ತಂಪು ಪಾನೀಯ ಅಂಗಡಿಗಳಲ್ಲಿ ಅಕ್ರಮ ಮದ್ಯ ಮಾರಾಟ: ಇಬ್ಬರು ವಶಕ್ಕೆ
Two arrested for selling illegal liquor in soft drink shops
ಸವದತ್ತಿ 01: ಪುಣ್ಯಕ್ಷೇತ್ರವಾದ ಯಲ್ಲಮ್ಮನಗುಡ್ಡದಲ್ಲಿ ತಂಪು ಪಾನೀಯ ಅಂಗಡಿಗಳ ಮೇಲೆ ಪೊಲೀಸರು ದಾಳಿ ನಡೆಸಿದ್ದು, ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ಇಬ್ಬರು ವ್ಯಕ್ತಿಗಳನ್ನು ವಶಕ್ಕೆ ಪಡೆದಿದ್ದಾರೆ.
ಯಲ್ಲಮ್ಮನಗುಡ್ಡದ ಕೆಲವು ಕೋಲ್ಡ್ ಡ್ರಿಂಕ್ಸ್ ಅಂಗಡಿಗಳಲ್ಲಿ ಮದ್ಯವನ್ನು ಅಕ್ರಮವಾಗಿ ಸಂಗ್ರಹಿಸಿ, ಗುಪ್ತವಾಗಿ ಮಾರಾಟ ಮಾಡಲಾಗುತ್ತಿದೆ ಎಂಬ ಖಚಿತ ಮಾಹಿತಿ ಪೊಲೀಸರಿಗೆ ಲಭಿಸಿತ್ತು. ಈ ಮಾಹಿತಿಯ ಮೇರೆಗೆ ತಕ್ಷಣ ಯಲ್ಲಮ್ಮ ಅಭಿವೃದ್ಧಿ ಪ್ರಾಧಿಕಾರ ಕಾರ್ಯದರ್ಶಿ ಪ್ರಭಾವತಿ ಫಕೀರಪುರ,ಇವರ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿ ಪೊಲೀಸರು, ಅಕ್ರಮ ಮಾರಾಟದಲ್ಲಿ ತೊಡಗಿದ್ದ ಭೀಮಪ್ಪ ಕೃಷ್ಣಪ್ಪ ಲಮಾಣಿ, ಹಾಗೂ ಶಿವಪ್ಪ ಗಂಗಪ್ಪ ಲಮಾಣಿ, ಎಂಬುವವರು ಅಂಗಡಿಗಳಲ್ಲಿ ಅಕ್ರಮವಾಗಿ ಇರಿಸಲಾಗಿದ್ದ ಮದ್ಯದ ಬಾಟಲಿಗಳನ್ನು ಪೊಲೀಸರು ಜಪ್ತಿ ಮಾಡಿದ್ದಾರೆ.
ಈ ಕುರಿತು ಸವದತ್ತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಲಿಸಿದ್ದಾರೆ."ಪವಿತ್ರ ಕ್ಷೇತ್ರಗಳಲ್ಲಿ ಇಂತಹ ಕಾನೂನುಬಾಹಿರ ಚಟುವಟಿಕೆಗಳು ನಡೆಯುತ್ತಿರುವುದು ಖಂಡನೀಯ. ಭಕ್ತರ ಭಾವನೆಗಳಿಗೆ ಧಕ್ಕೆ ತರುವ ಇಂತಹ ಕೃತ್ಯಗಳಿಗೆ ಪೊಲೀಸರು ಸಂಪೂರ್ಣವಾಗಿ ಕಡಿವಾಣ ಹಾಕಬೇಕು" ಎಂದು ಸ್ಥಳೀಯರು ಮತ್ತು ಭಕ್ತರು ಆಗ್ರಹಿಸಿ ಮುಂದಿನ ದಿನಗಳಲ್ಲಿ ಇಂತಹ ಅಕ್ರಮಗಳು ನಡೆಯದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವುದಾಗುವುದು ಎಂದು ಪ್ರಭಾವತಿ ಫಕೀರಪುರ, ತಿಳಿಸಿದ್ದಾರೆ.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 