ದಿ.ರಾಜು ತಾಳಿಕೋಟಿ ಅವರಿಗೆ ಶ್ರದ್ಧಾಂಜಲಿ
Tribute to D. Raju Talikoti
ದಿ.ರಾಜು ತಾಳಿಕೋಟಿ ಅವರಿಗೆ ಶ್ರದ್ಧಾಂಜಲಿ
ಧಾರವಾಡ 15: ಉತ್ತರ ಕರ್ನಾಟಕದ ಹೆಮ್ಮೆಯ ಕಲಾವಿದ ಹಾಗೂ ಧಾರವಾಡ ರಂಗಾಯಣದ ನಿರ್ದೇಶಕರಾದ ದಿ.ರಾಜು ತಾಳಿಕೋಟಿ ಅವರು ಅಕ್ಟೋಬರ್ 17, 2025 ರಂದು ಅನಾರೋಗ್ಯದಿಂದ ವಿಧಿವಶರಾಗಿರುವ ಹಿನ್ನಲೆಯಲ್ಲಿ ಅಕ್ಟೋಬರ್ 17, 2025 ರಂದು ಬೆಳಿಗ್ಗೆ 11 ಗಂಟೆಗೆ ಧಾರವಾಡ ರಂಗಾಯಣದ ಸುವರ್ಣ ಸಾಂಸ್ಕೃತಿಕ ಸಮುಚ್ಚಯ ಸಭಾಭವನ ದಿ. ರಾಜು ತಾಳೀಕೋಟಿ ಅವರಿಗೆ ನುಡಿ ನಮನ ಕಾರ್ಯಕ್ರಮ ಏರಿ್ಡಸಲಾಗಿದೆ. ಆದ್ದರಿಂದ ಸಮಸ್ತ ಸಂಘ, ಸಂಸ್ಥೆ ಹಾಗೂ ರಂಗತಂಡಗಳು, ಕಲಾವಿದರು, ಕಲಾಸಕ್ತರು ಆಗಮಿಸಬೇಕೆಂದು ಧಾರವಾಡ ರಂಗಾಯಣ ಆಡಳಿತಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ನಾಟಕ ಕ್ಷೇತ್ರದಲ್ಲಿ ತಮ್ಮ ಅಪರೂಪದ ಅಭಿನಯದ ಮೂಲಕ ನಾಡಿನ ಜನರ ಹೃದಯ ಗೆದ್ದಿದ್ದ ಖ್ಯಾತ ಹಾಸ್ಯ ನಟ ಹಾಗೂ ರಂಗಾಯಣದ ನಿರ್ದೇಶಕರಾಗಿದ್ದ ರಾಜು ತಾಳಿಕೋಟೆ ಅವರ ಕೊಡುಗೆ ನಾಡಿನ ಕಲಾಕ್ಷೇತ್ರಕ್ಕೆ ಅನನ್ಯವಾದದ್ದು. ಅವರಿಗೆ ಅವರೇ ಸರಿಸಾಟಿ. ಅವರ ಅಕಾಲಿನ ನಿಧನದಿಂದ ಸರ್ವ ಶ್ರೇಷ್ಠ ಹಾಸ್ಯ ನಟನನ್ನು ಕಳೆದುಕೊಂಡು ನಾಡಿನ ಸಾಂಸ್ಕೃತಿಕ ಕ್ಷೇತ್ರ ಬಡವಾಗಿದೆಯೆಂದು ಕರ್ನಾಟಕ ಬಾಲವಿಕಾಸ ಅಕಾಡೆಮಿ ಅಧ್ಯಕ್ಷರಾದ ಸಂಗಮೇಶ ಬಬಲೇಶ್ವರ ಹೇಳಿದರು. ಅವರು ಇಂದು (ಅ.15) ಕರ್ನಾಟಕ ಬಾಲವಿಕಾಸ ಅಕಾಡೆಮಿ ಕೇಂದ್ರ ಕಚೇರಿಯಲ್ಲಿ ಆಯೋಜಿಸಿದ್ದ ದಿ.ರಾಜು ತಾಳಿಕೋಟಿ ಅವರ ಶ್ರದ್ಧಾಂಜಲಿ ಸಭೆಯನ್ನು ಉದ್ದೇಶಿಸಿ, ಅವರು ಮಾತನಾಡಿದರು. ರಾಜು ತಾಳಿಕೋಟಿ ವೃತ್ತಿ ರಂಗಭೂಮಿಯನ್ನು ಚಲನಚಿತ್ರ ಕ್ಷೇತ್ರಕ್ಕೆ ಕೊಂಡಿಯಾಗಿ ಬೆಸೆದಿದ್ದರು. ಉತ್ತರ ಕರ್ನಾಟಕದ ಕನ್ನಡ ಭಾಷೆಗೆ ಎಲ್ಲೆಡೆ ಮನ್ನಣೆ ಸಿಗುವಂತೆ ಮಾಡಿದ್ದರು. ಅವರ ಅಗಲಿಕೆ ರಂಗಭೂಮಿಗೆ, ಉತ್ತರ ಕರ್ನಾಟಕದ ಕಲಾಕ್ಷೇತ್ರಕ್ಕೆ ತುಂಬಲಾರದ ನಷ್ಟ ಉಂಟು ಮಾಡಿದೆ ಎಂದರು. ರಾಜು ತಾಳಿಕೋಟಿ ಅವರ ಇಡೀ ಕುಟುಂಬ ರಂಗಭೂಮಿಗೆ ಬಲ ತುಂಬಿದೆ. ಅವರ ಕೊಡೆಗೆ ಅಪಾರವಾಗಿದೆ ಎಂದು ಅವರು ಹೇಳಿದರು. ಈ ಸಂದರ್ಭದಲ್ಲಿ ಅಕಾಡೆಮಿಯ ಅಧಿಕಾರಿಗಳಾದ ಅನ್ನಪೂರ್ಣ ಸಂಗಳದ, ಪುಷ್ಪಾ ಹಂಜಗಿ, ಸುಭಾಸ ಚಂದ್ರಗಿರಿ, ಸವರ್ಣಲತಾ ಮಠದ, ಪದ್ಮಶ್ರೀ ಮೇಟಿ, ಅರ್ಿತಾ, ಶಿವಕುಮಾರ, ಸ್ಟಾಯನ್ಲಿಲೂಥರ, ಅಶೋಕ ಇತರರು ಉಪಸ್ಥಿತರಿದ್ದರು
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 