ತುಮಕೂರು, ಮೇ12,ಆಕಸ್ಮಿಕ ಬೆಂಕಿ ಬಿದ್ದ ಪರಿಣಾಮ ಎರಡು ಹುಲ್ಲಿನ ಬಣವೆ ಸುಟ್ಟು ಕರಕಲಾಗಿರುವ ಘಟನೆ ಜಿಲ್ಲೆಯ ತುರುವೇಕೆರೆ ತಾಲೂಕಿನ ಸಂಗಲಾಪುರದಲ್ಲಿ ಮಂಗಳವಾರ ಸಂಭವಿಸಿದೆ.
ಸಂಗಲಾಪುರದ ಮಹಾಲಿಂಗಪ್ಪ ಹಾಗೂ ರುದ್ರೇಶ್ ಎಂಬುವವರಿಗೆ ಸೇರಿದ ಹುಲ್ಲಿನ ಬಣವೆ ಇದಾಗಿದೆ ಎಂದು ತಿಳಿದು ಬಂದಿದೆ.ವಿಷಯ ತಿಳಿಯುತ್ತಿದ್ದಂತೆ ಅಗ್ನಿ ಶಾಮಕ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿ ಹರಸಹಾಸ ಪಟ್ಟು ಬೆಂಕಿ ನಂದಿಸಿದ್ದಾರೆ. ಆದರೆ ಬಹುತೇಕ ಹುಲ್ಲು ಬೆಂಕಿಗೆ ಆಹುತಿಯಾಗಿದೆ.ಎರಡು ಹುಲ್ಲು ಬಣವೆಗೆ ಬೆಂಕಿ ಬಿದ್ದ ಹಿನ್ನೆಲೆಯಲ್ಲಿ ಲಕ್ಷಾಂತರ ರೂ. ನಷ್ಟವಾಗಿದೆ ಎಂದು ಅಂದಾಜಿಸಲಾಗಿದೆ.ಘಟನೆಗೆ ಸಂಬಂಧಿಸಿದಂತೆ ತುರುವೇಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.