ಸಿದ್ಧೇಶ್ವರ ಸ್ವಾಮೀಜಿ ಹೆಸರಿನಲ್ಲಿ ವೃಕ್ಷೋದ್ಯಾನ ಲೋಕಾರೆ್ಣ
Tree park dedicated to the public in the name of Siddheshwar Swamiji
ಲೋಕದರ್ಶನ ವರದಿ
ವಿಜಯಪುರ, ಆ.30 : ಪ್ರಕೃತಿಯ ಸಂರಕ್ಷಣೆ ಹಾಗೂ ಅರಣ್ಯ ಸಂಪತ್ತನ್ನು ಉಳಿಸಿ ಬೆಳೆಸುವುದು ಪ್ರತಿಯೊಬ್ಬರ ಕರ್ತವ್ಯ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ರಾಮಲಿಂಗಾರೆಡ್ಡಿ ಹೇಳಿದರು.
ಇಂಡಿ ತಾಲೂಕಿನ ಸಾವಳಸಂಗ ಗ್ರಾಮದ ಬಳಿ ವಿಜಯಪುರ ಸಾಮಾಜಿಕ ಅರಣ್ಯ ವಿಭಾಗ ಹಾಗೂ ಇಂಡಿ ಸಾಮಾಜಿಕ ಅರಣ್ಯ ವಲಯದ ಸಹಯೋಗದಲ್ಲಿ ನಿರ್ಮಿಸಿರುವ ಜ್ಞಾನಯೋಗಿ ಶ್ರೀ ಸಿದ್ಧೇಶ್ವರ ಸ್ವಾಮೀಜಿ ವೃಕ್ಷೋದ್ಯಾನವನ್ನು ಭಾನುವಾರ ಲೋಕಾರೆ್ಣ ಮಾಡಿ ಅವರು ಮಾತನಾಡಿದರು.
ಸುಮಾರು 2.50 ಕೋಟಿ ವೆಚ್ಚದಲ್ಲಿ ನಿರ್ಮಿಸಿರುವ ಈ ವೃಕ್ಷೋದ್ಯಾನ ಹಸೀರೀಕರಣಕ್ಕೆ ಉತ್ತೇಜನ ನೀಡುವುದರ ಜತೆಗೆ ಜನರಲ್ಲಿ ಪರಿಸರ ಕಾಳಜಿ ಮೂಡಿಸಲಿದೆ. ಮುಂದಿನ ದಿನಗಳಲ್ಲಿ ಇಂಡಿ ನಗರದಲ್ಲಿ ಟ್ರೀ ಪಾರ್ಕ್ ಹಾಗೂ ಕೃಷ್ಣಮೃಗ ಮೀಸಲು ಪ್ರದೇಶ ಅಭಿವೃದ್ಧಿಪಡಿಸಲು ಅರಣ್ಯ ಇಲಾಖೆಯಿಂದ ಅಗತ್ಯ ನೆರವು ನೀಡಲಾಗುವುದು ಎಂದರು.
ಸಿದ್ಧೇಶ್ವರ ಸ್ವಾಮೀಜಿಯವರ ಹೆಸರಿನಲ್ಲಿ ವೃಕ್ಷೋದ್ಯಾನ ನಿರ್ಮಿಸಿರುವುದು ಸೂಕ್ತವಾಗಿದೆ. ಇಲ್ಲಿಗೆ ಭೇಟಿ ನೀಡುವ ಪ್ರತಿಯೊಬ್ಬರೂ ಸಸಿ ನೆಟ್ಟು, ಉದ್ಯಾನವನ್ನು ತಮ್ಮ ಸ್ವಂತ ಆಸ್ತಿಯಂತೆ ಸಂರಕ್ಷಿಸಬೇಕು ಎಂದು ಕರೆ ನೀಡಿದರು. ರೇವಣಸಿದ್ಧೇಶ್ವರ ಏತ ನೀರಾವರಿ ಯೋಜನೆಯಿಂದ ಈ ಭಾಗದ ಜನರು ಹಾಗೂ ರೈತರಿಗೆ ಹೆಚ್ಚಿನ ಅನುಕೂಲವಾಗಲಿದೆ ಎಂದರು.
ಬೆಳೆಹಾನಿಗೆ ಶೀಘ್ರ ಪರಿಹಾರ: ಮಳೆಯಾಗದೆ ಬೆಳೆ ಕಳೆದುಕೊಂಡಿರುವ ರೈತರ ಹಿತಕ್ಕಾಗಿ ಇಂಡಿ ತಾಲೂಕನ್ನು ಬರಪೀಡಿತ ಎಂದು ಘೋಷಿಸುವಂತೆ ಸರ್ಕಾರಕ್ಕೆ ಮನವಿ ಮಾಡಲಾಗಿದೆ. ಸಂಕಷ್ಟದಲ್ಲಿರುವ ರೈತರಿಗೆ ಶೀಘ್ರ ಪರಿಹಾರ ದೊರಕಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದು ಸಚಿವರು ಭರವಸೆ ನೀಡಿದರು.
ಶಾಸಕ ಯಶವಂತರಾಯಗೌಡ ಪಾಟೀಲ ಅಧ್ಯಕ್ಷತೆ ವಹಿಸಿ ಮಾತನಾಡಿ, ಸಿದ್ಧೇಶ್ವರ ಸ್ವಾಮೀಜಿಯವರ ತತ್ವಗಳು ಮುಂದಿನ ಪೀಳಿಗೆಗೆ ಸ್ವಚ್ಛತೆ, ಸರಳತೆ ಹಾಗೂ ನಿಷ್ಠೆಯ ಹಾದಿ ತೋರಿಸಲಿ ಎಂದರು. ಕ್ಷೇತ್ರದಲ್ಲಿ ಈಗಾಗಲೇ 19 ಕೆರೆಗಳನ್ನು ತುಂಬಿಸಿರುವುದರಿಂದ ಅಂತರ್ಜಲ ಮಟ್ಟ ಹೆಚ್ಚಿದ್ದು, ರೈತರಿಗೆ ಅನುಕೂಲವಾಗಿದೆ ಎಂದು ತಿಳಿಸಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 