ಕರೂರು ಗ್ರಾಮದಲ್ಲಿ ವಿಶೇಷ ಚೇತನರ ಯುಡಿಐಡಿ ಮಾಸಾಚರಣೆ
UDID Month celebration for special needs in Karur village
ರಾಣೇಬೆನ್ನೂರು 22: ತಾಲೂಕಿನ ಕರೂರ ಗ್ರಾಮದಲ್ಲಿ ಯುಡಿಐಡಿ ಮಾಶಚಾರಣೆಯ ವಿಶೇಷ ಚೇತನರು ಗ್ರಾಮ ಪಂಚಾಯತಿಯ ಪುನರ್ವಸತಿ ಕಾರ್ಯಕರ್ತರ ಬಳಿ 13 ಯೋಜನೆಗಳ ಬಗ್ಗೆ ಸಮಗ್ರ ಮಾಹಿತಿ ಪಡೆದು ಸಮಾಜದ ಮುಖ್ಯ ವಾಹಿನಿಗೆ ಬರಬೇಕು ಎಂದು ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ನಾಯಕಿ ಶಾಂತ ಪಟ್ಟಣಶೆಟ್ಟಿ ಹೇಳಿದರು.
ಅವರು ಗ್ರಾಮದ ಸತ್ಯ ಶಿವಾನಂದ ಮಠದಲ್ಲಿ ಬುಧವಾರ ನಡೆದ ಜಿಲ್ಲಾ ವಿಕಲ ಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಹಾವೇರಿ ಕರ್ನಾಟಕ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ಜಿಲ್ಲಾ ಘಟಕ, ಕರೂರು ಶ್ರೀ ರೇಣುಕಾಬಾ ಕ್ಷೇಮಾಭಿವೃದ್ಧಿ ಸಹಕಾರಿ ಸಂಘ, ಕರೂರ ಗ್ರಾಮ ಪಂಚಾಯತ ಏರಿ್ಡಸಿದ್ದರು.
ಕಾರ್ಯಕ್ರಮದಲ್ಲಿ ತಾಲೂಕ ಘಟಕದ ಅಧ್ಯಕ್ಷ ಗಣೇಶ ನಂದಿಗಾವಿ ಮಾತನಾಡಿ, ಜಿಲ್ಲೆಯ 231 ಗ್ರಾಮ ಪಂಚಾಯತಿಗಳಲ್ಲಿ ಕಾರ್ಯ ನಿವಹಿಸುತ್ತಿರುವ ಪುನರ್ವಸತಿ ಕಾರ್ಯಕರ್ತೆಯರಿಗೆ, ಪ್ರತೇಕ ಕೊಠಡಿ, ಮೂಲಭೂತ ಸೌಲಭ್ಯ, ಕಂಪ್ಯೂಟರ್ ಮತ್ತು ಪ್ರಿಂಟರ್ ಒದಗಿಸಬೇಕೆಂದರು. ಸಿಇಓ ಆದೇಶ ಇದ್ದರೂ ಇದುವರೆಗೂ ಸೌಲಭ್ಯಗಳ ವಿತರಣೆಯಾಗಿಲ್ಲ. ಈ ಕೂಡಲೇ ವಿತರಣೆಗೆ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಸಭೆಯಲ್ಲಿ ಅರೋಗ್ಯ ಇಲಾಖೆಯ ರಾಘವೇಂದ್ರ, ಸುಧಾ, ಅನಿತಾ, ಗಂಗಮ್ಮ, ಮಂಜುನಾಥ್ ಕನ್ನಗೌಡ್ರ, ಮಮತಾ ಕನ್ನಾಳ, ಕವಿತಾ ಹೆಗಡೆ ಸೇರಿದಂತೆ ವಿಶೇಷ ಚೇತನರು ಪೋಷಕರು ಪಾಲ್ಗೊಂಡಿದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 