ಸ್ಕೇಟಿಂಗನಲ್ಲಿ ತ್ರಿಶಾ ಅವರಿಗೆ ಅಂತರಾಷ್ಟ್ರೀಯ ಮಟ್ಟದ ಪ್ರಶಸ್ತಿ
Trisha wins international award in skating
ಸ್ಕೇಟಿಂಗನಲ್ಲಿ ತ್ರಿಶಾ ಅವರಿಗೆ ಅಂತರಾಷ್ಟ್ರೀಯ ಮಟ್ಟದ ಪ್ರಶಸ್ತಿ
ಹುಬ್ಬಳ್ಳಿ 16: ಹೊರಕೇರಿ ಮಾಸ್ತರ ಶಿಕ್ಷಣ ಪ್ರತಿಷ್ಠಾನ, ರಾಣಿಚನ್ನಮ್ಮ ಪರಿಸರ ಸೇವಾ ಸಮಿತಿಯ, ಬಸವ ಪರಿಸರ ಸಂರಕ್ಷಣಾ ಸಮಿತಿಯ ವತಿಯಿಂದ ಆಯೋಜಿಸಿ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ಜೆ.ಜಿ.ವಾಣಿಜ್ಯ ಮಹಾವಿದ್ಯಾಲಯದ ವಿದ್ಯಾರ್ಥಿನಿ ತ್ರಿಶಾ ಪ್ರವೀಣ ಜಡಲಾ ಅವರು ಸ್ಕೇಟಿಂಗನಲ್ಲಿ ರಾಷ್ಟ್ರೀಯ, ಅಂತರಾಷ್ಟ್ರೀಯ ಮಟ್ಟದಲ್ಲಿ ಪ್ರಶಸ್ತಿ ಪುರಸ್ಕೃತರಾಗಿದ್ದಕ್ಕೆ ಸ್ಕೇಟರ್ ತ್ರಿಶಾ ಪ್ರವೀಣ ಜಡಲಾ ಅವರನ್ನು ಹೊರಕೇರಿ ಮಾಸ್ತರ ಶಿಕ್ಷಣ ಪ್ರತಿಷ್ಠಾನ, ರಾಣಿಚನ್ನಮ್ಮ ಪರಿಸರ ಸೇವಾ ಸಮಿತಿಯ, ಬಸವ ಪರಿಸರ ಸಂರಕ್ಷಣಾ ಸಮಿತಿಯ ವತಿಯಿಂದ ಮೇಯರ್ ಜ್ಯೋತಿ ಪಾಟೀಲ, ಉಪ ಮೇಯರ್ ಸಂತೋಷ ಚವ್ಹಾಣ, ಅವರು ಶಾಲು, ಮಾಲಾರೆ್ಣ, ಗ್ರಂಥ ನೀಡಿ ಆತ್ಮೀಯವಾಗಿ ಹುತ್ಪೂರ್ವಕವಾಗಿ ಗೌರವಿಸಿದರು. ಸ್ಕೇಟಿಂಗನಲ್ಲಿ ಇನ್ನೂ ಹೆಚ್ಚು ಸಾಧನೆ ಮಾಡಲಿ, ಯಶಸ್ಸು ಲಭಿಸಲಿ ಎಂದು ಶುಭ ಕೋರಿದರು. ಸೋಹನ ಸುರೇಶ ಹೊರಕೇರಿ, ರಾಣಿಚನ್ನಮ್ಮ ಪರಿಸರ ಸೇವಾ ಸಮಿತಿಯ ಕಾರ್ಯದರ್ಶಿ, ಬಸವ ಪರಿಸರ ಸಂರಕ್ಷಣಾ ಸಮಿತಿಯ ಕಾರ್ಯದರ್ಶಿ, ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿಯ ಜಿಲ್ಲಾ ಘಟಕದ ಉಪಾಧ್ಯಕ್ಷ, ಕರ್ನಾಟಕ ವಚನ ಸಾಹಿತ್ಯ ಪರಿಷತ್ನ ಜಿಲ್ಲಾ ಘಟಕದ ಕಾರ್ಯಾಧ್ಯಕ್ಷ, ಹೊರಕೇರಿ ಮಾಸ್ತರ ಶಿಕ್ಷಣ ಪ್ರತಿಷ್ಠಾನ ಟ್ರಸ್ಟಿ, ಗ್ರಂಥಪಾಲಕ ಡಾ. ಸುರೇಶ ಡಿ. ಹೊರಕೇರಿ, ರಾಣಿಚನ್ನಮ್ಮ ಪರಿಸರ ಸೇವಾ ಸಮಿತಿಯ ಅಧ್ಯಕ್ಷ, ಸಾಹಿತಿ ಪ್ರೊ ಎಸ್.ಎಂ.ಸಾತ್ಮಾರ, ಚನ್ನಬಸಪ್ಪ ಧಾರವಾಡಶೆಟ್ಟರ, ಸುಶೀಲಾ, ಗುರು ಬೆಂಗಳೂರು, ಮುಂತಾದವರು ಇದ್ದರು ಮಹರ್ಷಿ ವಾಲ್ಮೀಕಿ ಪ್ರತಿಮೆಗೆ ಹೊರಕೇರಿ ಮಾಸ್ತರ ಶಿಕ್ಷಣ ಪ್ರತಿಷ್ಠಾನ, ರಾಣಿಚನ್ನಮ್ಮ ಪರಿಸರ ಸೇವಾ ಸಮಿತಿಯ, ಬಸವ ಪರಿಸರ ಸಂರಕ್ಷಣಾ ಸಮಿತಿಯ ವತಿಯಿಂದ ಮಾಲಾರೆ್ಣ ಮಾಡಿ ಗೌರವ ನಮನ ಸಲ್ಲಿಸಲಾಯಿತು.
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 