ತೆಲಂಗಾಣದ ಔಷಧ ತಯಾರಿಕಾ ಘಟಕದಲ್ಲಿ ರಿಯಾಕ್ಟರ್ ಸ್ಫೋಟ: ಇಬ್ಬರು ಕಾರ್ಮಿಕರು ಸಾವು, 9 ಮಂದಿಗೆ ಗಾಯ

ತೆಲಂಗಾಣದ ಔಷಧ ತಯಾರಿಕಾ ಘಟಕದಲ್ಲಿ ರಿಯಾಕ್ಟರ್ ಸ್ಫೋಟ: ಇಬ್ಬರು ಕಾರ್ಮಿಕರು ಸಾವು, 9 ಮಂದಿಗೆ ಗಾಯ Two Workers Killed, Nine Injured in Reactor Blast at Telangana Pharma Unit

ಹೈದರಾಬಾದ್, ಆ. 22 : ತೆಲಂಗಾಣದ ಯಾದಾದ್ರಿ-ಭುವನಗಿರಿ ಜಿಲ್ಲೆಯ ಪೊಚಂಪಲ್ಲಿ ಮಂಡಲದ ದೊಥಿಗುಡೆಂ ಗ್ರಾಮದಲ್ಲಿರುವ ಔಷಧ ತಯಾರಿಕಾ ಘಟಕದಲ್ಲಿ ಶುಕ್ರವಾರ ತಡರಾತ್ರಿ ಸಂಭವಿಸಿದ ರಿಯಾಕ್ಟರ್ ಸ್ಫೋಟದಲ್ಲಿ ಕನಿಷ್ಠ ಇಬ್ಬರು ಕಾರ್ಮಿಕರು ಮೃತಪಟ್ಟಿದ್ದು, 9 ಮಂದಿ ಗಾಯಗೊಂಡಿದ್ದಾರೆ. ಗಾಯಗೊಂಡವರಲ್ಲಿ ಇಬ್ಬರ ಸ್ಥಿತಿ ಗಂಭೀರವಾಗಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.

ಗಾಯಗೊಂಡ ಕಾರ್ಮಿಕರನ್ನು ಚಿಕಿತ್ಸೆಗಾಗಿ ವಿವಿಧ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಸ್ಫೋಟದ ಬಳಿಕ ಕಾಣಿಸಿಕೊಂಡ ಬೆಂಕಿಯನ್ನು ನಿಯಂತ್ರಣಕ್ಕೆ ತರಲಾಗಿದೆ. ಈ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

ಘಟನೆಗೆ ಸಂಬಂಧಿಸಿದ ಹೆಚ್ಚಿನ ವಿವರಗಳು ಇನ್ನಷ್ಟೇ ಲಭ್ಯವಾಗಬೇಕಿದೆ.