ತೆಕ್ಕಲಕೋಟೆಯಲ್ಲಿ ಜಂಟಿ ದಾಳಿ ಹಿ ಇಬ್ಬರು ಬಾಲಕಾರ್ಮಿಕರ ರಕ್ಷಣೆ

ತೆಕ್ಕಲಕೋಟೆಯಲ್ಲಿ ಜಂಟಿ ದಾಳಿ ಹಿ ಇಬ್ಬರು ಬಾಲಕಾರ್ಮಿಕರ ರಕ್ಷಣೆ Two child laborers rescued in joint raid in Tekkalakot

ಲೋಕದರ್ಶನ ವರದಿ 

ಬಳ್ಳಾರಿ 29 : ಸಿರುಗುಪ್ಪ ತಾಲೂಕಿನ ತೆಕ್ಕಲಕೋಟೆ ಪಟ್ಟಣದಲ್ಲಿ ವಿವಿಧ ಇಲಾಖೆಗಳ ಜಂಟಿ ಆಶ್ರಯದಲ್ಲಿ ಸೋಮವಾರ ಹಠಾತ್ ದಾಳಿ ನಡೆಸಿ, ಇಬ್ಬರು ಬಾಲಕಾರ್ಮಿಕರನ್ನು ರಕ್ಷಿಸಲಾಗಿದೆ. ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಜಿಲ್ಲಾ ಬಾಲಕಾರ್ಮಿಕ ಯೋಜನೆ, ಕಂದಾಯ ಇಲಾಖೆ, ಕಾರ್ಮಿಕ ಇಲಾಖೆ, ಶಿಕ್ಷಣ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಪೊಲೀಸ್ ಇಲಾಖೆ ಹಾಗೂ ಚೈಲ್ಡ್‌ಲೈನ್ ಸಹಯೋಗದೊಂದಿಗೆ ತೆಕ್ಕಲಕೋಟೆ ಪಟ್ಟಣ ಪಂಚಾಯತಿ ಸಭಾಂಗಣದಲ್ಲಿ ತಾಲೂಕು ಮಟ್ಟದ ಟಾಸ್ಕ್‌ ಫೋರ್ಸ್‌ ಸಮಿತಿ ಸಭೆಯನ್ನು ನಡೆಸಲಾಯಿತು. ನಂತರ ಪಟ್ಟಣದ ವ್ಯಾಪ್ತಿಯಲ್ಲಿ ಬರುವ ಗ್ಯಾರೇಜ್, ಹೋಟೆಲ್, ಬೇಕರಿ, ಕಿರಾಣಿ ಅಂಗಡಿ, ಬಟ್ಟೆ ಅಂಗಡಿ ಸೇರಿದಂತೆ ಸುಮಾರು 20 ಉದ್ದಿಮೆಗಳ ಮೇಲೆ ಅಧಿಕಾರಿಗಳ ತಂಡ ಜಂಟಿ ದಾಳಿ ನಡೆಸಿತು.