ಕೊರೊನಾವೈರಸ್ ವಿರುದ್ಧ ಹೋರಾಟಕ್ಕೆ ಟ್ವಿಟರ್ ಸಿಇಒ ಒಂದು ಶತಕೋಟಿ ಡಾಲರ್ ದೇಣಿಗೆ
ವಾಷಿಂಗ್ಟನ್, ಏಪ್ರಿಲ್ 8, ಮಾರಕ ಕೊರೊನವೈರಸ್ (ಕೊವಿದ್ -19) ವಿರುದ್ಧದ ಜಾಗತಿಕ ಹೋರಾಟಕ್ಕೆ ಟ್ವಿಟರ್ ಸಂಸ್ಥಾಪಕ ಮತ್ತು ಸಿಇಒ ಜ್ಯಾಕ್ ಡಾರ್ಸೆ ಒಂದು ಶತಕೋಟಿ ಡಾಲರ್ ದೇಣಿಗೆ ನೀಡಿದ್ದಾರೆ. ‘ಜಾಗತಿಕ ಕೊವಿದ್-19 ಪರಿಹಾರ ಕಾರ್ಯಕ್ಕೆ ಒಂದು ಶತಕೋಟಿ ಡಾಲರ್ (ತಮ್ಮ ಸಂಪತ್ತಿನ ಶೇ 28ರಷ್ಟು) ದೇಣಿಗೆಯಾಗಿ ನೀಡುತ್ತಿದ್ದೇನೆ.’ ಎಂದು ಡಾರ್ಸೆ ಮಂಗಳವಾರ ಟ್ವಿಟ್ಟರ್ ಮೂಲಕ ತಿಳಿಸಿದ್ದಾರೆ.ಕರೋನವೈರಸ್ ಇಡೀ ವಿಶ್ವಕ್ಕೇ ವ್ಯಾಪಿಸಿರುವ ಹಿನ್ನೆಲೆಯಲ್ಲಿ ವಿಶ್ವದಾದ್ಯಂತ ಬಾಲಕಿಯರ ಆರೋಗ್ಯ ಮತ್ತು ಶಿಕ್ಷಣ ಕಾರ್ಯಕ್ರಮಗಳಿಗೆ ಆರ್ಥಿಕ ನೆರವು ನೀಡುವುದಾಗಿ ಡಾರ್ಸೆ ತನ್ನ ಟ್ವೀಟ್‌ನಲ್ಲಿ ಭರವಸೆ ನೀಡಿದ್ದಾರೆ.‘ಮಾರಕ ಸೋಂಕಿನ ಹಿನ್ನೆಲೆಯಲ್ಲಿ ಹೆಣ್ಣು ಮಕ್ಕಳ ಆರೋಗ್ಯ ಮತ್ತು ಶಿಕ್ಷಣದ ಕಡೆ ಗಮನ ಹರಿಸಬೇಕಿದೆ. ಇದಕ್ಕಾಗಿ ನಿಧಿಯೊಂದನ್ನು ಆರಂಭಿಸಲಾಗಿದ್ದು, ಇದಕ್ಕೆಹರಿದು ಬರುವ ಎಲ್ಲ ದೇಣಿಗೆಗಳ ಮೇಲೆ ನಿಗಾ ವಹಿಸಲಾಗುವುದು ಎಂದು ಅವರು ಹೇಳಿದ್ದಾರೆ. ಟ್ವಿಟರ್ ವೇದಿಕೆಯಲ್ಲಿ ದಾಖಲಿಸಲಾದ ಎಲ್ಲಾ ದೇಣಿಗೆಗಳೊಂದಿಗೆ ಈ ನಿಧಿ ಪಾರದರ್ಶಕವಾಗಿ ಕಾರ್ಯನಿರ್ವಹಿಸುತ್ತದೆ ಎಂದು ಡಾರ್ಸೆ ಹೇಳಿದ್ದಾರೆ,
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 