ಧಾರವಾಡದ ಖೇಲೋ ಇಂಡಿಯಾ ತರಬೇತಿ ಕೇಂದ್ರದ ಕ್ರೀಡಾಪಟುಗಳಿಗೆ ಸಮವಸ್ತ್ರ ವಿತರಣೆ

ಧಾರವಾಡದ ಖೇಲೋ ಇಂಡಿಯಾ ತರಬೇತಿ ಕೇಂದ್ರದ ಕ್ರೀಡಾಪಟುಗಳಿಗೆ ಸಮವಸ್ತ್ರ ವಿತರಣೆ Uniforms distributed to athletes at Khelo India Training Centre in Dharwad

               ಧಾರವಾಡ 24: ಮಾತೃಸ್ವರೂಪಿ ಗಂಗವ್ವ ಬಳ್ಳಾರಿ ಸೇವಾ ಸಂಸ್ಥೆ, ಹುಬ್ಬಳ್ಳಿ ಹಾಗೂ ಶ್ರೀ ಕಾರುಣ್ಯ ಸ್ಪೋರ್ಟ್ಸ ಅಸೋಸಿಯೇಷನ್ ಇವರ ಸಂಯುಕ್ತ ಆಶ್ರಯದಲ್ಲಿ ಧಾರವಾಡದಲ್ಲಿರುವ ಖೇಲೋ ಇಂಡಿಯಾ ತರಬೇತಿ ಕೇಂದ್ರಕ್ಕೆ ಭೇಟಿ ನೀಡಿ, ಅಲ್ಲಿನ ಕ್ರೀಡಾಪಟುಗಳಿಗೆ ಉಚಿತವಾಗಿ ಸಮವಸ್ತ್ರ ವಿತರಣೆ ಕಾರ್ಯಕ್ರಮವನ್ನು ಇತ್ತೀಚೆಗೆ ಯಶಸ್ವಿಯಾಗಿ ಆಯೋಜಿಸಲಾಯಿತು. ಕಾರ್ಯಕ್ರಮದಲ್ಲಿ ಸಂಸ್ಥೆಯ ಗೌರವಾನ್ವಿತ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ಸದಸ್ಯರು ಉಪಸ್ಥಿತರಿದ್ದು, ಕ್ರೀಡಾಪಟುಗಳನ್ನು ಉತ್ತೇಜಿಸುವ ಉದ್ದೇಶದಿಂದ ಸಮವಸ್ತ್ರಗಳನ್ನು ವಿತರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಸಂಸ್ಥೆಯ ಪ್ರತಿನಿಧಿಗಳು, “ಯುವ ಕ್ರೀಡಾಪಟುಗಳಿಗೆ ಅಗತ್ಯವಾದ ಪ್ರೋತ್ಸಾಹ ಹಾಗೂ ಬೆಂಬಲ ನೀಡುವುದು ನಮ್ಮ ಸಂಸ್ಥೆಯ ಮುಖ್ಯ ಧ್ಯೇಯವಾಗಿದ್ದು, ಖೇಲೋ ಇಂಡಿಯಾ ಯೋಜನೆಯಡಿ ತರಬೇತಿ ಪಡೆಯುತ್ತಿರುವ ಪ್ರತಿಭೆಗಳು ರಾಜ್ಯ ಮತ್ತು ರಾಷ್ಟ್ರಮಟ್ಟದಲ್ಲಿ ಸಾಧನೆ ಮಾಡಬೇಕು” ಎಂದು ಆಶಯ ವ್ಯಕ್ತಪಡಿಸಿದರು.

              ತರಬೇತಿ ಕೇಂದ್ರದ ತರಬೇತುದಾರರು ಹಾಗೂ ಕ್ರೀಡಾಪಟುಗಳು ಸಂಸ್ಥೆಯ ಸಾಮಾಜಿಕ ಕಾಳಜಿ ಹಾಗೂ ಕ್ರೀಡಾ ಕ್ಷೇತ್ರಕ್ಕೆ ನೀಡುತ್ತಿರುವ ಸಹಕಾರವನ್ನು ಶ್ಲಾಘಿಸಿ, ಸಮವಸ್ತ್ರ ವಿತರಣೆಗೆ ಹೃತ್ಪೂರ್ವಕ ಧನ್ಯವಾದಗಳನ್ನು ಸಲ್ಲಿಸಿದರು.ಕಾರ್ಯಕ್ರಮದ ಯಶಸ್ಸಿಗೆ ಶ್ರಮಿಸಿದ ಸಂಸ್ಥೆಯ ಎಲ್ಲಾ ಪದಾಧಿಕಾರಿಗಳು ಹಾಗೂ ಸದಸ್ಯರಿಗೆ ಕೃತಜ್ಞತೆಗಳನ್ನು ಸಲ್ಲಿಸಲಾಯಿತು. ಇಂತಹ ಸೇವಾ ಮನೋಭಾವದ ಕಾರ್ಯಕ್ರಮಗಳು ಕ್ರೀಡಾಪಟುಗಳಲ್ಲಿ ಆತ್ಮವಿಶ್ವಾಸ ಹೆಚ್ಚಿಸಿ, ಉತ್ತಮ ಸಾಧನೆಗೆ ಪ್ರೇರಣೆಯಾಗುತ್ತವೆ ಎಂದು ಅಭಿಪ್ರಾಯ ವ್ಯಕ್ತವಾಯಿತು. ಸದಾನಂದ ಹ ಅಮರಾಪೂರ ಸಹಾಯಕ ನಿರ್ದೇಶಕರು ಯುವ ಜನ ಮತ್ತು ಕ್ರೀಡಾ ಇಲಾಖೆ ಧಾರವಾಡ, ಕಾರ್ಯಕ್ರಮದಲ್ಲಿ ಸಂಸ್ಥೆಯ ಗೌರವಾನ್ವಿತ ಅಧ್ಯಕ್ಷರು ಮಲ್ಲಪ್ಪ ತಡಸದ, ಅಧ್ಯಕ್ಷರು ಮುತ್ತಣ್ಣ ಸುರಪುರ. ಅರ್ಜುನ್ ದೊಡ್ಮನಿ, ಖೇಲೋ ಇಂಡಿಯಾ ತರಬೇತಿದಾರರು ಸಕ್ಕುಬಾಯಿ ಚಿಕ್ಕಣ್ಣವರ್, ಪದಾಧಿಕಾರಿಗಳು ಚಂದ್ರಶೇಖರ್ ಬಳ್ಳಾರಿ, ಸಂತೋಷ್ ಹಾನಗಲ್, ಪ್ರಭು ಪೂಜ್ಜನವರ್ , ತಿಮ್ಮಣ್ಣ ಂ ಸುರಪುರ, ಬಸವರಾಜ ಹೂಗಾರ್ ತಿಮ್ಮಣ್ಣ ಓ ಸುರಪುರ, ರೋಹಿತ್ ನರಸುಣಗಿ, ಈ ಈ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.