ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಉಡುಪಿಗೆ ಪ್ರಥಮ ಸ್ಥಾನ; ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹರ್ಷ

Udupi ranks first in the second PUC results; Minister Lakshmi Hebbalkar expressed happy

ಬೆಂಗಳೂರು 08: ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಉಡುಪಿ ಜಿಲ್ಲೆ ರಾಜ್ಯಕ್ಕೆ ಪ್ರಥಮ ಸ್ಥಾನ ಬಂದಿರುವುದಕ್ಕೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹರ್ಷ ವ್ಯಕ್ತಪಡಿಸಿದ್ದಾರೆ.  

ಉಡುಪಿ ಜಿಲ್ಲೆ ಶೈಕ್ಷಣಿಕವಾಗಿ ಸಾಕಷ್ಟು ಮುಂದಿದ್ದು, ಜಿಲ್ಲೆಯ ಮಕ್ಕಳ ಸಾಧನೆ ನಿಜಕ್ಕೂ ಮೆಚ್ಚುವಂಥದ್ದು. ಮಕ್ಕಳ ಭವಿಷ್ಯ ಉಜ್ವಲವಾಗಲಿ. ಪ್ರಥಮ ಸ್ಥಾನ ಪಡೆಯಲು ಶ್ರಮಿಸಿದ ಸಂಬಂಧಿಸಿದ ಅಧಿಕಾರಿಗಳು ಹಾಗೂ ಪೋಷಕರಿಗೆ ಧನ್ಯವಾದಗಳನ್ನು ಸಲ್ಲಿಸುತ್ತೇನೆ ಎಂದು ಸಚಿವರು ತಿಳಿಸಿದ್ದಾರೆ.