ಲೋಕದರ್ಶನ ವರದಿ
ಬೈಲಹೊಂಗಲ 24: ಮಹಾರಾಷ್ಟ್ರ ರಾಜ್ಯದ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಹಾಗೂ ಮಿತ್ರಪಕ್ಷ ಶಿವಸೇನೆ ಜಯಭೇರಿ ಬಾರಿಸಿದ ಹಿನ್ನೆಲೆಯಲ್ಲಿ ಮಾಜಿ ಶಾಸಕ ಹಾಗೂ ಬಿಜೆಪಿ ಜಿಲ್ಲಾ ಗ್ರಾಮೀಣ ಅಧ್ಯಕ್ಷ ಡಾ.ವಿಶ್ವನಾಥ ಪಾಟೀಲ ನೇತೃತ್ವದಲ್ಲಿ ಪಟ್ಟಣದ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ನೂರಾರು ಬಿಜೆಪಿ ಕಾರ್ಯಕರ್ತರು ಪಟಾಕಿ ಸಿಡಿಸಿ ಸಿಹಿ ಹಂಚಿ ಸಂಭ್ರಮಿಸಿದರು.
ಬಿಜೆಪಿ ಜಿಲ್ಲಾ ಗ್ರಾಮೀಣ ಅಧ್ಯಕ್ಷ ಡಾ.ವಿಶ್ವನಾಥ ಪಾಟೀಲ ಮಾತನಾಡಿ, ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಕಳೆದ 5 ವರ್ಷದಲ್ಲಿ ಬಿಜೆಪಿ ಮಿತ್ರಪಕ್ಷ ಅವರ ಜನಪರ ಆಡಳಿತ ಮತ್ತೆ ಮಹಾರಾಷ್ರ್ಟದಲ್ಲಿ ಬಿಜೆಪಿ ಅಧಿಕಾರ ಚುಕ್ಕಾಣಿ ಹಿಡಿದಿರುವುದಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು.
ರಾಜ್ಯ ಬಿಜೆಪಿ ವಕ್ತಾರ ಎಂ.ಬಿ.ಜಿರಲಿ, ಧನಂಜಯ ಜಾಧವ, ಈರಣ್ಣ ಕಡಾಡಿ, ಮಡಿವಾಳಪ್ಪ ಹೋಟಿ, ಗುರುಪಾದ ಕಳ್ಳಿ, ಬಾಳನಗೌಡ ಪಾಟೀಲ, ಸಣ್ಣಮಡಿವಾಳಪ್ಪ ಹೋಟಿ, ಶ್ರೀಶೈಲ ಯಡಳ್ಳಿ, ಸಂಜಯ ಗಿರೆಪ್ಪಗೌಡ್ರ, ಉಮೇಶಗೌಡ ಪಾಟೀಲ, ಬಸನಗೌಡ ಪಾಟೀಲ, ಜಗದೀಶ ಜಂಬಗಿ, ಎಂ.ಬಿ.ತೋಟಗಿ, ರಾಜು ನರಸನ್ನವರ, ವಿಶಾಲ ಹೊಸೂರ, ಬಿ.ಎಮ್.ಚಿಕ್ಕನಗೌಡ್ರ,ಕಿರಣ ಅರವಳ್ಳಿ ಹಾಗೂ ನೂರಾರು ಬಿಜೆಪಿ ಕಾರ್ಯಕರ್ತರು ಇದ್ದರು.