ಮಾಧ್ಯಮರತ್ನ ರಾಜ್ಯ ಪ್ರಶಸ್ತಿ ಪುರಸ್ಕೃತ ಅಂಬಾಜಿ ಘೋರೆ್ಡಗೆ ಸನ್ಮಾನ
Tribute to Madhyamratna State Awardee Ambaji Ghoreda
ಮಾಧ್ಯಮರತ್ನ ರಾಜ್ಯ ಪ್ರಶಸ್ತಿ ಪುರಸ್ಕೃತ ಅಂಬಾಜಿ ಘೋರೆ್ಡಗೆ ಸನ್ಮಾನ
ತಾಳಿಕೋಟೆ 13: ಮಾಧ್ಯಮರತ್ನ ರಾಜ್ಯ ಪ್ರಶಸ್ತಿಗೆ ಭಾಜನರಾದ ತಾಳಿಕೋಟೆಯ ಪತ್ರಕರ್ತ ಅಂಬಾಜಿ ಘೋರೆ್ಡ ಅವರನ್ನು ಮುದ್ದೇಬಿಹಾಳ ಹಾಗೂ ತಾಳಿಕೋಟೆ ತಾಲೂಕು ವೀರಶೈವ ಲಿಂಗಾಯತ ಹಂಡೆವಜೀರ ಸಮಾಜದ ವತಿಯಿಂದ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಶನಿವಾರ ಸನ್ಮಾನಿಸಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಸಮಾಜದ ರಾಜ್ಯ ಉಪಾಧ್ಯಕ್ಷ ಶಂಕರಗೌಡ ರಾಯಗೊಂಡ ಮಾತನಾಡಿ, ಅಂಬಾಜಿ ಘೋರೆ್ಡ ಅವರು ಪತ್ರಿಕೋದ್ಯಮ ಕ್ಷೇತ್ರದಲ್ಲಿ ಪ್ರಾಮಾಣಿಕತೆ, ನಿಷ್ಠೆ ಹಾಗೂ ಬದ್ಧತೆಯಿಂದ ಕಾರ್ಯನಿರ್ವಹಿಸುತ್ತಿದ್ದು, ಸಮಾಜದ ಎಲ್ಲ ವರ್ಗಗಳೊಂದಿಗೆ ಆತ್ಮೀಯವಾಗಿ ನಡೆದುಕೊಂಡು ಜನರ ಸಮಸ್ಯೆಗಳಿಗೆ ಸ್ಪಂದಿಸುತ್ತಿದ್ದಾರೆ. ಅವರ ಸೇವೆಯನ್ನು ಗುರುತಿಸಿ ವಿಶ್ವದರ್ಶನ ಮಾಧ್ಯಮ ಸಂಸ್ಥೆ ಮಾಧ್ಯಮರತ್ನ ರಾಜ್ಯ ಪ್ರಶಸ್ತಿ ನೀಡಿರುವುದು ಸಂತಸದ ಸಂಗತಿ ಎಂದರು. ಸಮಾಜದ ಮಾಜಿ ತಾಲೂಕು ಅಧ್ಯಕ್ಷ, ನ್ಯಾಯವಾದಿ ಎಂ.ಬಿ. ಬಿರಾದಾರ ಮಾತನಾಡಿ, ಯಾವುದೇ ವ್ಯಕ್ತಿ ಅಥವಾ ಸಮಾಜದ ಪರ-ವಿರೋಧದ ಮನೋಭಾವವಿಲ್ಲದೆ ವಾಸ್ತವಾಂಶಗಳಿಗೆ ಆದ್ಯತೆ ನೀಡಿ ಸುದ್ದಿ ಮಾಡುತ್ತಿರುವುದು ಶ್ಲಾಘನೀಯ. ಜನರ ಸಮಸ್ಯೆಗಳನ್ನು ಮಾಧ್ಯಮದ ಮೂಲಕ ಸಂಬಂಧಪಟ್ಟವರ ಗಮನಕ್ಕೆ ತಂದು ನ್ಯಾಯ ದೊರಕಿಸುವ ನಿಟ್ಟಿನಲ್ಲಿ ಅವರು ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ಹೇಳಿದರು. ತಾಲೂಕು ಅಧ್ಯಕ್ಷ ರಾಮನಗೌಡ ಬಿರಾದಾರ ಮಾತನಾಡಿ, ಮಾಧ್ಯಮಗಳು ಸಮಾಜದ ಕಣ್ಣುಗಳಿದ್ದಂತೆ. ಪತ್ರಕರ್ತರು ಯಾವುದೇ ಒತ್ತಡ ಅಥವಾ ಪ್ರಭಾವಕ್ಕೆ ಒಳಗಾಗದೆ ಸತ್ಯ ಮತ್ತು ವಾಸ್ತವಾಂಶಗಳ ಪರವಾಗಿ ನಿಲ್ಲಬೇಕು. ನಿಷ್ಪಕ್ಷಪಾತವಾಗಿ ಕಾರ್ಯನಿರ್ವಹಿಸಿದಾಗ ಮಾತ್ರ ಪ್ರಜಾಪ್ರಭುತ್ವ ವ್ಯವಸ್ಥೆ ಮತ್ತಷ್ಟು ಬಲಿಷ್ಠವಾಗುತ್ತದೆ. ಅಂಬಾಜಿ ಘೋರೆ್ಡ ಅವರಂತಹ ಪ್ರಾಮಾಣಿಕ ಪತ್ರಕರ್ತರ ಸೇವೆ ಇತರರಿಗೆ ಮಾದರಿಯಾಗಲಿ ಎಂದರು. ಸನ್ಮಾನ ಸ್ವೀಕರಿಸಿ ಮಾತನಾಡಿದ ಅಂಬಾಜಿ ಘೋರೆ್ಡ, ಪತ್ರಕರ್ತರಿಗೆ ಜಾತಿ, ಮತ, ಪಂಥಗಳ ಭೇದವಿಲ್ಲ. ಎಲ್ಲ ಸಮಾಜಗಳ ಪ್ರೀತಿ-ವಿಶ್ವಾಸ ಗಳಿಸುತ್ತಾ, ಸಮಾಜದ ಎಲ್ಲ ವರ್ಗಗಳನ್ನು ಮುನ್ನೆಲೆಗೆ ತರುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸಬೇಕು. ಹಂಡೆವಜೀರ ಸಮಾಜದವರು ತಮ್ಮ ಕಾರ್ಯವೈಖರಿಯನ್ನು ಗುರುತಿಸಿ ಗೌರವಿಸಿರುವುದು ಸಂತಸ ಹಾಗೂ ಜವಾಬ್ದಾರಿಯನ್ನು ಹೆಚ್ಚಿಸಿದೆ. ಮುಂದೆಯೂ ಪ್ರಾಮಾಣಿಕತೆ, ನಿಷ್ಠೆ ಹಾಗೂ ಬದ್ಧತೆಯಿಂದ ಪತ್ರಿಕೋದ್ಯಮ ಸೇವೆ ಮುಂದುವರಿಸುವುದಾಗಿ ತಿಳಿಸಿದರು. ಕಾರ್ಯಕ್ರಮದಲ್ಲಿ ಸಮಾಜದ ಗೌರವಾಧ್ಯಕ್ಷ ಬಿ.ಬಿ. ಬಿರಾದಾರ, ಚನ್ನಪ್ಪಗೌಡ ಹೊಸಗೌಡರ, ಸಿದ್ದಾಮಪ್ಪ ಲೇಬಗೇರಿ, ಶಿವನಗೌಡ ಪಾಟೀಲ, ಶಿವನಗೌಡ ಬಿರಾದಾರ, ವಿಜಯಗೌಡ ತೊಂಡ್ಯಾಳ, ಜಗದೀಶ ಬಿರಾದಾರ, ರಾಜಶೇಖರ ಮ್ಯಾಗೇರಿ ಹಾಗೂ ಹಿರಿಯ ಪತ್ರಕರ್ತರಾದ ಜಿ.ಟಿ. ಘೋರೆ್ಡ, ಹಣಮಂತ ನಲವಡೆ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 