ಎರಡು ಕಾರುಗಳು ಮುಖಾಮುಖಿ ಡಿಕ್ಕಿ: ಎಂಟು ಜನ ಗಂಭೀರ ಗಾಯ

ಬೈಲಹೊಂಗಲ 02: ಎರಡು ಕಾರುಗಳು ಮುಖಾಮುಖಿ ಡಿಕ್ಕಿ ಸಂಭವಿಸಿ ಎಂಟು ಜನರು ಗಂಭೀರ ಗಾಯಗೊಂಡ ಘಟನೆ ತಾಲೂಕಿನ ನಯಾನಗರ ಗ್ರಾಮದ ಹತ್ತಿರ ಸೋಮವಾರ ನಡೆದಿದೆ. 

ನಯಾನಗರ ಗ್ರಾಮದ ಮಲಪ್ರಭಾ ನದಿ ಹತ್ತಿರದ ದಾಬಾ ದಾಟಿ ಸಂಚರಿಸುತ್ತಿದ್ದ ಮಾರುತಿ 800 ಮತ್ತು ಅಲ್ಟೋ ಕಾರು ಪರಸ್ಪರ ಡಿಕ್ಕಿ ಹೊಡಿದಿವೆ. ಅಪಘಾತದ ರಭಸಕ್ಕೆ ಕಾರುಗಳು ಸಂಪೂರ್ಣ ಜಖಂಗೊಂಡು ನೂಜ್ಜೂಗುಜ್ಜಾಗಿವೆ.  

ಚಾಲಕರಾದ ಲಿಂಗದಳ್ಳಿ ಗ್ರಾಮದ ಕಿರಣ ಅಡಿವೆಪ್ಪ ಪೂಜೇರ, ಆನಿಗೋಳದ ಮಹಾಂತೇಶ ರಾಮನಿಂಗಪ್ಪ ಕುರಿ ಸೇರಿದಂತೆ ಎಂಟು ಜನರು ಗಾಯಗೊಂಡಿದ್ದಾರೆ. 

ಗಾಯಗೊಂಡವರನ್ನು ಸ್ಥಳೀಯರ ಸಹಾಯದಿಂದ ಅಂಬ್ಯುಲೆನ್ಸ್‌ ಮೂಲಕ ಚಿಕಿತ್ಸೆಗಾಗಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಸಂಚಾರ ಸುಗಮಗೊಳಿಸಿ ತನಿಖೆ ನಡೆಸಿದರು.