ಸಂಸ್ಕಾರಹೀನ ಪ್ಯುಪಿಲ್ ಟ್ರೀ ಕ್ಯಾಂಪಸ್ ಸಮಾಜಕ್ಕೆ ಮಾರಕ: ದರ್ಶನ್ ಹೆಗಡೆ
Uncivilized Pupil Tree Campus is fatal to society: Darshan Hegde
ಲೋಕದರ್ಶನ ವರದಿ
ಬಳ್ಳಾರಿ 18: ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಕಳೆದ 7 ದಶಕಗಳಿಂದ ಶಿಕ್ಷಣ ಕ್ಷೇತ್ರದಲ್ಲಿ ಪರಿವರ್ತನೆ ತರುವ ನಿಟ್ಟಿನಲ್ಲಿ ಕಾಲೇಜು ಕ್ಯಾಂಪಸ್ ನ ವಿದ್ಯಾರ್ಥಿಗಳ ಮಧ್ಯೆ ಕಾರ್ಯನಿರ್ವಹಿಸುತ್ತಿರುವ ಜಗತ್ತಿನ ಅತೀದೊಡ್ಡ ವಿದ್ಯಾರ್ಥಿ ಸಂಘಟನೆಯಾಗಿದೆ. ವಿದ್ಯಾರ್ಥಿ ಸ್ನೇಹಿ ಕ್ಯಾಂಪಸ್ ನಿರ್ಮಾಣ ಮಾಡುವ ಮಹತ್ತರ ಆಶಯವನ್ನು ವಿದ್ಯಾರ್ಥಿ ಪರಿಷತ್ ಹೊಂದಿರುವುದರಲ್ಲದೆ ಆ ದಿಶೆಯಲ್ಲಿ ಕೆಲಸ ಮಾಡುತ್ತಿದೆ.
ಸ್ವಚ್ಚ ಹಾಗೂ ಸ್ವಸ್ಥ ಸಮಾಜ ನಿರ್ಮಾಣಕ್ಕಾಗಿ ನಶಾಮುಕ್ತ ಕ್ಯಾಂಪಸ್ ಎನ್ನುವ ಜಾಗೃತಿ ಅಭಿಯಾನವನ್ನು ಕಳೆದ ಅನೇಕ ವರ್ಷಗಳಿಂದ ಎಬಿವಿಪಿ ಮಾಡುತ್ತಾ ಬಂದಿದೆ.ಆದರೆ ಹಲವು ದಿನಗಳ ಹಿಂದೆ ಬಳ್ಳಾರಿಯ ಪ್ಯುಪಿಲ್ ಟ್ರೀ ಪಿ.ಯು ಕಾಲೇಜಿನ ಆವರಣದಲ್ಲಿ ವಿದ್ಯಾರ್ಥಿನಿಯರು ಮಾದಕ ದ್ರವ್ಯ ಸೇವನೆ ಮಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದೆ. ವಿದ್ಯಾರ್ಥಿ ಪರಿಷತ್ ಎರಡು -ಮೂರು ಬಾರಿ ಕಾಲೇಜಿನ ಆಡಳಿತ ಮಂಡಳಿ ಗಮನಕ್ಕೆ ತಂದರು ಎಚ್ಚೆತ್ತುಕೊಳ್ಳದ ಕಾರಣ ಆಡಳಿತ ಮಂಡಳಿ ವಿರುದ್ದ ಪ್ರತಿಭಟನೆ ಮಾಡಿದ್ದೇವೆ.
ಆ ಸಂದರ್ಭದಲ್ಲಿ ಎಬಿವಿಪಿ ಕಾರ್ಯಕರ್ತರನ್ನು ನಿಂದಿಸಿ ಹಲ್ಲೆಯನ್ನು ಮಾಡಿದ್ದಾರೆ.ಹಾಗಾದರೆ ಆ ವಿದ್ಯಾರ್ಥಿಗಳಿಗೆ ಹೇರಳವಾಗಿ ಹೇಗೆ ಮಾದಕ ವಸ್ತುಗಳ ಪೂರೈಕೆಯಾಗುತ್ತಿದೆ? ಈ ಹಿಂದೆಯು ಆ ಕಾಲೇಜಿನಲ್ಲಿ ಗಾಂಜಾ ಹಾಗೂ ಮಾದಕ ವಸ್ತುಗಳ ಪೂರೈಕೆಯಾಗಿರುವ ಸುದ್ದಿಗಳು ಬರುತ್ತಿದ್ದವು .ವಿದ್ಯಾರ್ಥಿನಿಯರು ಮಧ್ಯೆ ಸೇವನೆ ಮಾಡಿ ಬಾಟಲ್ ಶೌಚಾಲಯದಲ್ಲಿ ಎಸೆದಿರುವ ಪ್ರಕರಣ, ಅದೆ ಕಾಲೇಜಿನ ವಿದ್ಯಾರ್ಥಿಗಳು ಸಹಪಾಠಿ ವಿದ್ಯಾರ್ಥಿನಿಗೆ ಪಾನಿಯದಲ್ಲಿ ಮಾದಕ ವಸ್ತು ಮಿಶ್ರಣ ಮಾಡಿ ಸೇವಿಸಲು ಒತ್ತಾಯಿಸಿ ಅತ್ಯಾಚಾರ ಮಾಡಲು ಪ್ರಯತ್ನಿಸಿದ್ದಾರೆ.
ಈ ರೀತಿ ಅನೇಕ ವಿದ್ಯಾರ್ಥಿ ವಿರೋಧಿ ಚಟುವಟಿಕೆಗಳು ಆ ಕಾಲೇಜಿನಲ್ಲಿ ನಡೆಯುತ್ತಿದ್ದರು ಆಡಳಿತ ಮಂಡಳಿ ಎಚ್ಚೆತ್ತುಕೊಳ್ಳತ್ತಿಲ್ಲ. ಹೀಗಾಗಿ ಆ ಕಾಲೇಜಿನ ಮಾನ್ಯತೆಯನ್ನು ರದ್ದು ಮಾಡಿ ಒಂದು ಮಾದರಿ ನಿರ್ಣಯವನ್ನು ತೆಗೆದುಕೊಳ್ಳಬೇಕೆಂದು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಬಳ್ಳಾರಿ ಆಗ್ರಹಿಸುತ್ತದೆ.ಜೊತೆಗೆ ಎಲ್ಲಾ ಕಾಲೇಜುಗಳಲ್ಲಿ ಮಾದಕ ವಸ್ತುಗಳ ಬಳಕೆಗೆ ಕಡಿವಾಣ ಹಾಕಲು ಹಾಗೂ ಜಾಗೃತಿ ಮೂಡಿಸಲು ವೈದ್ಯರನ್ನೊಳಗೊಂಡ ಸಮಿತಿ ರಚಿಸಿ ನಶಾಮುಕ್ತ ಕ್ಯಾಂಪಸ್ ಮಾಡಲು ಮುನ್ನುಡಿಯನ್ನು ಬರೆಯಬೇಕೆಂದು ಗೌರವಾನ್ವಿತ ರಾಜ್ಯಪಾಲರಿಗೆ ಮನವಿ ಮಾಡಲಾಯಿತು.
ಈ ಸಂದರ್ಭದಲ್ಲಿ ಎಬಿವಿಪಿ ರಾಜ್ಯಕಾರ್ಯದರ್ಶಿ ಶ್ರೀ ದರ್ಶನ್ ಹೆಗಡೆ, ಬಳ್ಳಾರಿ ವಿಭಾಗ ಸಂಘಟನಾ ಕಾರ್ಯದರ್ಶಿ ಶ್ರೀ ನಾಗರಾಜ ಬಟಗೇರಾ, ಜಿಲ್ಲಾ ಸಂಘಟನಾ ಕಾರ್ಯದರ್ಶಿ ಭರತ್.ಟಿ, ಜಿಲ್ಲಾ ಸಂಚಾಲಕರಾದ ಕೆ.ದಿಲಿಪ್ ಕುಮಾರ, ಶರಣಬಸವ ಉಪಸ್ಥಿತರಿದ್ದರು.
ಅನೆಕಲ್ಲು, ಮಳೆ ಅಬ್ಬರಕ್ಕೆ 39 ಕುರಿಗಳ ಸಾವು : ಬೀದಿಗೆ ಬಂತು ಬಡವನ ಬದುಕು
ಮಳೆಯ ಅವಾಂತರ : ನದಿಯಂತಾದ ರಾಷ್ಟ್ರೀಯ ಹೆದ್ದಾರಿ, ವಾಹನಗಳು ಸಿಲುಕಿ ಪರದಾಡಿದ ಪ್ರಯಾಣಿಕರು
ಬೆಳಗಾವಿಯಲ್ಲಿ ಆನೆಕಲ್ಲು ಮಿಶ್ರಿತ ಗಾಳಿ ಮಳೆಯ ಅರ್ಭಟಕ್ಕೆ ಜನಜೀವನ ಅಸ್ತವ್ಯಸ್ತ
ಹಣ ದ್ವಿಗುಣ ಹೆಸರಲ್ಲಿ ಜನರಿಗೆ ವಂಚಿಸುತ್ತಿದ್ದ ಅಂತರಾಜ್ಯ ಖದೀಮರ ಬಂಧನ : ಗೋಕಾಕ ಪೊಲೀಸರ ಕಾರ್ಯಕ್ಕೆ ಎಸ್ ಪಿ ಶ್ಲಾಘನೆ
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ 