ಜಿಲ್ಲೆಗೆ ಎರಡು ಮೆಟ್ರಿಕ್ ನಂತರದ ವಸತಿ ನಿಲಯಗಳು ಮಂಜೂರು
Two post-matric hostels sanctioned for the district
ಜಿಲ್ಲೆಗೆ ಎರಡು ಮೆಟ್ರಿಕ್ ನಂತರದ ವಸತಿ ನಿಲಯಗಳು ಮಂಜೂರು
ವಿಜಯಪುರ 29: ಎಂಜಿನಿಯರಿಂಗ್ ಮತ್ತು ಮೆಡಿಕಲ್ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಅನುಕೂಲವಾಗಲು ಜಿಲ್ಲೆಗೆ ಎರಡು ಮೆಟ್ರಿಕ್ ನಂತರದ ವಸತಿ ನಿಲಯಗಳು ಮಂಜೂರಾಗಿವೆ ಎಂದು ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ತಿಳಿಸಿದ್ದಾರೆ.ವಸತಿ ನಿಲಯ ಪ್ರಾರಂಭಿಸುವಂತೆ ನೂರಾರು ವಿದ್ಯಾರ್ಥಿಗಳು ನನಗೆ ಮನವಿ ಸಲ್ಲಿಸಿದ್ದರು. ಈ ಕುರಿತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಗೆ ಪ್ರಸ್ತಾವನೆ ಸಲ್ಲಿಸಲಾಗಿತ್ತು. ಈಗ ಸರಕಾರ ರಾಜ್ಯದಲ್ಲಿ ಒಟ್ಟು 62 ವಸತಿ ನಿಲಯ ಪ್ರಾರಂಭಿಸಲು ನಿರ್ಧರಿಸಿದ್ದು, ವಿಜಯಪುರ ಜಿಲ್ಲೆಗೆ ಎರಡು ಹಾಸ್ಟೇಲುಗಳನ್ನು ಮಂಜೂರು ಮಾಡಿದೆ.ಇದರಿಂದ ಎಂಜಿನಿಯರಿಂಗ್ ಮತ್ತು ಮೆಡಿಕಲ್ ವಿದ್ಯಾರ್ಥಿಗಳು ತಮ್ಮ ವೃತ್ತಿಪರ ಶಿಕ್ಷಣವನ್ನು ಪೂರ್ಣಗೊಳಿಸಲು ಸಹಾಯವಾಗಲಿದೆ ಎಂದು ಸಚಿವ ಎಂ. ಬಿ. ಪಾಟೀಲ ಅವರು ಮಾಧ್ಯಮ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದಾರೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 