ಟ್ರಂಪ್, ಬೋರಿಸ್ ಜಾನ್ಸನ್ ದ್ವಿಪಕ್ಷೀಯ ಮಾತುಕತೆ

ವಾಷಿಂಗ್ಟನ್, ಡಿ 17 (ಕ್ಸಿನ್ಹುವಾ) ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ದೂರವಾಣಿ ಮೂಲಕ ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್ ಅವರೊಂದಿಗೆ ದ್ವಿಪಕ್ಷೀಯ ಬಾಂಧವ್ಯ ಕುರಿತಂತೆ ಮಾತುಕತೆ ನಡೆಸಿದ್ದಾರೆ ಎಂದು ಶ್ವೇತಭವನ ತಿಳಿಸಿದೆ. ಅಮೆರಿಕ – ಬ್ರಿಟನ್ ಮುಕ್ತ ವ್ಯಾಪಾರ ಒಪ್ಪಂದ ಸೇರಿದಂತೆ ವಿವಿಧ ವಲಯಗಳಲ್ಲಿ ಸಹಕಾರ ಬಲವರ್ಧನೆಗೆ ಉಭಯ ನಾಯಕರು ತಮ್ಮ ಬದ್ಧತೆ ಪುನರುಚ್ಚರಿಸಿದ್ದಾರೆ ಎಂದು ಶ್ವೇತಭವನದ ಉಪ ಪತ್ರಿಕಾ ಕಾರ್ಯದರ್ಶಿ ಜುಡ್ ಡೇರೆ ಟ್ವೀಟ್ ಮಾಡಿದ್ದಾರೆ. ಬ್ರಿಟನ್ ಸಾರ್ವತ್ರಿಕ ಚುನಾವಣೆಯಲ್ಲಿ ಕನ್ಸರ್ವೇಟಿ ಪಕ್ಷದ ವಿಜಯಕ್ಕೆ ಬೋರಿಸ್ ಜಾನ್ಸನ್ ಅವರಿಗೆ ಟ್ರಂಪ್ ಅಭಿನಂದಿಸಿದ್ದಾರೆ ಎಂದೂ ಅವರು ತಿಳಿಸಿದ್ದಾರೆ. ಬ್ರೆಕ್ಸಿಟ್ ನಂತರ ಯುಕೆಯೊಂದಿಗೆ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಅಮೆರಿಕ ಸಿದ್ಧವಿದೆ ಎಂದು ಉಪಾಧ್ಯಕ್ಷ ಮೈಕ್  ಪೆನ್ಸ್ ಕಳೆದ ಸೆಪ್ಟೆಂಬರ್ ನಲ್ಲಿ ಹೇಳಿದ್ದರು.