ಡಾ. ಬಿ.ಎಫ್. ದಂಡಿನ್ ಸ್ಮರಣಾರ್ಥ ನುಡಿನಮನ ಹಾಗೂ ಸ್ಮಾರಕ ಭೂಮಿಪೂಜೆ
Tribute Meeting and Ground-breaking Ceremony for the Memorial of Dr. B.F. Dandin
ಗದಗ, ಆ.3: 65 ಶಿಕ್ಷಣ ಸಂಸ್ಥೆಗಳನ್ನು ಸ್ಥಾಪಿಸಿ ಶಿಕ್ಷಣ ಕ್ಷೇತ್ರಕ್ಕೆ ಅಪಾರ ಕೊಡುಗೆ ನೀಡಿದ ಕನಕದಾಸ ಶಿಕ್ಷಣ ಸಮಿತಿಯ ಸಂಸ್ಥಾಪಕ ಡಾ. ಬಿ.ಎಫ್. ದಂಡಿನ್ ಹಾಗೂ ಶಕುಂತಲಾಬಾಯಿ ದಂಡಿನ್ ಅವರ ಸ್ಮರಣಾರ್ಥ ಸಾರ್ವಜನಿಕ ನುಡಿನಮನ ಸಭೆ ಮತ್ತು ಸ್ಮಾರಕ ಭೂಮಿಪೂಜೆ ಕಾರ್ಯಕ್ರಮವು ಆಗಸ್ಟ್ 5ರಂದು ಬೆಳಿಗ್ಗೆ 10.30ಕ್ಕೆ ನಗರದ ಗಾಣಿಗರ ಭವನದಲ್ಲಿ ನಡೆಯಲಿದೆ ಎಂದು ಪ್ರೊ. ಎಂ.ಎನ್. ಕಾಮನಹಳ್ಳಿ ತಿಳಿಸಿದರು.
ನಗರದ ಪತ್ರಿಕಾ ಭವನದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾರ್ಯಕ್ರಮದಲ್ಲಿ ನಾಲ್ಕು ಸಾವಿರಕ್ಕೂ ಹೆಚ್ಚು ಹಳೆಯ ವಿದ್ಯಾರ್ಥಿಗಳು ಹಾಗೂ ಅಭಿಮಾನಿಗಳು ಭಾಗವಹಿಸುವ ನೀರೀಕ್ಷೆಯಿದೆ ಎಂದರು.
ಕಾರ್ಯಕ್ರಮದ ದಿವ್ಯ ಸಾನ್ನಿಧ್ಯವನ್ನು ಕಾಗಿನೆಲೆ ಮಹಾಸಂಸ್ಥಾನದ ಶ್ರೀ ನಿರಂಜನಾನಂದಪುರಿ ಮಹಾಸ್ವಾಮೀಜಿ, ಶ್ರೀ ಸದಾಶಿವಾನಂದ ಮಹಾಸ್ವಾಮೀಜಿ, ನಾಗಸಾಧು ಮಹಾಂತ ಸಹದೇವಾನಂದ ಗಿರಿ ಮಹಾರಾಜ್, ಶ್ರೀ ಶಾಂತಲಿಂಗ ಮಹಾಸ್ವಾಮೀಜಿ ಹಾಗೂ ಶ್ರೀ ಮುಕೇಶ್ವರ ಸ್ವಾಮೀಜಿಗಳು ವಹಿಸಲಿದ್ದಾರೆ ಎಂದು ತಿಳಿಸಿದರು.
ಮುಖ್ಯ ಅತಿಥಿಗಳಾಗಿ ಆರ್‌ಎಸ್‌ಎಸ್ ಭಾರತೀಯ ವ್ಯವಸ್ಥಾ ಪ್ರಮುಖ ಮಂಗೇಶ್ ಭೇಂಡೆ, ಬಸವರಾಜ ಬೊಮ್ಮಾಯಿ, ಸಿ.ಸಿ. ಪಾಟೀಲ, ಡಾ. ಎಚ್.ಕೆ. ಪಾಟೀಲ, ಎಸ್.ಎಸ್. ಪಾಟೀಲ, ಡಿ.ಆರ್. ಪಾಟೀಲ, ದೊಡ್ಡನಗೌಡ ಪಾಟೀಲ, ಪಿ.ಜಿ.ಆರ್. ಸಿಂಧ್ಯಾ, ಎಂ.ಆರ್. ಹುಲಿನಾಯಕರ್, ಡಾ. ತೇಜಸ್ವಿ ಕಟ್ಟಿಮನಿ ಹಾಗೂ ಮಲ್ಲಿಕಾರ್ಜುನ ಸಿದ್ದಣ್ಣವರ ಭಾಗವಹಿಸಲಿದ್ದಾರೆ ಎಂದರು.
ಈ ಸಂದರ್ಭದಲ್ಲಿ ಮಾತನಾಡಿದ ಡಾ. ಡಿ.ಬಿ. ಗವಾನಿ, ಗ್ರಾಮೀಣ ಭಾಗದ ಸಾವಿರಾರು ವಿದ್ಯಾರ್ಥಿಗಳಿಗೆ ಕನಕದಾಸ ಶಿಕ್ಷಣ ಸಮಿತಿ ಗುಣಮಟ್ಟದ ಶಿಕ್ಷಣ ನೀಡಿದೆ. ಈ ಸಂಸ್ಥೆಯಲ್ಲಿ ವಿದ್ಯಾಭ್ಯಾಸ ಮಾಡಿದ ಅನೇಕರು ಇಂದು ಶಿಕ್ಷಕರು, ಸಮಾಜಸೇವಕರು ಹಾಗೂ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ್ದಾರೆ. ಡಾ. ದಂಡಿನ್ ಅವರ ಅಗಲಿಕೆಯಿಂದ ಶಿಕ್ಷಣ ಕ್ಷೇತ್ರಕ್ಕೆ ತುಂಬಲಾರದ ನಷ್ಟವಾಗಿದೆ. ಅವರ ನೆನಪಿಗಾಗಿ ಸ್ಮಾರಕ ಭವನ ನಿರ್ಮಿಸುವ ಉದ್ದೇಶ ಹೊಂದಲಾಗಿದೆ ಎಂದು ಹೇಳಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 