ಅಧ್ಯಕ್ಷರಾಗಿ ಉಮರ್ ಬಿಳವಾಡ ಅವಿರೋಧ ಆಯ್ಕೆ
Umar Bilvada elected unopposed as President
ಅಲಮೇಲ 27: ಪಟ್ಟಣ ಪಂಚಾಯಿತಿಯಲ್ಲಿ ಒಟ್ಟು 19 ಸದಸ್ಯರಿದ್ದು, ಗುರುವಾರ ನಡೆದ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆಯಲ್ಲಿ 15 ಸದಸ್ಯರು ಹಾಜರಾಗಿದ್ದರು. ಅಧ್ಯಕ್ಷ ಸ್ಥಾನಕ್ಕೆ ಉಮರ್ ಬಿಳವಾಡ ಅವರು ಒಬ್ಬರೇ ನಾಮಪತ್ರ ಸಲ್ಲಿಸಿದ್ದರಿಂದ, ಕೋರಂ ಭರ್ತಿಯಾಗಿದ್ದ ಹಿನ್ನೆಲೆಯಲ್ಲಿ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಗಿದೆ ಎಂದು ಚುನಾವಣಾಧಿಕಾರಿ ತಿಳಿಸಿದರು. ಮೂವರು ಸದಸ್ಯರು ಗೈರುಹಾಜರಾಗಿದ್ದರು.
ನೂತನ ಅಧ್ಯಕ್ಷ ಉಮರ್ ಬಿಳವಾಡ ಮಾತನಾಡಿ, ಅಲಮೇಲ ಪಟ್ಟಣದ ಜನತೆ ಜಾತಿ-ಭೇದ ಮರೆತು ತಮ್ಮನ್ನು ಅಧ್ಯಕ್ಷರನ್ನಾಗಿ ಆಯ್ಕೆ ಮಾಡಿರುವುದಕ್ಕೆ ಕೃತಜ್ಞತೆ ಸಲ್ಲಿಸಿದರು. ತಮ್ಮ ಅಧಿಕಾರಾವಧಿಯಲ್ಲಿ ಪಟ್ಟಣದ ಸಮಗ್ರ ಅಭಿವೃದ್ಧಿಗೆ ಆದ್ಯತೆ ನೀಡುವುದಾಗಿ ಹೇಳಿದರು. ಊರಿನ ಗ್ರಾಮ ದೇವರಾದ ಪೀರ್ ಹಜರತ್ ಗಲಿಸಾಬ್ ಅವರ ಜೀವನೋದ್ಧಾರ ಕಾರ್ಯ ಕೈಗೊಳ್ಳುವುದು ತಮ್ಮ ಮೊದಲ ಹೆಜ್ಜೆಯಾಗಲಿದೆ ಎಂದು ತಿಳಿಸಿದರು.
ಡಾ. ಸಂಜು ಯಂಟಮನಿ ಮಾತನಾಡಿ, ಪಟ್ಟಣ ಪಂಚಾಯಿತಿ ಅಧ್ಯಕ್ಷರಾಗಿ ಉಮರ್ ಬಿಳವಾಡ ಅವರನ್ನು ಆಯ್ಕೆ ಮಾಡಲಾಗಿದ್ದು, ಅವರ ಅಧಿಕಾರಾವಧಿಯಲ್ಲಿ ಅಲಮೇಲ ಪಟ್ಟಣದ ಅಭಿವೃದ್ಧಿಗೆ ಒತ್ತು ನೀಡಬೇಕು. ಎಲ್ಲ ಸಮುದಾಯದ ಜನರು ತಮ್ಮನ್ನು ಅಧ್ಯಕ್ಷರಾಗಿ ನೋಡುತ್ತಿದ್ದಾರೆ. ಆದ್ದರಿಂದ ಜಾತಿಭೇದ ಮರೆತು ಎಲ್ಲರ ಹಿತಕ್ಕಾಗಿ ಕಾರ್ಯನಿರ್ವಹಿಸಬೇಕು ಎಂದು ಸಲಹೆ ನೀಡಿದರು.
ಇದೇ ಸಂದರ್ಭದಲ್ಲಿ ಮುಂದಿನ ಪಟ್ಟಣ ಪಂಚಾಯಿತಿ ಉಪಾಧ್ಯಕ್ಷರಾಗಿ ಚಂದು ಹಳಮನಿ ಅವರನ್ನು ಘೋಷಿಸಲಾಯಿತು. ಆಯುಬ್ ದೇವರಮನಿ, ಅಶೋಕ ಕೊಳರಿ, ಹಣಮಂತ ಹೂಗಾರ, ಅಪ್ಪು ಶೆಟ್ಟಿ, ಅಲಮೇಲ ಪಟ್ಟಣದ ಗಣ್ಯ ವ್ಯಾಪಾರಿ ಧನಶ್ರೀ ಮಾಲಕ್ ಸೇರಿದಂತೆ ಪಟ್ಟಣ ಪಂಚಾಯಿತಿ ಸದಸ್ಯರು, ಮುಖಂಡರು ಹಾಗೂ ಯುವಕರು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 