ಬೆಳೆ ಸಾಲ ತೀರಿಸಲು ಆಗದೆ ರೈತ ಆತ್ಮಹತ್ಯೆ
Unable to repay crop loan, farmer commits suicide
ಸಿಂದಗಿ 18: ಬೆಳೆ ಸಾಲ ಮಾಡಿದ್ದ ರೈತ ಅದನ್ನು ತೀರಿಸಲು ಆಗದೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ ಮುರುಡಿ ಗ್ರಾಮದಲ್ಲಿ ಮಂಗಳವಾರ ಮಧ್ಯಾಹ್ನ 3:30 ಗಂಟೆಗೆ ನಡೆದಿದೆ.
ರುದ್ರ್ಪ ಬಸಪ್ಪ ಜೇವರ್ಗಿ(40) ಆತ್ಮಹತ್ಯೆ ಮಾಡಿಕೊಂಡ ರೈತನಾಗಿದ್ದಾನೆ. ಮನೆಯಲ್ಲಿ ಯಾರೂ ಇಲ್ಲದ ವೇಳೆ ಬೆಳೆಗಳಿಗೆ ಸಂಪಡಿಸುವ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವುದು ತಿಳಿದು ಬಂದಿದೆ.
ತಾಲೂಕಿನ ಮುರುಡಿ ಗ್ರಾಮದ ಸರ್ವೇ ನಂಬರ್ 121/1ರಲ್ಲಿ 5.18 ಎಕರೆ ಜಮೀನಿದೆ. ಸುಂಗಠಾಣದ ಪಿಕೆಪಿಎಸ್ ಬ್ಯಾಂಕ್ ನಲ್ಲಿ 50 ಸಾವಿರ ರೂಪಾಯಿ ಸಾಲವನ್ನು ಈ ಜಮೀನು ಮೇಲೆ ಪಡೆಯಲಾಗಿದೆ. ಇನ್ನೊಂದು 104/4*1ರಲ್ಲಿ 3.21 ಎಕರೆ ಜಮೀನು ಇದೆ. ಸಿದ್ದೇಶ್ವರ ಪತ್ತಿನ ಬ್ಯಾಂಕಿನಲ್ಲಿ 8 ಲಕ್ಷ ರೂಪಾಯಿ ಸಾಲವಿದೆ. ಇವುಗಳನ್ನು ತೀರಿಸಲಾಗದೆ ಸಾಕಷ್ಟು ತೊಂದರೆ ಅನುಭವಿಸುತ್ತಿದ್ದರಂತೆ.
ಸಾಲಬಾಧೆಗೆ ಬೆಸತ್ತು ರುದ್ರ್ಪ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದು, ಮನೆಗೆ ಬಂದ ಮಗ ಇದನ್ನು ನೋಡಿ ನೆರೆ ಮನೆಯವರ ಸಹಾಯದಿಂದ ಸಿಂದಗಿ ಪಟ್ಟಣದ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಚಿಕಿತ್ಸೆ ಫಲಿಸದೆ ಸಂಜೆ ಸುಮಾರು 5.25ರ ಸುಮಾರಿಗೆ ಮೃತಪಟ್ಟಿದ್ದಾರೆ. ಈ ಸಂಬಂಧ ಸಿಂದಗಿ ಠಾಣೆಯಲ್ಲಿ ದೂರು ದಾಖಲಾಗಿದೆ.
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್
ವಿವಾಹಿತೆಯ ಜೊತೆ ಪಲಾಯನ ಮಾಡಿದ ಯುವಕನ ಮನೆ ಧ್ವಂಸ : ಮಾರಕಾಸ್ತ್ರ ಹಿಡಿದು 50ಕ್ಕು ಹೆಚ್ಚು ಜನರಿಂದ ಕೃತ್ಯ
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ 