ಅಕ್ರಮ ಚಟುವಟಿಕೆಗಲ್ಲಿ ಭಾಗಿ : ಇಬ್ಬರು ಆರೋಪಿತರು ಬೆಳಗಾವಿ ಜಿಲ್ಲೆಯಿಂದ ಗಡಿಪಾರು
Two accused involved in illegal activities deported from Belgaum district
ಬೆಳಗಾವಿ : ಜಿಲ್ಲೆಯ ಕಾಗವಾಡ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಓಸಿ, ಮಟಕಾ ಸೇರಿದಂತೆ ಅಕ್ರಮ ಚಟುವಟಿಕೆಗಳಲ್ಲಿ ಭಾಗಿಯಾಗಿ ಸಮಾಜದ ಸ್ವಾಸ್ಥ್ಯಕ್ಕೆ ಧಕ್ಕೆಯುಂಟು ಮಾಡುತ್ತಿದ್ದ ಇಬ್ಬರು ಆರೋಪಿತರನ್ನು ಬೆಳಗಾವಿ ಜಿಲ್ಲೆಯಿಂದ ಹೊರ ಜಿಲ್ಲೆಗೆ ಗಡಿಪಾರು ಮಾಡಲಾಗಿದೆ.
ಮನೋಜ ರುದ್ರಪ್ಪ ಕಾಂಬಳೆ (ಸಾ: ಮೋಳೆ ತಾ: ಕಾಗವಾಡ) ಹಾಗೂ ಶಬ್ಬಿರ ಬಾದಷಾ ಪಠಾಣ (ಸಾ: ಉಗಾರ ಖುರ್ದ ತಾ:ಕಾಗವಾಡ) ಇವರಿಬ್ಬರು ಗಡಿಪಾರಾದ ಆರೋಪಿತರಾಗಿದ್ದಾರೆ.
ಉಪವಿಭಾಗೀಯ ದಂಡಾಧಿಕಾರಿಗಳು (ಎಸಿ) ಚಿಕ್ಕೋಡಿ ಉಪ ವಿಭಾಗ ಇವರುದಿ. 01-04-2026 ರಂದು ಕರ್ನಾಟಕ ಪೊಲೀಸ ಕಾಯಿದೆ -1963 ರ ಕಲಂ: 55 ಮತ್ತು 56(ಜಿ) ರನ್ವಯ ಸದರಿ ಆರೋಪಿತರಿಗೆ 3 ತಿಂಗಳ ಅವಧಿಗೆ ವಿಜಯಪುರ ಜಿಲ್ಲೆಗೆ ಗಡಿಪಾರು ಮಾಡಿಆದೇಶ ಮಾಡಿರುತ್ತಾರೆ.
ಮನೋಜ ರುದ್ರಪ್ಪ ಕಾಂಬಳೆ ಇತನಿಗೆ ವಿಜಯಪುರ ಜಿಲ್ಲೆಯ ಸಿಂಧಗಿ ಪೊಲೀಸ ಠಾಣೆ ವ್ಯಾಪ್ತಿಗೆ ಮತ್ತು ಶಬ್ಬಿರ ಬಾದಷಾ ಪಠಾಣ ಇವನಿಗೆ ವಿಜಯಪುರ ಜಿಲ್ಲೆಯ ಗಾಂಧಿ ಚೌಕ ಪೊಲೀಸ ಠಾಣೆ ವ್ಯಾಪ್ತಿಗೆ ಸ್ಥಳಾಂತರಿಸಲಾಗಿದೆ.
ಕಾನೂನು ಬಾಹಿರ ಚಟುವಟಿಕೆಗಳನ್ನು ನಿಯಂತ್ರಿಸಲು ಹಾಗೂ ಸಾರ್ವಜನಿಕ ನೆಮ್ಮದಿಯನ್ನು ಕಾಪಾಡುವುದಕ್ಕಾಗಿ 2 ಜನ ಆರೋಪಿತರನ್ನು ಬೆಳಗಾವಿ ಜಿಲ್ಲೆಯಿಂದ ಗಡಿಪಾರು ಮಾಡಲಾಗಿದ್ದು, ಇನ್ನು ಮುಂದೆಯೂ ಸಹ ಇದೇ ರೀತಿ ಆರೋಪಿತರ ವಿರುದ್ಧ ಮೇಲೆ ಕಠಿಣ ಕ್ರಮಗಳನ್ನು ಕೈಗೋಳ್ಳಲಾವುದು ಎಂದು ಪೊಲೀಸರು ತಿಳಿಸಿದ್ದಾರೆ.
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ಮಗನಿಗಾಗಿ 2ನೇ ದಿನವು ಮುಂದುವರಿದ ಶೋಧ ಕಾರ್ಯ: ಕುಟುಂಬಕ್ಕಿದ್ದ ಒಬ್ಬನೆ ಮಗು ನೀರುಪಾಲು
ಅಕ್ರಮ ಚಟುವಟಿಕೆಗಲ್ಲಿ ಭಾಗಿ : ಇಬ್ಬರು ಆರೋಪಿತರು ಬೆಳಗಾವಿ ಜಿಲ್ಲೆಯಿಂದ ಗಡಿಪಾರು 