ಅರೇ ಕಾನೂನು ಸ್ವಯಂ ಸೇವಕರಿಗೆ ಎರಡು ದಿನದ ತರಬೇತಿ ಕಾರ್ಯಾಗಾರ ಪ್ರತಿಯೊಬ್ಬರಿಗೆ ಕಾನೂನು ಅರಿವು ಮುಖ್ಯ: ಜಿಲ್ಲಾ ನ್ಯಾಯಾಧೀಶೆ ನಾಗವೇಣಿ
Two-day training workshop for Array Law Volunteers Legal awareness is important for everyone: Distri
ಗದಗ 29: ಜಿಲ್ಲಾ ನ್ಯಾಯಾಲಯದ ಆವರಣದಲ್ಲಿನ ಎ.ಡಿ.ಆರ್ ಕಟ್ಟಡದಲ್ಲಿ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಬೆಂಗಳೂರು, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಗದಗ, ಜಿಲ್ಲಾ ವಕೀಲರ ಸಂಘ ಹಾಗೂ ಡೀಡ್ಸ, ಮಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅರೇ ಕಾನೂನು ಸ್ವಯಂ ಸೇವಕರಿಗೆ ತರಬೇತಿ ಕಾರ್ಯಾಗಾರ ಸಮಾರಂಭ ನಡೆಯಿತು.ಜಿಲ್ಲೆಯಾಧ್ಯಂತ 240ಕ್ಕೂ ಹೆಚ್ಚು ಅರೇ ಕಾನೂನು ಸ್ವಯಂ ಸೇವಕರಾಗಿ ನೇಮಕಗೊಂಡಿದ್ದಾರೆ. ಪ್ರತಿಯೊಬ್ಬರಿಗೂ ಕಾನೂನು ಅರಿವು ಮುಖ್ಯವಾಗಿದೆ. ಸಮಾಜಕ್ಕಾಗಿ ದುಡಿಯಲು ವಾಲೆಂಟೆರ್ಸ್ ಗಳು ಸಿದ್ದರಿದ್ದಾರೆ.
ಅವರು ಮನೆ-ಮನೆಗೆ ತೆರಳಿ ಸಾರ್ವಜನಿಕರ ಸಮಸ್ಯೆ ಆಲಿಸಲು ಸಿದ್ದರಿದ್ದಾರೆ. ಅವರು ಕಾನೂನು ಚೌಕಟ್ಟಿನಲ್ಲಿ ಸಮಸ್ಯೆಗಳನ್ನು ಆಲಿಸಬೇಕು. ಇದರಿಂದ ದೇಶವನ್ನು ಅಭಿವೃದ್ದಿಯತ್ತ ಕೊಂಡೊಯ್ಯಲು ಸಾಧ್ಯವಾಗುತ್ತದೆ. ಶಾಲೆ ಬಿಟ್ಟ ಮಕ್ಕಳನ್ನು ಸಹ ಈ ಮೂಲಕ ಮರಳಿ ಶಾಲೆಗೆ ಸೇರಿಸಬಹುದು. ಗದಗ ಜಿಲ್ಲೆಯನ್ನು ಸಮಸ್ಯೆ ಮುಕ್ತ ಮಾಡಲು ಶ್ರಮಿಸೋಣ ಅಂತ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಮತ್ತು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಶ್ರೀಮತಿ ನಾಗವೇಣಿ ಹೇಳಿದರು.ಜಿಲ್ಲಾ ವಕೀಲರ ಸಂಘದ ಉಪಾಧ್ಯಕ್ಷ ಎಮ್.ಎ ಸಂಕನಾಳ ಮಾತನಾಡಿ, ಕಾನೂನು ತಿಳುವಳಿಕೆ ಪ್ರತಿಯೊಬ್ಬ ನಾಗರಿಕನ ಮುಖ್ಯ ಉದ್ದೇಶವಾಗಿದೆ. ಆತ್ಮರಕ್ಷಣೆಗಾಗಿ ಕಾನೂನು ಅವಶ್ಯಕತೆ ಇದೆ. ಕಾನೂನು ಕಾರ್ಯಗಾರಗಳಿಂದ ಉತ್ತಮ ಸಮಾಜ ನಿರ್ಮಿಸಲು ಸಹಾಯವಾಗುತ್ತದೆ ಎಂದರು.
ಮಹಿಳಾ ವಾಲೆಂಟರ್ಸ್ ಗಳಾದ ರೂಪಾ ಹಾಗೂ ನಿರ್ಮಲಾ ಪ್ರಾರ್ಥನಾ ಗೀತೆ ಹಾಡಿದರು. ಎ. ಎಸ್ ಮಕಾನಾದಾರ ಸ್ವಾಗತಿಸಿದರು. ಫಕ್ಕಿರಮ್ಮ ಲಕ್ಕುಂಡಿ ಕಾರ್ಯಕ್ರಮವನ್ನು ನಿರೂಪಿಸಿದರು.ಈ ಸಂದರ್ಭದಲ್ಲಿ ಹಿರಿಯ ವಕೀಲರಾದ ಜಿ. ಸಿ ರೇಷ್ಮಿ, ಡೀಡ್ಸ್ ಯೋಜನಾ ಸಂಯೋಜಕರಾದ ತುಕಾರಾಮ್ ಎಕ್ಕಾರು, ಮುಖ್ಯ ಕಾನೂನು ನೆರವು ಅಭಿಕ್ಷಕರಾದ ಎಸ್. ವ್ಹಿ ಗ್ರಾಮಪುರೋಹಿತ ಹಾಗೂ ಸಹಾಯಕ ಕಾನೂನು ನೆರವು ಅಭಿರಕ್ಷಕರಾದ ಗುರುರಾಜ ಬಿ. ಗೌರಿ ಉಪಸ್ಥಿತರಿದ್ದರು.ಕೋಟ್... ಸಮಾಜದ ಕಟ್ಟ ಕಡೆಯ ವ್ಯಕ್ತಿಗೂ ನ್ಯಾಯ ದೊರಕಬೇಕು ಎನ್ನುವುದೇ ಈ ಕಾರ್ಯಕ್ರಮದ ಮೂಲ ಉದ್ದೇಶವಾಗಿದೆ. ಸಮಾಜದ ಎಲ್ಲ ವಿಭಾಗಗಳಿಂದ ವಾಲೆಂಟರ್ಸ್ ಗಳನ್ನು ಆಯ್ಕೆ ಮಾಡಿಕೊಳ್ಳಲಾಗಿದೆ. ಇದರಿಂದ ಉತ್ತಮ ಸಮಾಜ ನಿರ್ಮಿಸುವಲ್ಲಿ ಸಹಾಯವಾಗುತ್ತದೆ. ಜಿ. ಆರ್ ಶೆಟ್ಟರ್ ಸಿ.ಜೆ.ಎಮ್ ಹಾಗೂ ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶ
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 