ಲಕ್ನೋ, ಆ30 ಫಿರೋಜಾಬಾದ್ ಜಿಲ್ಲೆಯ ತುಂಡ್ಲಾ ವಿಧಾನಸಭಾ ಉಪಚುನಾವಣೆಗೆ ಪಕ್ಷದ ಅಭ್ಯರ್ಥಿಯಾಗಿ ಮಹಾರಾಜ್ ಸಿಂಗ್ ಧಂಗರ್ ಹೆಸರನ್ನು ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್ ಪ್ರಕಟಿಸಿದ್ದಾರೆ.
ತುಂಡ್ಲಾ ವಿಧಾನಸಭಾ ಕ್ಷೇತ್ರಕ್ಕೆ ಧಂಗರ್ ಪಕ್ಷದ ಅಭ್ಯರ್ಥಿಯಾಗಲಿದ್ದಾರೆ ಎಂದು ಪಕ್ಷದ ವಕ್ತಾರ ರಾಜೇಂದ್ರ ಚೌಧರಿ ಹೇಳಿದ್ದಾರೆ. ಚುನಾವಣಾ ಆಯೋಗವು ಉಪಚುನಾವಣೆಗಳ ದಿನಾಂಕವನ್ನು ಅಧಿಕೃತವಾಗಿ ಪ್ರಕಟಿಸಿಲ್ಲ.