ತಾಲೂಕಾಸ್ಪತ್ರೆಯಲ್ಲಿ ಎರಡು ನೂತನ ಡಯಾಲಿಸಸ್ ಯಂತ್ರ ಉದ್ಘಾಟನೆ
Two new dialysis machines inaugurated at Taluka Hospital
ಹಾನಗಲ್ 23: ಇಲ್ಲಿನ ತಾಲೂಕಾಸ್ಪತ್ರೆಯಲ್ಲಿ ಎರಡು ನೂತನ ಡಯಾಲಿಸಸ್ ಯಂತ್ರಗಳನ್ನು ಶಾಸಕ ಶ್ರೀನಿವಾಸ ಮಾನೆ ಉದ್ಘಾಟಿಸಿದರು.
ತಾಲೂಕಾಸ್ಪತ್ರೆಯಲ್ಲಿ ಎಚ್‌ಐವಿ, ಹೆಪಟೈಟಿಸ್ ಬಿ ಮತ್ತು ಹೆಪಟೈಟಿಸ್ ಸಿ ಸೋಂಕಿತರಿಗೆ ಪ್ರತ್ಯೇಕವಾಗಿ ಡಯಾಲಿಸಸ್ ವ್ಯವಸ್ಥೆ ಮಾಡಲಾಗಿದೆ. ಈ ರೀತಿ ಪ್ರತ್ಯೇಕ ವ್ಯವಸ್ಥೆ ಹಾವೇರಿ ಜಿಲ್ಲಾಸ್ಪತ್ರೆ ಮತ್ತು ರಾಣೇಬೆನ್ನೂರು ತಾಲೂಕಾಸ್ಪತ್ರೆಯಲ್ಲಿ ಮಾತ್ರ ಇದ್ದು, ಹಾನಗಲ್ ತಾಲೂಕಾಸ್ಪತ್ರೆಯಲ್ಲಿಯೂ ಕಲ್ಪಿಸಲಾಗುತ್ತಿದೆ. ಈಗಾಗಲೇ ತಾಲೂಕಾಸ್ಪತ್ರೆಯಲ್ಲಿ 50 ಲಕ್ಷ ರೂ. ವೆಚ್ಚದಲ್ಲಿ ಅತ್ಯಾಧುನಿಕ ಮಾದರಿಯ ಪ್ರಯೋಗಾಲಯ ಆರಂಭಿಸಲಾಗಿದ್ದು, 110 ಕ್ಕೂ ಹೆಚ್ಚು ಮಾದರಿಯ ಪರೀಕ್ಷೆ ಮಾಡಲಾಗುತ್ತಿದೆ. 50 ಲಕ್ಷ ರೂ. ವೆಚ್ಚದಲ್ಲಿ ಬಣ್ಣ ಹಚ್ಚಿ, ನವೀಕರಣ ಮಾಡುವ ಕಾಮಗಾರಿ ಕೈಗೊಳ್ಳಲಾಗಿದೆ. ಕಟ್ಟಡ ಸೋರುವುದನ್ನು ತಡೆಯಲು ತಗಡಿನ ಮೇಲ್ಛಾವಣಿ ಹಾಕಲಾಗಿದೆ. ಹೊಸದಾಗಿ ಕೊಳವೆ ಬಾವಿ ಕೊರೆಯಿಸಿ ತಾಲೂಕಾಸ್ಪತ್ರೆಯಲ್ಲಿ ಅಗತ್ಯ ಮೂಲಭೂತ ಸೌಲಭ್ಯ ಕಲ್ಪಿಸಲಾಗಿದೆ ಎಂದು ಈ ಸಂದರ್ಭದಲ್ಲಿ ಶಾಸಕ ಮಾನೆ ತಿಳಿಸಿದರು.
ಈ ಸಂದರ್ಭದಲ್ಲಿ ಪುರಸಭೆ ಅಧ್ಯಕ್ಷೆ ರಾಧಿಕಾ ದೇಶಪಾಂಡೆ, ಮಾಜಿ ಅಧ್ಯಕ್ಷೆ ಮಮತಾ ಆರೆಗೊಪ್ಪ, ಮಾಜಿ ಉಪಾಧ್ಯಕ್ಷೆ ಶಂಶಿಯಾ ಬಾಳೂರ, ಗ್ಯಾರಂಟಿ ಅನುಷ್ಠಾನ ಸಮಿತಿಯ ತಾಲೂಕಾಧ್ಯಕ್ಷ ವಿಜಯಕುಮಾರ ದೊಡ್ಡಮನಿ, ಕೆಪಿಸಿಸಿ ಸದಸ್ಯರಾದ ಟಾಕನಗೌಡ ಪಾಟೀಲ, ಖ್ವಾಜಾಮೊಹಿದ್ದೀನ್ ಜಮಾದಾರ, ಮುಖಂಡರಾದ ಈರಣ್ಣ ಬೈಲವಾಳ, ಆದರ್ಶ ಶೆಟ್ಟಿ, ಇರ್ಫಾನ್ ಮಿಠಾಯಿಗಾರ, ಇರ್ಫಾನ್ ಸೌದಾಗರ, ಖಾಲಿದ್ ಶೇಷಗಿರಿ, ಶಕೀಲ್ ಬಾಳೂರ, ಸುರೇಶ ನಾಗಣ್ಣನವರ, ಬಸವರಾಜ ಡುಮ್ಮನವರ, ಆಡಳಿತ ವೈದ್ಯಾಧಿಕಾರಿ ಡಾ.ಬಸವರಾಜ್ ಸೇರಿದಂತೆ ಅನೇಕರಿದ್ದರು.
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ 