ವಾಷಿಂಗ್ಟನ್, ಸೆ 16 ಸೆಪ್ಟೆಂಬರ್ 22 ರಂದು ನಡೆಯಲಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಹೌಡಿ, ಮೋದಿ ಬೃಹತ್ ಸಭೆಯಲ್ಲಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾಗವಹಿಸಲಿದ್ದಾರೆ ಎಂದು ಶ್ವೇತ ಭವನ ತಿಳಿಸಿದೆ.
ಇತ್ತೀಚಿನ ದಿನಗಳಲ್ಲಿ ಇದೇ ಮೊದಲ ಬಾರಿಗೆ ಎರಡು ದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರಗಳ ನಾಯಕರು ಜಂಟಿ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಲಿದ್ದಾೆು. ಅಮೆರಿಕದಾದ್ಯಂತ 50 ಸಾವಿರಕ್ಕೂ ಹೆಚ್ಚು ಭಾರತ- ಅಮೆರಿಕ ಸಂಜಾತರು ಇದರಲ್ಲಿ ಪಾಲ್ಗೊಳ್ಳಲು ಹೆಸರು ನೋಂದಾಯಿಸಿಕೊಂಡಿದ್ದಾರೆ.
ಉಭಯ ದೇಶಗಳ ನಡುವಿನ ದೃಢ ಬಂಧ ಒತ್ತಿ ಹೇಳಲು ಇದು ಉತ್ತಮ ಅವಕಾಶ ಎಂದು ಶ್ವೇತ ಭವನದ ಪ್ರಕಟಣೆ ತಿಳಿಸಿದೆ.