ನವದೆಹಲಿ, ಫೆ ೫ ,ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇದೇ ಮೊದಲ ಬಾರಿಗೆ ಫೆ ೨೩ ರಿಂದ ೨೬ ರವರೆಗೆ ಭಾರತಕ್ಕೆ ಭೇಟಿ ನೀಡಲಿದ್ದಾರೆ.ಭೇಟಿ ಸಂದರ್ಭದಲ್ಲಿ ಉನ್ನತ ಮಟ್ಟದ ಸಭೆಯಲ್ಲಿ ಅವರು ಪಾಲ್ಗೊಳ್ಳಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಸಭೆಯಲ್ಲಿ ರಕ್ಷಣಾ ಸಹಕಾರ ಪ್ರಮುಖವಾಗಿ ಚರ್ಚೆಯಾಗಲಿದೆ ಎಂದು ಹೇಳಲಾಗಿದೆ.ಅವರು ಆಗ್ರಾ ಮತ್ತು ಅಹಮದಾಬಾದ್ ಗೆ ಭೇಟಿ ನೀಡಲಿದ್ದಾರೆ ಎಂದೂ ಮೂಲಗಳು ತಿಳಿಸಿವೆ. ಕಳೆದ ವಾರ ಅಮೆರಿಕದ ಅಧಿಕಾರಿಗಳು ಭಾರತಕ್ಕೆ ಭೇಟಿ ನೀಡಿ ಸಿದ್ಧತೆ ಪರಿಶೀಲಿಸಿದ್ದಾರೆ.