ವಾಷಿಂಗ್ಟನ್, ಜನವರಿ 9 (ಸ್ಪುಟ್ನಿಕ್) ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತು ಇಸ್ರೇಲ್ ಪ್ರಧಾನಿ ಪ್ರಾದೇಶಿಕ, ಮತ್ತು ದ್ವಿಪಕ್ಷೀಯ ವಿಷಯಗಳ ಬಗ್ಗೆ ದೂರವಾಣಿಯಲ್ಲಿ ಚರ್ಚಿಸಿದ್ದಾರೆ ಎಂದು ಶ್ವೇತಭವನ ಹೇಳಿಕೆಯಲ್ಲಿ ತಿಳಿಸಿದೆ.ಇಂದು, ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರೊಂದಿಗೆ ಮಾತನಾಡಿದ್ದಾರೆ.ಉಭಯ ನಾಯಕರು ನಿರ್ಣಾಯಕ ದ್ವಿಪಕ್ಷೀಯ ಮತ್ತು ಪ್ರಾದೇಶಿಕ ವಿಷಯಗಳ ಬಗ್ಗೆ ವಿಶೇಷವಾಗಿ ಮಧ್ಯಪ್ರಾಚ್ಯದಲ್ಲಿ ಹೆಚ್ಚತ್ತಿರುವ ಉದ್ವಿಗ್ನತೆ ಮತ್ತು ಇತ್ತಿಚೆಗಿನ ಪರಿಸ್ಥಿತಿ ಕುರಿತು ಮಾತನಾಡಿದ್ದಾರೆ ಎಂದು ಶ್ವೇತಭವನದ ವಕ್ತಾರರರು ಹೇಳಿದ್ದಾರೆ .