ಸ್ವಾತಂತ್ರ್ಯ ಹೋರಾಟಗಾರ ಬಸವಣ್ಣಪ್ಪ ಅವರಿಗೆ ಸನ್ಮಾನ

ಸ್ವಾತಂತ್ರ್ಯ ಹೋರಾಟಗಾರ ಬಸವಣ್ಣಪ್ಪ ಅವರಿಗೆ ಸನ್ಮಾನ  Tribute to freedom fighter Basavannappa

ಬ್ಯಾಡಗಿ, ಆ.11: ಕ್ವಿಟ್ ಇಂಡಿಯಾ ಚಳವಳಿಯಲ್ಲಿ ಭಾಗವಹಿಸಿದ್ದ ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲ್ಲೂಕಿನ ಬುಡಪನಹಳ್ಳಿ ಗ್ರಾಮದ ಸ್ವಾತಂತ್ರ್ಯ ಹೋರಾಟಗಾರ ಶ್ರೀ ಬಸವಣ್ಣಪ್ಪ ಚಿಕ್ಕಪ್ಪ ಜ್ಯೋತಿ ಅವರನ್ನು ಜಿಲ್ಲಾಧಿಕಾರಿ ಕಚೇರಿಯ ಅಪರ ಜಿಲ್ಲಾಧಿಕಾರಿ ನಾಗರಾಜ್ ಅವರು ಗ್ರಾಮಕ್ಕೆ ಭೇಟಿ ನೀಡಿ ಗೌರವಿಸಿ ಸನ್ಮಾನಿಸಿದರು.  

ಪ್ರತಿ ವರ್ಷ ಆಗಸ್ಟ್‌ 9ರಂದು ಕ್ವಿಟ್ ಇಂಡಿಯಾ ಚಳವಳಿಯ ಸ್ಮರಣಾರ್ಥ ಸ್ವಾತಂತ್ರ್ಯ ಹೋರಾಟಗಾರರನ್ನು ಗೌರವಿಸುವ ಹಿನ್ನೆಲೆಯಲ್ಲಿ ಈ ಕಾರ್ಯಕ್ರಮ ಆಯೋಜಿಸಲಾಗಿತ್ತು.  ಈ ಸಂದರ್ಭದಲ್ಲಿ ಕಾಗಿನೆಲೆ ಉಪತಹಶೀಲ್ದಾರ್, ಕಂದಾಯ ನೀರೀಕ್ಷಕರು, ಬ್ಯಾಡಗಿ ಗ್ರಾಮ ಆಡಳಿತಾಧಿಕಾರಿ ಸೇರಿದಂತೆ ಅಧಿಕಾರಿಗಳು ಉಪಸ್ಥಿತರಿದ್ದರು.