ದೈವಜ್ಞ ಬ್ರಾಹ್ಮಣ ಸಮಾಜದಿಂದ ಸತೀಶ್ ಶೇಜವಾಡಕರರಿಗೆ ಶ್ರದ್ಧಾಂಜಲಿ
Tributes to Satish Shejwadkar from the Daivajna Brahmin Samaj
ಹುಬ್ಬಳ್ಳಿ 30 : ದೈವಜ್ಞ ಬ್ರಾಹ್ಮಣ ಸಮಾಜದ ಯುವ ಮುಖಂಡ, ಸಮಾಜಸೇವಕ ಹಾಗೂ ಉತ್ತಮ ನಾಯಕತ್ವದಿಂದ ಗುರುತಿಸಿಕೊಂಡಿದ್ದ ದಿವಂಗತ ಸತೀಶ್ ಶೇಜವಾಡಕರ ಅವರ ಅಕಾಲಿಕ ನಿಧನಕ್ಕೆ ಸಂತಾಪ ಸೂಚಿಸಿ ದೈವಜ್ಞ ವಿದ್ಯಾವರ್ಧಕ ಸಂಘ, ದೈವಜ್ಞ ಮಹಿಳಾ ಮಂಡಳಿ ಹಾಗೂ ದೈವಜ್ಞ ಯುವಕ ಸಂಘಗಳ ಸಂಯುಕ್ತ ಆಶ್ರಯದಲ್ಲಿ ಶ್ರದ್ಧಾಂಜಲಿ ಸಭೆ ನಡೆಯಿತು.
ಸಭೆಯಲ್ಲಿ ಶೇಜವಾಡಕರ ಅವರ ಸಮಾಜಸೇವೆ, ನಾಯಕತ್ವ ಹಾಗೂ ಸಮಾಜದ ಅಭಿವೃದ್ಧಿಗೆ ನೀಡಿದ ಕೊಡುಗೆಯನ್ನು ಸ್ಮರಿಸಿ, ಅವರ ಆತ್ಮಕ್ಕೆ ಚಿರಶಾಂತಿ ಕೋರಿ ಎರಡು ನಿಮಿಷಗಳ ಮೌನಾಚರಣೆ ನಡೆಸಲಾಯಿತು.
ಸಭೆಯ ಅಧ್ಯಕ್ಷತೆ ವಹಿಸಿದ್ದ ದೈವಜ್ಞ ವಿದ್ಯಾವರ್ಧಕ ಸಂಘದ ಅಧ್ಯಕ್ಷ ವಿಜಯ್ ವೆರ್ಣೇಕರ್ ಮಾತನಾಡಿ, ಸತೀಶ್ ಶೇಜವಾಡಕರ ಅವರ ಅಗಲಿಕೆ ಸಮಾಜಕ್ಕೆ ತುಂಬಲಾರದ ನಷ್ಟವಾಗಿದೆ. ಅವರ ಆದರ್ಶ, ಸಮಾಜಸೇವಾ ಮನೋಭಾವ ಮತ್ತು ನಾಯಕತ್ವ ಯುವಜನತೆಗೆ ಸದಾ ಪ್ರೇರಣೆಯಾಗಲಿದೆ ಎಂದು ಹೇಳಿದರು. ಅವರ ಕುಟುಂಬ ಸದಸ್ಯರಿಗೆ ದುಃಖ ಭರಿಸುವ ಶಕ್ತಿ ದೊರೆಯಲಿ ಎಂದು ಪ್ರಾರ್ಥಿಸಲಾಯಿತು.
ಕಾರ್ಯಕ್ರಮದಲ್ಲಿ ಮಾರೂತಿ ವೆರ್ಣೇಕರ್, ರಾಜನ್ ಅಣವೇಕರ, ಪ್ರೇಮಾ ಭಟ್, ರಶ್ಮಿ ಅಣವೇಕರ, ಉದಯ್ ವೆರ್ಣೇಕರ್, ವೆಂಕಟೇಶ್ ರಾಯ್ಕರ್, ಸಂದೀಪ್ ಅಣವೇಕರ, ವಿವೇಕ್ ಅಣವೇಕರ ಸೇರಿದಂತೆ ಪದಾಧಿಕಾರಿಗಳು, ಕಾರ್ಯಕಾರಿ ಮಂಡಳಿ ಸದಸ್ಯರು ಹಾಗೂ ಸಮಾಜದ ಗಣ್ಯರು ಉಪಸ್ಥಿತರಿದ್ದು, ದಿವಂಗತರಿಗೆ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಿದರು.
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್
ವಿವಾಹಿತೆಯ ಜೊತೆ ಪಲಾಯನ ಮಾಡಿದ ಯುವಕನ ಮನೆ ಧ್ವಂಸ : ಮಾರಕಾಸ್ತ್ರ ಹಿಡಿದು 50ಕ್ಕು ಹೆಚ್ಚು ಜನರಿಂದ ಕೃತ್ಯ
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ
ಸಮೃದ್ಧಿ ಎಕ್ಸ್ಪ್ರೆಸ್ವೇಯಲ್ಲಿ ನಿಂತಿದ್ದ ಟ್ರಕ್ಗೆ ಕಾರು ಡಿಕ್ಕಿ ಹೊಡೆದು ಒಂದೇ ಕುಟುಂಬದ ಐವರು ಮೃತ
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು 