ತೆಕ್ಕಲಕೋಟೆಯಲ್ಲಿ ಜಂಟಿ ದಾಳಿ ಹಿ ಇಬ್ಬರು ಬಾಲಕಾರ್ಮಿಕರ ರಕ್ಷಣೆ
Two child laborers rescued in joint raid in Tekkalakot
ಲೋಕದರ್ಶನ ವರದಿ
ಬಳ್ಳಾರಿ 29 : ಸಿರುಗುಪ್ಪ ತಾಲೂಕಿನ ತೆಕ್ಕಲಕೋಟೆ ಪಟ್ಟಣದಲ್ಲಿ ವಿವಿಧ ಇಲಾಖೆಗಳ ಜಂಟಿ ಆಶ್ರಯದಲ್ಲಿ ಸೋಮವಾರ ಹಠಾತ್ ದಾಳಿ ನಡೆಸಿ, ಇಬ್ಬರು ಬಾಲಕಾರ್ಮಿಕರನ್ನು ರಕ್ಷಿಸಲಾಗಿದೆ. ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಜಿಲ್ಲಾ ಬಾಲಕಾರ್ಮಿಕ ಯೋಜನೆ, ಕಂದಾಯ ಇಲಾಖೆ, ಕಾರ್ಮಿಕ ಇಲಾಖೆ, ಶಿಕ್ಷಣ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಪೊಲೀಸ್ ಇಲಾಖೆ ಹಾಗೂ ಚೈಲ್ಡ್ಲೈನ್ ಸಹಯೋಗದೊಂದಿಗೆ ತೆಕ್ಕಲಕೋಟೆ ಪಟ್ಟಣ ಪಂಚಾಯತಿ ಸಭಾಂಗಣದಲ್ಲಿ ತಾಲೂಕು ಮಟ್ಟದ ಟಾಸ್ಕ್ ಫೋರ್ಸ್ ಸಮಿತಿ ಸಭೆಯನ್ನು ನಡೆಸಲಾಯಿತು. ನಂತರ ಪಟ್ಟಣದ ವ್ಯಾಪ್ತಿಯಲ್ಲಿ ಬರುವ ಗ್ಯಾರೇಜ್, ಹೋಟೆಲ್, ಬೇಕರಿ, ಕಿರಾಣಿ ಅಂಗಡಿ, ಬಟ್ಟೆ ಅಂಗಡಿ ಸೇರಿದಂತೆ ಸುಮಾರು 20 ಉದ್ದಿಮೆಗಳ ಮೇಲೆ ಅಧಿಕಾರಿಗಳ ತಂಡ ಜಂಟಿ ದಾಳಿ ನಡೆಸಿತು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ
ಗಾಂಜಾ ಮಾರಾಟ : ಕೊಲೆ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿತನ ಬಂಧನ
ಪತ್ರಕರ್ತರ ಸೋಗಿನಲ್ಲಿ ವ್ಯಕ್ತಿಯಿಂದ 1.60 ಲಕ್ಷ ಹಣ ಸುಲಿಗೆ: ನಾಲ್ವರು ಯೂಟ್ಯೂಬರ್ಗಳ ಬಂಧನ
ಸದಲಗಾ ಪೊಲೀಸರ ಕಾರ್ಯಾಚರಣೆ: ಅಂತರರಾಜ್ಯ ಬೈಕ್ ಕಳ್ಳರ ಬಂಧನ, 5 ದ್ವಿಚಕ್ರವಾಹನಗಳ ವಶ 