ಬದರಿನಾಥ್ ಹೆದ್ದಾರಿಯಲ್ಲಿ ಟ್ರಾವೆಲರೊಂದು ಕಮರಿಗೆ ಬಿದ್ದು ಹನ್ನೆರಡು ಜನ ಸಾವು

ರುದ್ರಪ್ರಯಾಗ 15: ಉತ್ತರಾಖಂಡದ ರುದ್ರಪ್ರಯಾಗ ಜಿಲ್ಲೆಯ ಬದರಿನಾಥ್ ಹೆದ್ದಾರಿಯಲ್ಲಿ ಶನಿವಾರ ಟೆಂಪೋ ಟ್ರಾವೆಲರೊಂದು ಆಳವಾದ ಕಮರಿಗೆ ಬಿದ್ದ ಪರಿಣಾಮ ಹನ್ನೆರಡು ಜನ ಸಾವನ್ನಪ್ಪಿದ್ದಾರೆ ಮತ್ತು ಹತ್ತು ಮಂದಿ ಗಾಯಗೊಂಡಿದ್ದಾರೆ.

ಟೆಂಪೋ ಟ್ರಾವೆಲರ್ ಜನಪ್ರಿಯ ಪ್ರವಾಸಿ ತಾಣವಾದ ಚೋಪ್ಟಾಗೆ ತೆರಳುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ಎಸ್‌ಡಿಆರ್‌ಎಫ್ ಮತ್ತು ಪೊಲೀಸ್ ತಂಡಗಳು ರಕ್ಷಣಾ ಕಾರ್ಯಾಚರಣೆ ನಡೆಸುತ್ತಿವೆ.

ಘಟನೆಯ ಕುರಿತು ಪ್ರತಿಕ್ರಿಯಿಸಿದ ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ, "ರುದ್ರಪ್ರಯಾಗ ಜಿಲ್ಲೆಯಲ್ಲಿ ಟೆಂಪೋ ಟ್ರಾವೆಲರ್ ಅಪಘಾತವಾದ ಸುದ್ದಿ ತಿಳಿದು ದುಃಖವಾಗಿದೆ. ಸ್ಥಳೀಯ ಆಡಳಿತ ಮತ್ತು ಎಸ್‌ಡಿಆರ್‌ಎಫ್ ತಂಡಗಳು ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿವೆ. ಗಾಯಾಳುಗಳನ್ನು ಹತ್ತಿರದ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ ಎಂದರು.

ಈ ಘಟನೆಯ ಕುರಿತು ತನಿಖೆ ನಡೆಸುವಂತೆ ಜಿಲ್ಲಾ ಮ್ಯಾಜಿಸ್ಟ್ರೇಟ್‌ಗೆ ಆದೇಶ ನೀಡಲಾಗಿದೆ ಎಂದು ಪುಷ್ಕರ್ ಸಿಂಗ್ ಧಾಮಿ ಅವರು ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ.