ಪಂಚಮಸಾಲಿ ಸಮಾಜದ ವಿವಿಧ ಕ್ಷೇತ್ರಗಳ ಸಾಧಕರಿಗೆ ಸನ್ಮಾನ
Tributes to achievers from various fields of Panchamasali society
ಇಂಡಿ 02: ವೀರರಾಣಿ ಕಿತ್ತೂರು ಚೆನ್ನಮ್ಮ ಸರ್ಕಾರಿ ಹಾಗೂ ಅರೆ ಸರ್ಕಾರಿ ನೌಕರರ ಸಹಕಾರಿ ಪತ್ತಿನ ಸಂಘ ವತಿಯಿಂದ ಸರ್ಕಾರಿ ನೌಕರರ ಸಂಘದ ಸಭಾಭವನದಲ್ಲಿ ಪಂಚಮಸಾಲಿ ಸಮಾಜದ ವಿವಿಧ ಇಲಾಖೆಯಲ್ಲಿ ಪದಾಧಿಕಾರಿಗಳಾಗಿ ಆಯ್ಕೆಯಾದ ಪಂಚಮಸಾಲಿ ಸಮಾಜದ ವಿವಿಧ ಸಾಧಕರನ್ನು ಸನ್ಮಾನಿಸಿ ಗೌರವಿಸಲಾಯಿತು. ಬಸವರಾಜ ರಾವೂರ ಉಪತಹಶೀಲ್ದಾರರು, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರು ಹಾಗೂ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಜಂಟಿ ಕಾರ್ಯದರ್ಶಿಗಳಾದ ಬೆಂಗಳೂರು. ಆದರ್ಶ ಶಿಕ್ಷಕಿ ಪ್ರಶಸ್ತಿ ಪುರಸ್ಕೃತರು ಹಾಗೂ ರಾಜ್ಯ ಉಪಾಧ್ಯಯರ ಪ್ರಗತಿ ಪರ ಸಂಘದ ಗೌರವ ಕಾರ್ಯದರ್ಶಿ ಹಾಗೂ ಚಿಕ್ಕಬೇನೂರ ಹಿರಿಯ ಪ್ರಾಥಮಿಕ ಶಾಲೆಯ ಗುರುಮಾತೆ ಸರೋಜಿನಿ ಮಾವಿನಮರ, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯರು ಹಾಗೂ ಪ್ರಚಾರ ಸಂಘಟನಾ ಸಮಿತಿ ಸದಸ್ಯರಾದ ರಮೇಶ ಮುಂಜಣ್ಣಿ, ತಾಂಬಾ ಸಮೂಹ ಸಂಪನ್ಮೂಲ ವ್ಯಕ್ತಿಗಳು ಎಸ್ ಆರ್ ಚಾಳಿಕಾರ,
ನಿವೃತ್ತ ಶಿಕ್ಷಕಿಯರಾದ ಸುವರ್ಣಾ ಕನಮಡಿ, ತಾಲೂಕು ಅತ್ಯುತ್ತಮ ಮೇಲ್ವಿಚಾರಕರು ಪ್ರಶಸ್ತಿ ಪಡೆದ ಬಂಥನಾಳ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ ಐ ಸಿ ಕಂಬಾರ, ನಾದ ಸರ್ಕಾರಿ ಪ್ರೌಢಶಾಲೆಯ ನಿವೃತ ಶಿಕ್ಷಕರಾದ ರಾಮಚಂದ್ರ ಬಿರಾದಾರ, ಅಥರ್ಗಾದ ನಿವೃತ್ತ ಶಿಕ್ಷಕಿಯರಾದ ಆರ್ ಜಿ ಗುಜರಿ, ಇಂಡಿ ಜಿ ಆರ್ ಗಾಂಧಿ ವಾಯ್ ಎ ಪಾಟೀಲ ಪದವಿ ಕಾಲೇಜು ಪ್ರಾಂಶುಪಾಲ ಎಸ್ ಜಿ ಸಣ್ಣಕ್ಕಿ ಹಾಗೂ ಗೌರವ ಡಾಕ್ಟರೇಟ್ ಪದವಿ ಪಡೆದ ಡಾ.ಸಿ ಎಸ್ ಬಿರಾದಾರ, ತಾಂಬಾ ಸರಕಾರಿ ಪ್ರೌಢಶಾಲೆಯ ಮುಖ್ಯಗುರು ಪಿ ಕೆ ಬಿರಾದಾರ ಹಾಗೂ ಎ ಎಂ ಇಂಡಿ. ವಿಜಯವಾಣಿ ಇಂಡಿ ತಾಲೂಕು ವರದಿಗಾರ ಉಮೇಶ್ ಬಳಬಟ್ಟಿ ಹಾಗೂ ಇಂಡಿ ತಾಲೂಕು ಲೋಕದರ್ಶನ ದಿನ ಪತ್ರಿಕೆಯ ವರದಿಗಾರ ಸಚೀನ ಇಂಡಿ ಸೇರಿದಂತೆ ಪಂಚಮಸಾಲಿ ಸಮಾಜದ ವಿವಿಧ ಸಾಧಕರನ್ನು ಸನ್ಮಾನಿಸಿ ಗೌರವಿಸಲಾಯಿತು. ಕಿತ್ತೂರು ರಾಣಿ ಚೆನ್ನಮ್ಮ ಸರ್ಕಾರಿ ಹಾಗೂ ಅರೆ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಕೆ ಎನ್ ಕಲ್ಯಾಣಿ ಉಪಾಧ್ಯಕ್ಷ ರೂಪಾ ಬಿರಾದಾರ ಸೇರಿದಂತೆ ಅನೇಕರು ಉಪಸ್ಥಿತರಿದ್ದರು. ಶಿಕ್ಷಕ ಬಸವರಾಜ ಗೋರನಾಳ ನಿರೂಪಿಸಿ ವಂದಿಸಿದರು.
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 