ಹೊಸ ದರೋಜಿ ಕೃಷಿ ಸಹಕಾರ ಸಂಘಕ್ಕೆ ನೂತನ ಪದಾಧಿಕಾರಿಗಳ ಅವಿರೋಧ ಆಯ್ಕೆ

ಹೊಸ ದರೋಜಿ ಕೃಷಿ ಸಹಕಾರ ಸಂಘಕ್ಕೆ ನೂತನ ಪದಾಧಿಕಾರಿಗಳ ಅವಿರೋಧ ಆಯ್ಕೆ  Unanimous election of new office-bearers for the New Daroji Agricultural Cooperative Society

ಲೋಕದರ್ಶನ ವರದಿ 

ಕಂಪ್ಲಿ, ಆ.31: ತಾಲ್ಲೂಕಿನ ಸಮೀಪದ ಹೊಸ ದರೋಜಿ ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಮರಿಸ್ವಾಮಿ ನಾಯಕ ಹಾಗೂ ಉಪಾಧ್ಯಕ್ಷರಾಗಿ ಎನ್‌.ವಿ. ಹನುಮಂತಪ್ಪ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.  

ಸೋಮವಾರ ಸಂಘದ ಕಚೇರಿಯಲ್ಲಿ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಯಿತು. ಚುನಾವಣಾಧಿಕಾರಿ ಹಾಗೂ ಮುಖ್ಯ ಕಾರ್ಯನಿರ್ವಾಹಕ ವಿ. ಮಲ್ಲಿಕಾರ್ಜುನ ಅವರ ನೇತೃತ್ವದಲ್ಲಿ ಚುನಾವಣೆ ಪ್ರಕ್ರಿಯೆ ನಡೆಯಿತು. ಎರಡೂ ಸ್ಥಾನಗಳಿಗೆ ತಲಾ ಒಬ್ಬೊಬ್ಬರು ಮಾತ್ರ ನಾಮಪತ್ರ ಸಲ್ಲಿಸಿದ್ದರಿಂದ ಮರಿಸ್ವಾಮಿ ನಾಯಕ ಅಧ್ಯಕ್ಷರಾಗಿ ಹಾಗೂ ಎನ್‌.ವಿ. ಹನುಮಂತಪ್ಪ ಉಪಾಧ್ಯಕ್ಷರಾಗಿ ಅವಿರೋಧ ಆಯ್ಕೆಯಾದರು.  

ಚುನಾವಣೆ ಪ್ರಕ್ರಿಯೆಯಲ್ಲಿ ಸಂಘದ ನಿರ್ದೇಶಕರಾದ ಪಿ.ಎಸ್‌. ಲಿಂಗಪ್ಪ, ವಲಿ ಮಸೀದಿ, ಡಿ.ವಿ. ಮಂಜುನಾಥ, ಕೆ. ರಾಮಾಂಜಿನೇಯ, ವೆಂಕಟೇಶ ಸಾಲುಮನೆ, ಶ್ರೀನಿವಾಸ ಡಿ., ದಾನಪ್ಪ ಎಚ್‌., ತಿಮ್ಮಯ್ಯ ಕೆ., ಶೋಭಾದೇವಿ ಟಿ., ನಾಗಮ್ಮ, ರಮೇಶ್ (ಬ್ಯಾಂಕ್ ಪ್ರತಿನಿಧಿ) ಸೇರಿದಂತೆ ಹಲವರು ಉಪಸ್ಥಿತರಿದ್ದರು.  

ನಂತರ ನೂತನ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರನ್ನು ಮಾಲಾರೆ​‍್ಣ ಮಾಡಿ ಗೌರವಿಸಲಾಯಿತು.  ಈ ಸಂದರ್ಭದಲ್ಲಿ ಸಂಘದ ಮಾಜಿ ಉಪಾಧ್ಯಕ್ಷ ಮಾದಾಪುರ ಮಾರೆಪ್ಪ ಮಾತನಾಡಿ, ದರೋಜಿ ಸೊಸೈಟಿಯನ್ನು ಮತ್ತಷ್ಟು ಅಭಿವೃದ್ಧಿಪಡಿಸುವುದರ ಜತೆಗೆ ಸರ್ಕಾರದ ಸೌಲಭ್ಯಗಳನ್ನು ರೈತರಿಗೆ ಸಕಾಲದಲ್ಲಿ ತಲುಪಿಸುವ ನಿಟ್ಟಿನಲ್ಲಿ ನೂತನ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರು ಎಲ್ಲ ನಿರ್ದೇಶಕರ ಸಹಕಾರದೊಂದಿಗೆ ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸಬೇಕು ಎಂದು ಹೇಳಿದರು.  

ಈ ಸಂದರ್ಭದಲ್ಲಿ ಜಿಪಂ ಮಾಜಿ ಸದಸ್ಯ ವಿ. ಜನಾರ್ದನ, ಸಿಬ್ಬಂದಿಗಳಾದ ವಿ. ಯರಿಸ್ವಾಮಿ, ಕೆ. ಶಿವಕುಮಾರ, ಕೆ. ರಾಮಾಂಜಿನಿ ಸೇರಿದಂತೆ ಸ್ಥಳೀಯ ಮುಖಂಡರು ಹಾಗೂ ರೈತರು ಉಪಸ್ಥಿತರಿದ್ದರು.