ಉಡುಪಿ, ಮಾ 26, ಕೊರೋನಾ ವೈರಸ್ ಸೋಂಕಿಗೆ ಗುರಿಯಾದವ ಚಿತ್ರಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳುವವರ ವಿರುದ್ಧ ವೈದ್ಯಕೀಯ ಗೌಪ್ಯತೆ ಕಾಯ್ದೆ 1955 ಅಡಿಯಲ್ಲಿ ಪ್ರಕರಣ ದಾಖಲಿಸುವುದಾಗಿ ಉಡುಪಿ ಜಿಲ್ಲಾಧಿಕಾರಿ ಜಿ.ಜಗದೀಶ್ ಎಚ್ಚರಿಕೆ ನೀಡಿದ್ದಾರೆ. ಉಡುಪಿ ಜಿಲ್ಲೆಯಲ್ಲಿ ಮಾರ್ಚ್ 25ರಂದು ಮೊದಲ ಸೋಂಕಿತ ಪ್ರಕರಣ ಪತ್ತೆಯಾಗಿತ್ತು. ನಂತರ, ಈ ರೋಗಿ ಮತ್ತು ಆತನ ಪತ್ನಿಯ ಚಿತ್ರಗಳು ಫೇಸ್ ಬುಕ್ ಮತ್ತು ವಾಟ್ಸ್ ಆ್ಯಪ್ ಸೇರಿದಂತೆ ಇತರ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿತ್ತು. ದುಬೈನಿಂದ ಹಿಂದಿರುಗಿದ್ದ 35 ವರ್ಷದ ವ್ಯಕ್ತಿಯಲ್ಲಿ ಸೋಂಕು ಪತ್ತೆಯಾಗಿತ್ತು.