ಕಾರವಾರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
Two tourists rescued from drowning in Karwar
ಕಾರವಾರ 14 : ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರನ್ನು ಸ್ಥಳೀಯ ಯುವಕರು ರಕ್ಷಣೆ ಮಾಡಿದ ಘಟನೆ ಇಲ್ಲಿನ ರವೀಂದ್ರನಾಥ್ ಟಾಗೋರ್ ಕಡಲ ತೀರದಲ್ಲಿ ನಡೆದಿದೆ. ಇಂದು ಬೆಳಿಗ್ಗೆ ರವೀಂದ್ರನಾಥ್ ಕಡಲ ತೀರದಲ್ಲಿ ಪ್ರವಾಸಿಗರು ಸಮುದ್ರಕ್ಕೆ ಇಳಿದಿದ್ದರು. ಮಳೆಗಾಲ ಸಮೀಪಿಸುತ್ತಿದ್ದಂತೆ ಸಮುದ್ರದ ಅಲೆಗಳ ಅಬ್ಬರ ಮತ್ತು ವೇಗ ಹೆಚ್ಚುತ್ತದೆ ಎಂಬುದನ್ನು ಅರಿಯದೆ ಪ್ರವಾಸಿಗರು ಕಡಲಿಗೆ ಮೋಜಿಗಾಗಿ ಇಳಿದಿದ್ದರು .
ಪರಿಣಾಮ ಅಲೆಗಳ ಅಬ್ಬರಕ್ಕೆ ಪ್ರವಾಸಿಗರು ಸಿಲುಕಿದರು. ಕಡಲ ತೀರದಲ್ಲಿ ಕ್ರಿಕೆಟ್ ಆಡುತ್ತಿದ್ದ ಸ್ಥಳೀಯ ಯುವಕರು ಸಮುದ್ರಕ್ಕೆ ಧುಮುಕಿ ಮುಳುಗುತ್ತಿದ್ದ ಓರ್ವಯುವಕ ಹಾಗೂ ಒಬ್ಬ ಬಾಲಕನನ್ನು ರಕ್ಷಣೆ ಮಾಡಿದರು. ಗೌತಮ್ ಬಾನಾವಳಿ, ಸಾಯಿನಾಥ್, ವಿಘ್ನೇಶ್, ಅಮನ್, ಅಜಯ್ ಎಂಬ ಯುವಕರು ಜೀವದ ಹಂಗು ತೊರೆದು ಪ್ರವಾಸಿಗರನ್ನು ರಕ್ಷಣೆ ಮಾಡಿದರು. ಕಡಲ ತೀರದಲ್ಲಿ ಸಮುದ್ರಕ್ಕೆ ಮಳೆಗಾಲ ಸಮೀಪಿಸುವ ಮುನ್ನ ಇಳಿಯಬಾರದು ಎಂದು ಪ್ರವಾಸಿಗರಿಗೆ ಸೂಚಿಸಿದರು. ಪ್ರಾಣ ಉಳಿದ ಕ್ಷಣ ನೆನೆದು ಇತರೆ ಪ್ರವಾಸಿಗರು ನಿಟ್ಟುಸಿರು ಬಿಟ್ಟರು.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 