ಕಾರ್ಗಿಲ್ ವಿಜಯೋತ್ಸವ ಅಂಗವಾಗಿ ಹುತಾತ್ಮ ಯೋಧರಿಗೆ ನಮನ
Tribute to martyred soldiers on the occasion of Kargil Vijay Diwas
ಲೋಕದರ್ಶನ ವರದಿ
ಧಾರವಾಡ 26: ಕಾರ್ಗಿಲ್ ವಿಜಯೋತ್ಸವ ಅಂಗವಾಗಿ ಜೆಎಸ್‌ಎಸ್ ಪಬ್ಲಿಕ್ ಶಾಲೆ ಹಾಗೂ ಜೆಎಸ್‌ಎಸ್ ವಾಕ್ ಮತ್ತು ಶ್ರವಣ ಸಂಸ್ಥೆಯ ವಿದ್ಯಾರ್ಥಿಗಳು, ಶಿಕ್ಷಕರು ಮತ್ತು ಸಿಬ್ಬಂದಿ ಭಾನುವಾರ ಹುತಾತ್ಮ ಯೋಧರಿಗೆ ಪುಷ್ಪನಮನ ಸಲ್ಲಿಸಿ ಗೌರವ ಅರ್ಿಸಿದರು. ನಗರದ ಜಿಲ್ಲಾಧಿಕಾರಿ ಕಚೇರಿ ಸಮೀಪವಿರುವ ಹುತಾತ್ಮ ಯೋಧರ ಸ್ಮಾರಕಕ್ಕೆ ಭೇಟಿ ನೀಡಿದ ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿ ಪುಷ್ಪನಮನ ಸಲ್ಲಿಸಿದರು. ಈ ಸಂದರ್ಭದಲ್ಲಿ ಜೆಎಸ್‌ಎಸ್ ಪಬ್ಲಿಕ್ ಶಾಲೆಯ ಪ್ರಾಂಶುಪಾಲರು ದೇಶಕ್ಕಾಗಿ ಯೋಧರು ಮಾಡಿದ ತ್ಯಾಗ, ಬಲಿದಾನ ಮತ್ತು ದೇಶಭಕ್ತಿಯ ಕುರಿತು ವಿದ್ಯಾರ್ಥಿಗಳಿಗೆ ತಿಳಿಸಿ, ರಾಷ್ಟ್ರಸೇವೆಯ ಮೌಲ್ಯಗಳನ್ನು ಅಳವಡಿಸಿಕೊಳ್ಳುವಂತೆ ಕರೆ ನೀಡಿದರು. ಬಳಿಕ ಸಪ್ತಾಪುರದಿಂದ ಶಿವಾಲಯದವರೆಗೆ ವಿದ್ಯಾರ್ಥಿಗಳು, ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ದೇಶಭಕ್ತಿ ಘೋಷಣೆಗಳೊಂದಿಗೆ ಪಾದಯಾತ್ರೆ ನಡೆಸಿ ಹುತಾತ್ಮ ಯೋಧರ ಆತ್ಮಕ್ಕೆ ನಮನ ಸಲ್ಲಿಸಿದರು.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 