ಐದು ಕ್ಲಸ್ಟರ್ ಶಾಲೆಗಳ ವಿದ್ಯಾರ್ಥಿಗಳಿಗೆ ಸಮವಸ್ತ್ರ ವಿತರಣೆ
Uniform distribution to students of five cluster schools
ಲೋಕದರ್ಶನ ವರದಿ
ಕಂಪ್ಲಿ 29: ತಾಲ್ಲೂಕಿನಲ್ಲಿ ಶಾಲೆಗಳ ಆರಂಭಕ್ಕೆ ಕ್ಷಣಗಣನೆ ಆರಂಭವಾಗಿದ್ದು, ಸರ್ಕಾರವೂ ಶಾಲೆಗಳ ಆರಂಭಕ್ಕೂ ಮುನ್ನವೇ ಸಮವಸ್ತ್ರ ಮತ್ತು ಪಠ್ಯ ಪುಸ್ತಕಗಳನ್ನು ವಿತರಣೆ ಮಾಡಲು ಸೂಚನೆ ನೀಡಿದ ಹಿನ್ನೆಲೆಯಲ್ಲಿ ಕಂಪ್ಲಿ ತಾಲೂಕಿನಲ್ಲಿ 5 ಕ್ಲಸ್ಟರ್ ಗಳ ಶಾಲೆಗಳಿಗೆ ಸಮೂಹ ಸಂಪನ್ಮೂಲ ವ್ಯಕ್ತಿಗಳಾದ ಎ.ಎಸ್.ಭೂಮೇಶ್ವರ, ರೇಣುಕಾರಾಧ್ಯ,ಗಂಗಾಧರ ಅವರು ತಾಲ್ಲೂಕಿನ ಶಾಲೆಗಳ ಮುಖ್ಯ ಶಿಕ್ಷಕರಿಗೆ ಹಸ್ತಾಂತರ ಮಾಡಿದರು.
ತಾಲ್ಲೂಕಿನ 5 ಕ್ಲಸ್ಟರ್ ವ್ಯಾಪ್ತಿಯ 11,111 ಮಕ್ಕಳಿಗೆ ಒಂದು ಜೊತೆ ಸಮವಸ್ತ್ರಗಳನ್ನು ವಿತರಿಸಲಾಗಿದ್ದು, ಶೀಘ್ರದಲ್ಲಿಯೇ ಇನ್ನೊಂದು ಜೊತೆ ಸಮವಸ್ತ್ರಗಳನ್ನು ವಿತರಿಸಲಾಗುವುದು. ಶಾಲೆ ಆರಂಭಕ್ಕೂ ಮುನ್ನವೇ ವಿದ್ಯಾರ್ಥಿಗಳಿಗೆ ಪಠ್ಯ ಪುಸ್ತಕಗಳನ್ನು ಸಹಿತ ವಿತರಿಸಲಾಗುವುದು ಎಂದರು. ಸಂದರ್ಭದಲ್ಲಿ ತಾಲ್ಲೂಕಿನ 5 ಕ್ಲಸ್ಟರ್ ಗಳ ಸಮೂಹ ಸಂಪನ್ಮೂಲ ವ್ಯಕ್ತಿಗಳು, ವಿವಿಧ ಶಾಲೆಗಳ ಮುಖ್ಯಗುರುಗಳು ಉಪಸ್ಥಿತರಿದ್ದರು.
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 