ಅಂಕಾರಾ: ಟರ್ಕಿಯ ಪ್ರಸಿದ್ಧ ಸ್ಕಿ ರೆಸಾರ್ಟ್‌ನ ಹೋಟೆಲ್‌ನಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಮೃತಪಟ್ಟವರ ಸಂಖ್ಯೆ 76ಕ್ಕೆ ಏರಿಕೆಯಾಗಿದೆ.
’ರೆಸ್ಟೊರೆಂಟ್‌ನ 12ನೇ ಮಹಡಿಯಲ್ಲಿರುವ ಗ್ರಾಂಡ್ ಕರ್ತಾಲ್ ಹೋಟೆಲ್‌ನಲ್ಲಿ ಮಂಗಳವಾರ ಮುಂಜಾನೆ 3.30ರ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿತ್ತು. ಘಟನೆ ಸಂದರ್ಭದಲ್ಲಿ 234 ಅತಿಥಿಗಳು ಹೋಟೆಲ್‌ನಲ್ಲಿ ಇದ್ದರು. ಗಾಬರಿಗೊಂಡು ಕಟ್ಟಡದಿಂದ ಜಿಗಿದಿದ್ದರಿಂದ ಇಬ್ಬರು ಸಾವಿಗೀಡಾಗಿದ್ದಾರೆ’ ಎಂದು ಅಧಿಕಾರಿಗಳು ತಿಳಿಸಿದ್ದರು.
45 ಮೃತದೇಹಗಳನ್ನು ಅವರ ಕುಟುಂಬಗಳಿಗೆ ಹಸ್ತಾಂತರಿಸಲಾಗಿದೆ. ಇನ್ನುಳಿದವರ ಗುರುತು ಪತ್ತೆ ಹಚ್ಚಲು ಡಿಎನ್‌ಎ ಪರೀಕ್ಷೆ ನಡೆಸಲಾಗುತ್ತಿದೆ ಎಂದು ಎರ್ಲಿಕಯಾ ಮಾಹಿತಿ ನೀಡಿದ್ದಾರೆ.
ಘಟನೆ ಸಂಬಂಧ ಹೋಟೆಲ್‌ನ ಮಾಲೀಕ ಸೇರಿದಂತೆ ಒಂಬತ್ತು ಮಂದಿಯನ್ನು ಬಂಧಿಸಲಾಗಿದೆ ಎಂದು ಟರ್ಕಿಯ ಗೃಹ ಸಚಿವ ಆಲಿ ಎರ್ಲಿಕಯಾ ತಿಳಿಸಿದ್ದಾರೆ. ಅಗ್ನಿ ಅವಘಡಕ್ಕೆ ಕಾರಣ ಏನೆಂಬ ಬಗ್ಗೆ ತನಿಖೆ ನಡೆಯುತ್ತಿದೆ.