ಮುಂಬೈ, ನ 30-ಮಹಾರಾಷ್ಟ್ರದಲ್ಲಿ ಶಿವಸೇನೆ ನೇತೃತ್ವದ ಸರ್ಕಾರಕ್ಕೆ ವಿಧಾನಸಭೆಯಲ್ಲಿ ವಿಶ್ವಾಸಮತ ಪ್ರಾಪ್ತವಾಗಿದೆ.ರಾಜ್ಯಪಾಲರ ಸೂಚನೆ ಮೇರೆಗೆ ಮುಖ್ಯಮಂತ್ರಿ ಉದ್ಧವಠಾಕ್ರೆ ಶನಿವಾರ ಮಂಡಿಸಿದ ವಿಶ್ವಾಸಮತ ನಿರ್ಣಯಕ್ಕೆ ವಿಧಾನಸಭೆಯಲ್ಲಿ ಜಯ ದೊರಕಿದೆ.
ಡಿ 3 ರೊಳಗೆ ತಮಗಿರುವ ಬಹುಮತವನ್ನು ಸಾಬೀತುಪಡಿಸಬೇಕು ಎಂದು ಮುಖ್ಯಮಂತ್ರಿ ಉದ್ಧವಠಾಕ್ರೆ ಅವರಿಗೆ ರಾಜ್ಯಪಾಲ ಭಗತ್ ಸಿಂಗ್ ಕೋಶಿಯಾರಿ ಸೂಚನೆ ನೀಡಿದ್ದರು.
ನಾಟಕೀಯ ಬೆಳವಣಿಗೆಯಲ್ಲಿ ಫಡ್ನವಿಸ್ ಸರ್ಕಾರ ರಾಜೀನಾಮೆ ನೀಡಿದ ನಂತರ ಕಳೆದ ಗುರುವಾರ ಉದ್ಧವಠಾಕ್ರೆ, ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ್ದರು. ಬಹುಮತ ಸಾಬೀತಿಗೆ 145 ಶಾಸಕರ ಬೆಂಬಲ ಅಗತ್ಯವಾಗಿದೆ.