ಇರಾಕ್‌ನಲ್ಲಿ ಬಾಂಬ್ ಸ್ಫೋಟ: ಇಬ್ಬರು ಸಾವು

ಮಾಸ್ಕೋ, ಫೆ 13 :  ಪೂರ್ವ ಇರಾಕ್‌ನ ಖಾನಕಿನ್ ನಗರದಲ್ಲಿ ಗುರುವಾರ ನಡೆದ ಭಯೋತ್ಪಾದಕ ದಾಳಿಯಲ್ಲಿ  ಇಬ್ಬರು ಮೃತಪಟ್ಟಿದ್ದು, ಇತರೆ   12 ಮಂದಿ ಗಾಯಗೊಂಡಿದ್ದಾರೆ ಎಂದು ಮೂಲಗಳನ್ನು ಉಲ್ಲೇಖಿಸಿ ಅಲ್ಸುಮೇರಿಯಾ ಪ್ರಸಾರ ಸಂಸ್ಥೆ ವರದಿ ಮಾಡಿದೆ.

"ಖಾನಕಿನ್ ಹೊರವಲಯದಲ್ಲಿರುವ ನಾಗರಿಕರು ಮತ್ತು ಭದ್ರತಾ ಪಡೆಗಳ ಮೇಲೆ ಭಯೋತ್ಪಾದಕರು ದಾಳಿ ನಡೆಸಿದ್ದಾರೆ . ಜನರನ್ನು  ಸುರಕ್ಷಿತ  ಸ್ಥಳಕ್ಕೆ ಸ್ಥಳಾಂತರಿಸುವ ಸಮಯದಲ್ಲಿ ಬಾಂಬ್ ಸ್ಫೋಟಗೊಂಡು ಇಬ್ಬರು ಸಾವನ್ನಪ್ಪಿದ್ದಾರೆ.

ಈ ಘಟನೆಯಲ್ಲಿ ಇತರೆ  12 ಮಂದಿ ಗಾಯಗೊಂಡಿದ್ದಾರೆ  ಎಂದು ಮೂಲಗಳು ತಿಳಿಸಿದ್ದು, ಗಾಯಾಳುಗಳನ್ನು  ವೈದ್ಯಕೀಯ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.