ಪ್ಯಾರಾಶೂಟ್ ಏರ್ಡ್ರಾಪ್ ಪರೀಕ್ಷೆಯನ್ನು ಇಸ್ರೋ ಯಶಸ್ವಿಯಾಗಿ ನಡೆಸಿತು
ಗದಗದಲ್ಲಿ ಮಾನಸಿಕ ಅಸ್ವಸ್ಥ ಯುವತಿಯ ಮೇಲೆ ಅತ್ಯಾಚಾರ ಆರೋಪ 