ಅಕ್ರಮ ಬಡ್ಡಿ ವ್ಯವಹಾರ ಪ್ರಕರಣದಲ್ಲಿ ಇಬ್ಬರ ಬಂಧನ
Two arrested in illegal usury case
ಲೋಕದರ್ಶನ ವರದಿ
ಮುಂಡಗೋಡ 29: ಅಕ್ರಮ ಬಡ್ಡಿ ವ್ಯವಹಾರ ನಡೆಸಿ ಸಾರ್ವಜನಿಕರಿಗೆ ಕಿರುಕುಳ ನೀಡುವುದು ಹಾಗೂ ಕಾನೂನು ಸುವ್ಯವಸ್ಥೆಗೆ ಧಕ್ಕೆ ಉಂಟುಮಾಡಿದ ಆರೋಪದ ಹಿನ್ನೆಲೆಯಲ್ಲಿ ಮುಂಡಗೋಡ ಪಟ್ಟಣದ ಮಂಜುನಾಥ ಅರ್ಜುನ ನವಲೆ (30) ಹಾಗೂ ತಾಲೂಕಿನ ಬಸಾಪುರ ಗ್ರಾಮದ ಮಧುಸಿಂಗ್ ರಜಪೂತ್ (31) ಅವರನ್ನು ಆರು ತಿಂಗಳ ಅವಧಿಗೆ ಉತ್ತರ ಕನ್ನಡ ಜಿಲ್ಲೆಯಿಂದ ಗಡಿಪಾರು ಮಾಡಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆದೇಶ ಹೊರಡಿಸಿದ್ದಾರೆ. ಆದೇಶದಂತೆ, ಮಂಜುನಾಥ ಅರ್ಜುನ ನವಲೆ ಅವರನ್ನು ಕೋಲಾರ ಜಿಲ್ಲೆಯ ಕೆ.ಜಿ.ಎಫ್ಗೆ ಹಾಗೂ ಮಧುಸಿಂಗ್ ರಜಪೂತ್ ಅವರನ್ನು ಮಂಡ್ಯ ಜಿಲ್ಲೆಗೆ ಆರು ತಿಂಗಳ ಕಾಲ ಕಳುಹಿಸಲಾಗಿದೆ.
ಗಡಿಪಾರು ಅವಧಿಯಲ್ಲಿ ಇಬ್ಬರೂ ಉತ್ತರ ಕನ್ನಡ ಜಿಲ್ಲೆಯ ಯಾವುದೇ ಭಾಗಕ್ಕೆ ಪ್ರವೇಶಿಸುವಂತಿಲ್ಲ. ಮಂಜುನಾಥ ಅರ್ಜುನ ನವಲೆ ವಿರುದ್ಧ ಮುಂಡಗೋಡ ಪೊಲೀಸ್ ಠಾಣೆಯಲ್ಲಿ ಭಾರತೀಯ ನ್ಯಾಯ ಸಂಹಿತೆ ವಿವಿಧ ಕಲಂಗಳು ಹಾಗೂ ಕರ್ನಾಟಕ ಅಕ್ರಮ ಬಡ್ಡಿ ವಸೂಲಿ ನಿಷೇಧ ್ಣ್ಖ್ಲೂ್ಪುಹಿ2004್ಘಳ್ತ ನಾಲ್ಕು ಪ್ರತ್ಯೇಕ ಪ್ರಕರಣಗಳು ದಾಖಲಾಗಿವೆ. ಇದೇ ರೀತಿ, ಮಧುಸಿಂಗ್ ರಜಪೂತ್ ವಿರುದ್ಧವೂ ಅಕ್ರಮ ಬಡ್ಡಿ ವ್ಯವಹಾರ ಮತ್ತು ಸಾರ್ವಜನಿಕ ಶಾಂತಿಗೆ ಧಕ್ಕೆ ಉಂಟುಮಾಡಿದ ಆರೋಪಗಳಿಗೆ ಸಂಬಂಧಿಸಿದ ಪ್ರಕರಣಗಳು ದಾಖಲಾಗಿದ್ದು, ಇಬ್ಬರ ವಿರುದ್ಧವೂ ಕರ್ನಾಟಕ ಪೊಲೀಸ್ ಕಾಯ್ದೆ ಕಲಂ 55ರಡಿ ಗಡಿಪಾರು ಕ್ರಮಕ್ಕೆ ಮುಂಡಗೋಡ ಪೊಲೀಸರು ಪ್ರಸ್ತಾವನೆ ಸಲ್ಲಿಸಿದ್ದರು.
ಪ್ರಸ್ತಾವನೆಯನ್ನು ಪರೀಶೀಲಿಸಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ, ಆರೋಪಿಗಳ ಚಟುವಟಿಕೆಗಳು ಸಾರ್ವಜನಿಕ ಶಾಂತಿ, ನೆಮ್ಮದಿ ಹಾಗೂ ಕಾನೂನು ಸುವ್ಯವಸ್ಥೆಗೆ ಧಕ್ಕೆಯಾಗುವ ಸಾಧ್ಯತೆ ಇರುವುದಾಗಿ ಪರಿಗಣಿಸಿ ಗಡಿಪಾರು ಆದೇಶ ಹೊರಡಿಸಿದ್ದಾರೆ. ಗಡಿಪಾರು ಅವಧಿಯಲ್ಲಿ ಆದೇಶವನ್ನು ಉಲ್ಲಂಘಿಸಿ ಉತ್ತರ ಕನ್ನಡ ಜಿಲ್ಲೆಯ ವ್ಯಾಪ್ತಿಗೆ ಪ್ರವೇಶಿಸಿದರೆ ಸಂಬಂಧಿತ ಕಾನೂನುಗಳಡಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಪೊಲೀಸ್ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ
ಗಾಂಜಾ ಮಾರಾಟ : ಕೊಲೆ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿತನ ಬಂಧನ
ಪತ್ರಕರ್ತರ ಸೋಗಿನಲ್ಲಿ ವ್ಯಕ್ತಿಯಿಂದ 1.60 ಲಕ್ಷ ಹಣ ಸುಲಿಗೆ: ನಾಲ್ವರು ಯೂಟ್ಯೂಬರ್ಗಳ ಬಂಧನ
ಸದಲಗಾ ಪೊಲೀಸರ ಕಾರ್ಯಾಚರಣೆ: ಅಂತರರಾಜ್ಯ ಬೈಕ್ ಕಳ್ಳರ ಬಂಧನ, 5 ದ್ವಿಚಕ್ರವಾಹನಗಳ ವಶ 