ವಿಶ್ವಪರಿಸರ ದಿನ ಅಂಗವಾಗಿ ಸಸಿನೆಡುವ ಕಾರ್ಯಕ್ರಮ ಹಾಗೂ ಕಾನೂನು ಅರಿವು ನೆರವು ಕಾರ್ಯಕ್ರಮ
Tree planting program and legal awareness program as part of World Environment Day
ಲೋಕದರ್ಶನ ವರದಿ
ಸವದತ್ತಿ 05: ತಾಲೂಕಾ ಕಾನೂನು ಸೇವೆಗಳ ಸಮಿತಿ, ನ್ಯಾಯವಾದಿಗಳ ಸಂಘ, ಮತ್ತು ವಲಯ ಅರಣ್ಯಾಧಿಕಾರಿಗಳ ಇಲಾಖೆ, ಇವರುಗಳ ಸಂಯುಕ್ತ ಆಶ್ರಯದಲ್ಲಿ ದಿನಾಂಕಃ 05-06-2026 ರಂದು ಸರ್ಕಾರಿ ಶಾಸಕರ ಮಾದರಿ ಶಾಲೆಗುರ್ಲ ಹೊಸೂರ, ಸವದತ್ತಿಯಲ್ಲಿ "ವಿಶ್ವಪರಿಸರದಿನ” ಅಂಗವಾಗಿ ಸಸಿನೆಡುವ ಕಾರ್ಯಕ್ರಮ ಹಾಗೂ ಕಾನೂನು ಅರಿವು ನೆರವು ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ತಾಲೂಕಾ ಕಾನೂನು ಸೇವೆಗಳ ಸಮಿತಿಯ ಅಧ್ಯಕ್ಷರಾದ ಸಿದ್ರಾಮ. ಟಿರವರು ಸಸಿಗೆ ನೀರೆರೆಯುವುದರ ಮೂಲಕ ಉದ್ಫಾಟನೆ ನೆರವೇರಿಸಿದರು. ನಂತರ ಮಾತನಾಡಿದ ಅವರು ಜೀವ ಪ್ರಪಂಚದ ಉಸಿರಾಗಿರುವ ಪ್ರಕೃತಿಯನ್ನುರಕ್ಷಿಸುವ ಮತ್ತು ಪರಿಸರದ ಬಗ್ಗೆ ಕಾಳಜಿ ಮೂಡಿಸುವ ಸಲುವಾಗಿ ಪ್ರತಿವರ್ಷಜೂನ್ 5 ರಂದು ‘ವಿಶ್ವಪರಿಸರದಿನ’ ವನ್ನು ಅತ್ಯಂತ ಜವಾಬ್ದಾರಿಯುತವಾಗಿ ಆಚರಿಸಲಾಗುತ್ತದೆ ಎಂದು ಹೇಳಿದರು.
ಮುಖ್ಯ ಅತಿಥಿಗಳ ಭಾಷಣ ಮಾಡಿದ ಪ್ರಧಾನಾ ಸಿವಿಲ್ ನ್ಯಾಯಾಧೀಶರು ಹಾಗೂ ತಾಲೂಕಾ ಕಾನೂನುಸೇವೆಗಳ ಸಮಿತಿಯ ಸದಸ್ಯ ಕಾರ್ಯದರ್ಶಿಗಳಾದ ದೇವದಾಸ ಎಚ್. ರವರು ಮಾತನಾಡಿ ಪ್ರಕೃತಿಯನ್ನು ಯಾವಾಗಲೂ ಒಂದು ಹೆಣ್ಣಿಗೆ ಹೋಲಿಸುತ್ತಾರೆ. ಪ್ರಕೃತಿ ಇರೋದೆ ನಮಗೋಸ್ಕರ ನಮ್ಮಸುತ್ತಮುತ್ತಲು ಗಿಡ-ಮರಗಳು, ಸಸ್ಯಗಳು ಇದ್ದರೆ ನಮಗೆ ಸಾಕಷ್ಟುಗಾಳಿ, ಮಳೆಸಿಗುತ್ತದೆ. ಪ್ರಕೃತಿಯನ್ನು ನಾವು ಸಂರಕ್ಷಣೆ ಮಾಡಿದರೆ ಅದು ನಮ್ಮನ್ನು ರಕ್ಷಣೆಮಾಡುತ್ತದೆ. ಪ್ರಕೃತಿ ಏನಾದರೂವಿ ಕೋಪಕ್ಕೆಹೋದರೆ ಪ್ರವಾಹ, ಭೂಕಂಪ, ಬಿರುಗಾಳಿ, ಮುಂತಾದವುಗಳು ಉಂಟಾಗುತ್ತವೆ. ಆದ್ದರಿಂದ ನಮ್ಮ ಸುತ್ತಮುತ್ತಲು ಗಿಡಮರಗಳನ್ನು ಬೆಳೆಸುತ್ತಾ ಪರಿಸರವನ್ನು ಸ್ವಚಗೊಳಿಸುತ್ತಾ ನಮ್ಮ ಪ್ರಕೃತಿಯನ್ನು ಕಾಪಾಡಿಕೊಳ್ಳೊಣ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ನ್ಯಾಯವಾದಿಗಳ ಸಂಘದ ಅಧ್ಯಕ್ಷರಾದ ಜೆ.ಬಿ.ಮುನವಳ್ಳಿ, ಉಪಾಧ್ಯಕ್ಷರಾದ ಎಮ್.ಎಸ್.ಹುಬ್ಬಳ್ಳಿ, ಕಾರ್ಯದರ್ಶಿಯಾದ ಎಸ್.ಎಸ್.ಕಾಳಪ್ಪನವರ, ಮಹಿಳಾ ಪ್ರತಿನಿಧಿ ನ್ಯಾಯವಾದಿ ಎಸ್.ವಾಯ್.ಶಿಬಾರಗಟ್ಟಿ, ಮತ್ತು ಉಪವಲಯ ಅರಣ್ಯಾಧಿಕಾರಿಗಳಾದ ವಿನಾಯಕ ಪಾಟೀಲ, ನ್ಯಾಯವಾದಿಗಳಾದ ಎಮ್.ಬಿ.ದ್ಯಾಮನಗೌಡರ, ಆರ್.ಎಮ್.ನಿಡೋನಿ, ವಾಯ್.ಎನ್.ಪಾಸ್ತೆ, ಎಮ್.ಎ.ಅಂಗಡಿ, ಆರ್.ಆರಿ್ಚನಿವಾಲರ ಇತರರು ಉಪಸ್ಥಿತರಿದ್ದರು. ಶಿಕ್ಷಕರಾದ ಎಮ್.ಬಿ.ಅಲಾರಕಿ ಸ್ವಾಗತಿಸಿ, ನಿರೂಪಿಸಿದರು. ಶಾಲೆಯ ಪ್ರಧಾನ ಗುರುಗಳಾದ ಎಮ್.ಬಿ. ಕಮ್ಮಾರ ವಂದಿಸಿದರು.
ಚಿನ್ನ ದೋಚಿದ್ದ ಖದೀಮನ ಬಂಧನ : 15.73 ಲಕ್ಷ ಮೌಲ್ಯದ 103.97 ಗ್ರಾಂ ಚಿನ್ನ ವಶ
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್ 