ನವದೆಹಲಿ 09: 2019ರ ಗಣರಾಜ್ಯೋತ್ಸವಕ್ಕೆ ಅತಿಥಿಯಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆಗಮಿಸುವ ಸಾಧ್ಯತೆಗಳು ಕಡಿಮೆ ಎಂದು ಉನ್ನತ ಮೂಲಗಳಿಂದ ಮಾಹಿತಿ ಲಭ್ಯವಾಗಿದೆ.
ಭಾರತ ಸಕರ್ಾರ ಅಮೆರಿಕ ಅಧ್ಯಕ್ಷರಿಗೆ ಆಹ್ವಾನ ನೀಡಿರುವುದನ್ನು ಶ್ವೇತಭವನ ಖಚಿತಪಡಿಸಿದ್ದರೂ, ಉನ್ನತ ಮೂಲಗಳ ಪ್ರಕಾರ ಟ್ರಂಪ್ ಭಾರತದ ಗಣರಾಜ್ಯೋತ್ಸವದ ಮುಖ್ಯ ಅತಿಥಿಯಾಗಿ ಆಗಮಿಸ ಸಾಧ್ಯತೆ ಕಡಿಮೆ ಇದೆ. ಅದೇ ದಿನಗಳಲ್ಲಿ ಟ್ರಂಪ್ಗೆ ಬೇರೆ ಕಾರ್ಯಕ್ರಮಗಳಿರುವುದರಿಂದ ಭಾರತಕ್ಕೆ ಟ್ರಂಪ್ ಆಗಮನ ಸಾಧ್ಯವಿಲ್ಲ ಎನ್ನಲಾಗುತ್ತಿದೆ.
2015 ರಲ್ಲಿ ಭಾರತ ಸಕರ್ಾರ ಗಣರಾಜ್ಯೋತ್ಸವದ ಮುಖ್ಯ ಅತಿಥಿಯಾಗಿ ಅಂದಿನ ಅಮೆರಿಕ ಅಧ್ಯಕ್ಷ ಬರಾಕ್ ಒಬಾಮ ಅವರನ್ನು ಆಹ್ವಾನಿಸಿತ್ತು, ಬರಾಕ್ ಒಬಾಮ ಅತಿಥಿಯಾಗಿ ಪಾಲ್ಗೊಂಡಿದ್ದರು. ಇತ್ತೀಚಿನ ದಿನಗಳಲ್ಲಿ ಅಮೆರಿಕ-ಭಾರತ ನಡುವೆ ವಾಣಿಜ್ಯ ವಿಷಯಗಳಿಗೆ ಸಂಬಂಧಿಸಿದಂತೆ ತಲೆದೋರಿರುವ ಭಿನ್ನಾಭಿಪ್ರಾಯಗಳು ಹಾಗೂ ಇರನ ಜೊತೆಗಿನ ಭಾರತದ ದ್ವಿಪಕ್ಷೀಯ ಸಂಬಂಧ, ರಷ್ಯಾದಿಂದ ಶಸ್ತ್ರಾಸ್ತ್ರಗಳ ಆಮದು ಸೇರಿದಂತೆ ಹಲವು ವಿಷಯಗಳು ಟ್ರಂಪ್ ಭಾರತದ ಭೇಟಿಯ ನಿಧರ್ಾರದ ಮೇಲೆ ಪರಿಣಾಮ ಬೀರುತ್ತಿವೆ ಎಂದು ವಿಶ್ಲೇಷಿಸಲಾಗುತ್ತಿದೆ.