ದಿ .10ರಂದು ತ್ಯಾಗವೀರ ಸಿರಸಂಗಿ ಲಿಂಗರಾಜರ 164ನೇ ಜಯಂತಿ ಉತ್ಸವ: ರಕ್ತದಾನ ಶಿಬಿರ

Tyagaveera Sirasangi Lingaraja 164th Jayanti Festival: Blood Donation Camp

ಬೆಳಗಾವಿ 09: ಮಹಾದಾನಿ, ತ್ಯಾಗವೀರ ಸಿರಸಂಗಿ ಲಿಂಗರಾಜರ 164ನೇ ಜಯಂತಿ ಉತ್ಸವವು ಇದೇ 10 ಜನವರಿ 2025 ರಂದು ಲಿಂಗರಾಜ ಮಹಾವಿದ್ಯಾಲಯದ ಕೇಂದ್ರ ಸಭಾಗೃಹದಲ್ಲಿ ಮುಂಜಾನೆ 11.00 ಗಂಟೆಗೆ ಜರುಗಲಿದೆ. 

ಸಾನ್ನಿಧ್ಯವನ್ನು ಕಾರಂಜಿಮಠದ ಪೂಜ್ಯ  ಗುರುಸಿದ್ಧ ಮಹಾಸ್ವಾಮೀಜಿಯವರು ವಹಿಸಲಿದ್ದರು, ಅತಿಥಿ ಉಪನ್ಯಾಸಕರಾಗಿ ಸಾಹಿತಿ ಬಾಗಲಕೋಟೆ ಪ್ರಥಮದರ್ಜೆ ಕಾಲೇಜಿನ ಪ್ರಾಧ್ಯಾಪಕ ಪ್ರೊ.ಜಿ.ಜಿ.ಹಿರೇಮಠ ಅವರು ಆಗಮಿಸಲಿದ್ದಾರೆ. ಅಧ್ಯಕ್ಷತೆಯನ್ನು ಕೆಎಲ್‌ಇ ಸಂಸ್ಥೆಯ ಅಧ್ಯಕ್ಷರು ಹಾಗೂ ಬೈಲಹೊಂಗಲ ಶಾಸಕರಾದ ಮಹಾಂತೇಶ ಕೌಜಲಗಿಯವರು ವಹಿಸಲಿದ್ದಾರೆ. ಲಿಂಗರಾಜ ಜಯಂತಿ ಉತ್ಸವ ಸಮಿತಿಯ ಅಧ್ಯಕ್ಷರು ಹಾಗೂ ಕೆಎಲ್‌ಇ ಸಂಸ್ಥೆಯ ಉಪಾಧ್ಯಕ್ಷರಾದ ಶ್ರೀ ಬಸವರಾಜ ತಟವಟಿಯವರು ಆಗಮಿಸಲಿದ್ದಾರೆ.  

10 ರಂದು ಮುಂಜಾನೆ 9.00  ಗಂಟೆಯಿಂದ ಕೆಎಲ್‌ಇ ಸಂಸ್ಥೆಯ ಡಾ.ಪ್ರಭಾಕರ ಕೋರೆ ಆಸ್ಪತ್ರೆ ಹಾಗೂ ಸಂಶೋಧನಾ ಕೇಂದ್ರದ ರಕ್ತಭಂಡಾರದ ಸಹಯೋಗದಲ್ಲಿ  ರಕ್ತದಾನ ಶಿಬಿರವನ್ನು ಆಯೋಜಿಸಲಾಗಿದೆ. ಬಹುಸಂಖ್ಯೆಯಲ್ಲಿ ರಕ್ತದಾನಿಗಳು ಆಗಮಿಸಿ ಯಶಸ್ಸುಗೊಳಿಸಬೇಕೆಂದು ಉತ್ಸವ ಸಮಿತಿಯ ಕಾರ್ಯಾಧ್ಯಕ್ಷರಾದ ಪ್ರಾಚಾರ್ಯ ಡಾ.ಎಚ್‌.ಎಸ್‌.ಮೇಲಿನಮನಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.