ಬೆಂಬಲ ಬೆಲೆ ಯೋಜನೆಯಡಿ : ಎಫ್‌ಎಕ್ಯೂ ಗುಣಮಟ್ಟದ ಕುಸುಬೆ ಹುಟ್ಟುವಳಿ ಖರೀದಿಗೆ ಬೆಂಬಲ ಬೆಲೆ ನಿಗದಿ
Under the Support Price Scheme: FAQ Support price fixed for the purchase of quality safflower seed
ಲೋಕದರ್ಶನ ವರದಿ
ಗದಗ 8 : 2026 ನೇ ಸಾಲಿನ ಹಿಂಗಾರು ಹಂಗಾಮಿನ ಬೆಂಬಲ ಬೆಲೆ ಯೋಜನೆಯಡಿಯಲ್ಲಿ ರೈತರಿಂದ ಎಫ್.ಎ.ಕ್ಯೂ ಗುಣಮಟ್ಟದ ಕುಸುಬೆ ಹುಟ್ಟುವಳಿಯನ್ನು ಖರೀದಿಸಲು ಬೆಂಬಲ ಬೆಲೆ ನಿಗದಿಪಡಿಸಲಾಗಿದೆ. ನೋಂದಣಿ ಪ್ರಕ್ರಿಯೆಯಲ್ಲಿ ರೈತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಲು ಕ್ರಮ ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ ತಿಳಿಸಿದರು. ಜಿಲ್ಲಾಧಿಕಾರಿಗಳ ಸಭಾಭವನದಲ್ಲಿ ಮಂಗಳವಾರ 2026 ನೇ ಸಾಲಿನ ಹಿಂಗಾರು ಹಂಗಾಮಿನ ಬೆಂಬಲ ಬೆಲೆ ಯೋಜನೆಯಡಿಯಲ್ಲಿ ಕುಸುಬೆ ಹುಟ್ಟುವಳಿ ಖರೀದಿಸುವ ಕುರಿತು ಜರುಗಿದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜಿಲ್ಲೆಯ ಪ್ರತಿ ರೈತರಿಂದ ಪ್ರತಿ ಎಕರೆಗೆ 05 ಕ್ವಿಂಟಲ್‌ನಂತೆ ಗರಿಷ್ಟ 20 ಕ್ವಿಂಟಲ್ ಎಫ್.ಎ.ಕ್ಯೂ ಗುಣಮಟ್ಟದ ಕುಸುಬೆ ಖರೀದಿಸಲು ಹಾಗೂ ಕುಸುಬೆ ಖರೀದಿ ಕೇಂದ್ರಗಳಲ್ಲಿ ರೈತರ ಹೆಸರಿನಲ್ಲಿ ವರ್ತಕರು ತರುವ ಕುಸುಬೆ ಉತ್ಪನ್ನವನ್ನು ಖರೀದಿಸದಂತೆ ಹಾಗೂ ಖರೀದಿ ಸಂಸ್ಥೆಗಳು ಯಾವುದೇ ರೀತಿಯ ದುರುಪಯೋಗವಾಗದಂತೆ ಎಲ್ಲ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿಗಳು ಸೂಚಿಸಿದರು.
ಕೃಷಿ ಮಾರಾಟ ಇಲಾಖೆಯ ಸಹಾಯಕ ನಿರ್ದೇಶಕರು ಸುಧಾ ಆರ್ ಬಂಡಿ ಮಾತನಾಡಿ ಎಫ್.ಎ.ಕ್ಯೂ ಗುಣಮಟ್ಟದ ಕುಸುಬೇ ಉತ್ಪನ್ನವನ್ನು ಪ್ರತಿ ಕ್ವಿಂಟಾಲ್‌ಗೆ ರೂ. 6540 ರಂತೆ ನಿಗದಿಪಡಿಸಲಾಗಿದೆ. ಕೇಂದ್ರ ಸರ್ಕಾರದ ಬೆಂಬಲ ಬೆಲೆ ಮಾರ್ಗಸೂಚಿಗಳನ್ವಯ ಸದರಿ ಆದೇಶ ಹೊರಡಿಸಿದ ದಿನಾಂಕದಿಂದ ರೈತರ ನೋಂದಣಿ ಕಾಲಾವಧಿಯನ್ನು 80 ದಿನಗಳವರೆಗೆ ಹಾಗೂ ಖರೀದಿ ಅವಧಿಯನ್ನು 90 ದಿನಗಳವರಗೆ ನಿಗದಿಪಡಿಸಲಾಗಿದೆ. ನೋಂದಣಿ ಕಾರ್ಯದ ಜೊತೆಗೆ ಖರೀದಿ ಪ್ರಕ್ರಿಯೆಯನ್ನು ಸಹ ಪ್ರಾರಂಭಿಸಿ ಕೇಂದ್ರದಿಂದ ಎನ್.ಸಿ.ಸಿ.ಎಫ್ ಹಾಗೂ ರಾಜ್ಯದಲ್ಲಿ ಕರ್ನಾಟಕ ಸಹಕಾರ ಎಣ್ಣೆ ಬೀಜ ಬೆಳೆಗಾರರ ಮಹಾಮಂಡಳಿ ನಿಯಮಿತ (ಕೆ.ಓ.ಎಫ್) ಬೇಂಗಳೂರು ಸಂಸ್ಥೆಯ ಮೂಲಕ ಖರೀದಿಸಲು ಆದೇಶಿಸಲಾಗಿದೆ ಎಂದು ತಿಳಿಸಿದರು.
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್
ವಿವಾಹಿತೆಯ ಜೊತೆ ಪಲಾಯನ ಮಾಡಿದ ಯುವಕನ ಮನೆ ಧ್ವಂಸ : ಮಾರಕಾಸ್ತ್ರ ಹಿಡಿದು 50ಕ್ಕು ಹೆಚ್ಚು ಜನರಿಂದ ಕೃತ್ಯ 